Kisan credit card apply : ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯಲು ಕಿಸಾನ್ ಕ್ರೇಡಿಟ್ ಕಾರ್ಡ್ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕೊಪ್ಪಳ ಜಿಲ್ಲೆಯ ರೈತರಿಂದ ಮೀನುಗಾರಿಕೆ ಚಟುವಟಿಕೆ ಉತ್ತೇಜಿಸುವ ಹಾಗೂ ಮೀನುಗಾರರು ಮತ್ತು ಮೀನು ಕೃಷಿಕಿರಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ವಿತರಿಸಲು ಅರ್ಜಿ ಆಹ್ವಾನಿಸಿದೆ.
ಕೊಪ್ಪಳ, ಕುಕನೂರು ಹಾಗೂ ಯಲಬುರ್ಗಾ ತಾಲೂಕಿನ ವ್ಯಾಪ್ತಿಯ ಮೀನುಗಾರರು ಹಾಗೂ ಮೀನು ಕೃಷಿಕರು ಈ ಯೋಜನೆಯ ಸೌಲಭ್ಯ ಪಡೆಯಬಹುದು. ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುವ ಮೀನುಗಾರಿಕೆ ಕ್ಷೇತ್ರ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಮೀನುಗಾರರ ಸಹಕಾರ ಸಂಘಗಳ ಸದಸ್ಯರು, ವೃತ್ತಿಪರ ಮೀನುಗಾರರು ಹಾಗೂ ಆಸಕ್ತ ಮೀನು ಕೃಷಿಕರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ, ಪ್ಯಾನ್ ಕಾರ್ಡ್, ಪ್ರತಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಂದ ಮೀನುಗಾರಿಕೆ ನಡೆಸುತ್ತಿರುವ ಕುರಿತು ಪಡೆದ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ ಕಡ್ಡಾಯವಾಗಿ ಲಗತ್ತಿಸಬೇಕು. ಆಸಕ್ತರು ತಮ್ಮ ಅರ್ಜಿ ಮೇ 30 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಕೆಗೆ ಕೊಪ್ಪಳದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kisan credit card apply ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು ?
ಕೃಷಿಕರು, ಪಶುಪಾಲಕರು ಮತ್ತು ಮೀನುಗಾರರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ರೈತರು ಸ್ವಂತ ಜಮೀನು ಹೊಂದಿರಬೇಕು. (ಭೂಮಿ ಇಲ್ಲದ ರೈತರು ಗೇಣಿದಾರರಾಗಿರಬಹುದು.) ಅರ್ಜಿದಾರರ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 75 ವರ್ಷಗಳ ನಡುವೆ ಇರಬೇಕು.
ಭರ್ತಿ ಮಾಡಿದ ಅರ್ಜಿ ನಮೂನೆ ಮತ್ತು 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹೊಂದಿರಬೇಕು. ಪಹಣಿ ಪತ್ರಿಕೆ ಮತ್ತು ಭೂಮಿಯ ದಾಖಲೆ ಗಳು ಹೊಂದಿರಬೇಕು.
ಕಿಸಾನ್ ಕ್ರೇಡಿಟ್ ಅರ್ಜಿ ಮೊಬೈಲ್ ನಲ್ಲಿ ಪಡೆಯಬೇಕು ?
ರೈತರು ಕಿಸಾನ್ ಕ್ರೇಡಿಟ್ ಕಾರ್ಡ್ ಅರ್ಜಿಯನ್ನು ಮೊಬೈಲ್ ನಲ್ಲಿ ಪಡೆಯಲು ಈ ಲಿಂಕ್ ಮೇಲೆ
https://pmkisan.gov.in/
ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು Download KCC form ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಕೆಸಿಸಿ ಫಾರ್ಮ್ ತೆರೆದುಕೊಳ್ಳುತ್ತದೆ. ಅದನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು.
ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ನೀವು ಯಾವ ಬ್ಯಾಂಕ್ ಅಕೌಂಟ್ ಹೊಂದಿರುತ್ತೀರೋ ಅಲ್ಲಿ ಅರ್ಜಿ ನೀಡಿ ಕಿಸಾನ್ ಕ್ರೇಡಿಟ್ ಕಾರ್ಡ್ ಪಡೆದುಕೊಳ್ಳಬಹುದು. ಅಥವಾ ಬ್ಯಾಂಕ್ ನಲ್ಲಿಯೂ ಕಿಸಾನ್ ಕ್ರೇಡಿಟ್ ಕಾರ್ಡ್ ನ್ನು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಸಂಪರ್ಕಿಸಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಪ್ರಯೋಜನಗಳು
ಕೃಷಿ ಉಪಕರಣಗಳು, ಬೀಜಗಳು ಹಾಗೂ ರಸಗೊಬ್ಬರಗಳನ್ನು ಖರೀದಿಸಲು ಅಲ್ಪಾವಧಿಯ ಸಾಲ ಪಡೆಯಬಹುದು. ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ರೈತರಿಗೆ ಶೇ. 3 ರಷ್ಟು ಬಡ್ಡಿ ಸಹಾಯಧನ ಸಿಗಲಿದೆ. ರೈತರು 3 ಲಕ್ಷ ರೂಪಾಯಿಯವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಬಹುದು.
ಏನಿದು ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆ ?
ಕಿಸಾನ್ ಕ್ರೇಡಿಟ್ ಕಾರ್ಡ್ ರೈತರಿಗೆ ಅಲ್ಪಾವಧಿಯ ಸಾಲವನ್ನು ಒದಗಿಸುತ್ತದೆ. ಸಾಲಗಳನ್ನು ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ.
ಕಿಸಾನ್ ಕ್ರೇಡಿಟ್ ಕಾರ್ಡ್ ನಲ್ಲಾದ ಬದಲಾವಣೆ ?
ಕಿಸಾನ್ ಕ್ರೇಡಿಟ್ ಕಾರ್ಡ್ ಯೋಜನೆಯಡಿ 3 ರಿಂದ 5 ಲಕ್ಷ ರೂಪಾಯಿಯವರೆಗೆ ಹೆಚ್ಚಿಸಲಾಗಿದೆ.





