Koli sakanike tarabeti : ಕೋಳಿ ಸಾಕಾಣಿಕೆ, ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆಗೆ ಉಚಿತವಾಗಿ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಬೀದರ್, ವಿಜಯಪುರ, ಹಾಗೂ ಕೊಪ್ಪಳ ಜಿಲ್ಲೆಯ ರೈತರಿಂದ ವಿವಿಧ ತರಬೇತಿಗೆ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Koli sakanike tarabeti ಕೋಳಿ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಬೀದರ್ ಜಿಲ್ಲೆಯ ರೈತ ಬಾಂಧವರಿಗಾಗಿ ಬೀದರ್ ನ ಜಿಲ್ಲಾ ಕೇಂದ್ರ ಗ್ರಂಥಾಲಯದ ಹಿಂಬಾಗದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಮೇ 25 ರಿಂದ 26 ರವರೆಗೆ ಎಱಡು ದಿನಗಳ ಕಾಲ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಮುಂಚಿತವಾಗಿ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ 9902561957) ನೋಂದಾಯಿಸಿಕೊಳ್ಳಬೇಕು.
ತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರ್ ಕಾರ್ಡ್ ಇತ್ತೀಚಿನ ಎರಡು ಭಾವಚಿತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಆಗಮಿಸಬೇಕು.
ತರಬೇತಿಗೆ 40 ರೈತರಿಗೆ ಅವಕಾಶವಿರುವುದರಿಂದ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಈಗಾಗಲೇ ನಮ್ಮ ಕೇಂದ್ರದಿಂದ ತರಬೇತಿ ಪಡೆದವರಿಗೆ ಅವಕಾಶವಿರುವುದಿಲ್ಲ ಎಂದು ಬೀದರ್ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ತರಬೇತಿಗಳ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.
ಎರೆಹುಳು ಗೊಬ್ಬರ ತಯಾರಿಕೆಗೆ ಅರ್ಜಿ ಆಹ್ವಾನ
ವಿಜಯಪುರ ಜಿಲ್ಲೆಯ ರೈತರಿಂದ ಜೂನ್ 12 ರಿಂದ ಆರಂಭವಾಗುವ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತರಬೇತಿಗೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ರುಡ್ಸೆಟ್ ಸಂಸ್ಥೆ ಅರ್ಜಿ ಆಹ್ವಾನಿಸಿದೆ.
18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ಆಸಕ್ತಿ ಇರುವ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತರು ತಮ್ಮ ಹೆಸರು, ವಿಳಾಸ ಹಾಗೂ ಸಂಪರ್ಕ ವಿವರಗಳನ್ನು ನೋಂದಾಯಿಸಬಹುದಾಗಿದೆ.
ತರಬೇತಿ ಅವಧಿಯಲ್ಲಿ ಹೈನುಗಾರಿಕೆಯ ಮೂಲಭೂತ ಜ್ಞಾನ, ಹಸುಗಳ ಆರೈಕೆ, ಆಹಾರ ನಿರ್ವಹಣೆ, ಹಾಲು ಉತ್ಪಾದನೆ, ಪಶು ಆರೋಗ್ಯ ಸಂರಕ್ಷಣೆ, ಗೋಶಾಲೆ ನಿರ್ವಹಣೆ, ಎರೆಹುಳ ಗೊಬ್ಬರ ತಯಾರಿಕೆ ವಿಧಾನ, ಸಾವಯವ ಕೃಷಿಯ ಮಹತ್ವ, ಗೊಬ್ಬರ ಘಟಕ ಸ್ಥಾಪನೆ ಹಾಗೂ ಸಣ್ಣ ಉದ್ಯಮ ಆರಂಭಿಸುವ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ಇದರಿಂದ ಸ್ವಂತ ಉದ್ಯೋಗ ಆರಂಭಿಸಲು ಅನುಕೂಲವಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ- ಆಸಕ್ತ ಅಭ್ಯರ್ಥಿಗಲು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು, ಅದರ ಫೋಟೋ ತೆಗೆದು ಕೆಳಗಿನ ಮೊಬೈಲ್ ಸಂಖ್ಯೆಗೆ ವ್ಯಾಟ್ಸಪ್ ಮಾಡುವ ಮೂಲಕ ಹೆಸರು ನೋಂದಣಿ ಮಾಡಿಸಬಹುದು. ಮೊದಲು ಅರ್ಜಿ ಸಲ್ಲಿಸುವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಈ ವೆಬ್ಸೈಟ್ ಗೆ www.rsetihaliyal.org ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಆಗುವ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8970145354 ಹಾಗೂ 9483485489 ಗೆ ಸಂಪರ್ಕಿಸಬಹುದು ಎಂದು ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ರುಡಸೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೈನುಗಾರಿಕೆ ಹಾಗೂ ಎರೆಹುಳ ಗೊಬ್ಬರ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ ಜಿಲ್ಲೆಯ ರೈತರಿಂದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ (ರಿ) ಹಳಿಯಾ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವರ್ಷ ವಯೋಮಿತಿಯ ಗ್ರಾಮೀಣ ಭಾಗದ ಆಸಕ್ತ ಅಭ್ಯರ್ಥಿಗಳಿಗಾಗಿ 2026 ರ ಜೂನ್ 12 ರಿಂದ ಆರಂಭವಾಗುವ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ ಭಾಗ್ಯಲಕ್ಷ್ಮೀ ಯೋಜನೆ 18 ವರ್ಷ ಪೂರ್ಣಗೊಂಡ ಮಕ್ಕಳ ಖಾತೆಗೆ ಹಣ ಜಮಾ
ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು,ವಿಳಾಸ, ಜನ್ಮದಿನಾಂಕ ಮತ್ತು ಮೊಬೈಲ್ ಸಂಖ್ಯೆ ಸ್ಪಷ್ಟವಾಗಿ ಬರೆದು, ಅದರ ಫೋಟೋ ತೆಗೆದು ಮೊಬೈಲ್ ಸಂಖ್ಯೆ 9483485489 ಅಥವಾ 8979145354 ಗೆ ವ್ಯಾಟ್ಸ್ ಅಪ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಅಥವಾ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟ್ (ರಿ) ಹಳಿಯಾಳ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





