ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Written by Ramlinganna

Published on:

Three days rain : ರಾಜ್ಯದ ಕೆಲವೆಡೆ ಬುಧವಾರದಿಂದ ಮುಂದಿನ ಒಂದು ವಾರ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬುಧವಾರ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ರಾಯಚೂರು ಸೇರಿದಂತೆ ವಿವಿಧೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವೆಡೆ ಗುರುವಾರ ಮತ್ತು ಶುಕ್ರವಾರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಂದು ಅಥವಾ ಎರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುರುವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಐದು ದಿನಗಳ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2 ರಿಂದ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದ್ದು ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ದೊಡ್ಡ ಬದಲಾವಣೆಯಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

Three days rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ನಿಮ್ಮ ಜಮೀನಿನ ಪೋಡಿ ನಕ್ಷೆ ಮೊಬೈಲ್ ನಲ್ಲಿ ಪಡೆಯುವುದು ಹೇಗೆ ಇಲ್ಲಿದೆ ಮಾಹಿತಿ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Leave a Comment