ಇಂದಿನಿಂದ ರಾಜ್ಯದಲ್ಲಿ ನಾಲ್ಕು ದಿನ ಬಿರುಗಾಳಿಯೊಂದಿಗೆ ಮಳೆ ಎಚ್ಚರಿಕೆ

Written by Ramlinganna

Published on:

four days rain :  ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯ ನಿರೀಕ್ಷೆಯಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಹಲವೆಡೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗಂಟೆಗೆ  40- 50 ಕಿ.ಮೀ ವೇಗದಲ್ಲಿ ಗಾಳಿ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ ಮೂರು ದಿನಗಳಲ್ಲಿ ಬೆಂಗಳೂರು ನಗರದಲ್ಲಿ  75 ರಿಂದ 115 ಮಿಲಿ ಮೀಟರ್ ವರೆಗೆ ಜೋರು ಮಳೆ ಸುರಿಯಬಹುದು. ಮೇ 19 ರಂದು 20 ರವರೆಗೆ ಬೆಂಗಳೂರು ನಗರಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಿಸಿದ್ದು, ಅಪಾರ ಪ್ರಮಾಣದ ಹಾನಿ ಉಂಟುಮಾಡಿದೆ.

ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ತೀವ್ರವಾಗಿದ್ದು, ಇನ್ನೂ ನಾಲ್ಕು ದಿನ ಬಿರುಗಾಳಿ ಸಹಿತ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಪ್ರಸ್ತುತ ಹವಾಮಾನವು ಮಾನ್ಸೂನ್ ಮುನ್ನಡೆಗೆ ಪೂರಕ ವಾತಾವರಣ ನಿರ್ಮಿಸಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಕರಾವಳಿ ಭಾಗದಲ್ಲಿ ಮುಂದಿನ 2 ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.

ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮೇ 19 ರಿಂದ 21ರವರೆಗೆ ಗುಡುಗು ಬಿರುಗಾಳಿ ಸಹಿತ ಮಳೆಯಾಗಲಿದೆ. ಆದರೆ ಮಳೆಗಿಂತ ಬಿರುಗಾಳ ಹೆಚ್ಚಿರಸಲಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸೋಮವಾರ ಇಡೀ ದಿನ ಮೋಡ ಮುಸುಕಿದ ವಾತಾವರಣವಿಲಿದ್ದು, ಸಂಜೆ ಬಳಿಕ ಬೆಳ್ತಂಗಡಿ, ಸುಬ್ರಹ್ಮಣ್ಯ ಸಹಿತ ಹಲವೆಡೆ ಸಾಧಾರಣ ಮಳೆಯಾಗಿದೆ. ಅರಬ್ಸಿ ಸಮುದ್ರದಲ್ಲಿ ಗಾಳಿ ವೇಗ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೀನುಗಾರರು ಹೆಚ್ಚಿನ ಜಾಗ್ರತೆ ವಹಿಸುವಂತೆ ತಿಳಿಸಿದೆ.

four days rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

four days rain ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ನಿಮ್ಮ ಜಮೀನನ ಖಾತಾ ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ಈ ಆ್ಯಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು ಮತ್ತೆ ಮತ್ತೆ ಡೌನ್ಲೋಡ್ ಮಾಡುವ ಅವಶ್ಯಕತೆಯಿಲ್ಲ. ಅಥವಾ ಮೇಲೆ ನೀಡಿದ ವರುಣಮಿತ್ರ ನಂಬರಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

Leave a Comment