Housing scheme subsidy get : ವಸತಿ ಯೋಜನೆಯಡಿಯಲ್ಲಿ ಮನೆಯಿಲ್ಲದವರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ಫಲಾಪೇಕ್ಷಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಜಿಗಳನ್ನು ಪಡೆದು ಜಿಲ್ಲಾಧಿಕಾರಿಗಳ ಆಯ್ಕೆ ಸಮಿತಿಯಲ್ಲಿ ಆಯ್ಕೆಗೊಳಿಸಿ ನಿಗಮದ ಕೇಂದ್ರ ಕಚೇರಿಗೆ ಪಟ್ಟಿಯನ್ನು ಕಳುಹಿಸಬೇಕಾಗಿರುವುದರಿಂದ, ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ಫಲಾಪೇಕ್ಷಿಗಳು ಅರ್ಜಿಯನ್ನು ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಿಂದ ಅಥವಾ ಸಂಬಂಧಪಟ್ಟ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್ I/II) ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2026 ರ ಜೂನ್ 4ರ ಸಾಯಂಕಾಲ 5 ಗಂಟೆಯೊಳಗಾಗಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 278621 ಗೆ ಸಂಪರ್ಕಿಸಲು ಕೋರಲಾಗಿದೆ.
Housing scheme subsidy get ವಸತಿ ನಿವೇಶನಕ್ಕೆ ಅರ್ಜಿ ಆಹ್ವಾನ
2018 ರ ವಸತಿರಹಿತ ಮತ್ತು ನಿವೇಶನರಹಿತರ ಸಮೀಕ್ಷೆಯಲ್ಲಿ ಕೈಬಿಟ್ಟು ಹೋದ ಅರ್ಹ ಫಲಾನುಭವಿಗಳನ್ನು ಗ್ರಾಪಂ ಲಾಗಿನ್ ನಲ್ಲಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದೆ. ವಸತಿ ಮತ್ತು ನಿವೇಶನಕ್ಕೆ ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ, ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್ ಅಗತ್ಯ ದಾಖಲಾತಿಗಳು ಹೊಂದಿರಬೇಕು. ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ, ವಸತಿ ಸೌಲಭ್ಯ ಪಡೆದುಕೊಳ್ಳಬಹುದು.
ಸೋಲಾರ್ ಅಳವಡಿಕೆಗೆ ಇಲ್ಲಿ 78 ಸಾವಿರ ರೂಪಾಯಿಯವರೆಗೆ ಸಬ್ಸಿಡಿ ಸಿಗಲಿದೆ
ಮನೆಯ ಮೇಲ್ಛಾವಣಿ ಮೇಲೆ ಸೋಲಾರ್ ಅಳವಡಿಕೆಗೆ ಫಲಾನುಭವಿಗಳಿಗೆ 78 ಸಾವಿರ ರೂಪಾಯಿಯವರೆಗೆ ಸಬ್ಸಿಡಿ ಸಿಗಲಿದೆ.
ಹೌದು, ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ 30 ಸಾವಿರ ರೂಪಾಯಿಯಿಂದ 78 ಸಾವಿರ ರೂಪಾಯಿಯವರೆಗೆ ಸಬ್ಸಿಡಿ ದೊರೆಯಲಿದೆ. ಯಾರು ಅರ್ಜಿ ಸಲ್ಲಿಸಬಹುದು. ಅರ್ಜಿ ಎಲ್ಲಿ ಸಲ್ಲಿಸಬೇಕು. ಸಬ್ಸಿಡಿ ಹೇಗೆ ದೊರೆಯಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ : ಹೊಸ ರೇಶನ್ ಕಾರ್ಡ್, ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
ವಿದ್ಯುತ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಹೋಗುತ್ತಿದೆ. ವಿದ್ಯುತ್ ಬೆಲೆಯಲ್ಲಿ ಉಳಿತಾಯ ಮಾಡಲು ಹಾಗೂ ಹೆಚ್ಚುವರಿ ವಿದ್ಯುತ್ ಎಸ್ಕಾಂಗಳಿಗೆ ಮಾರಾಟ ಮಾಡುವ ಮೂಲಕ ಆದಾಯಗಳಿಸಲು ಸರ್ಕಾರವು ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯನ್ನು ಆರಂಭಿಸಿದೆ. ವಿದ್ಯುತ್ ಉತ್ಪಾದಿಸಿ ಹಣ ಉಳಿಸಿ ಆದಾಯ ಗಳಿಸಿ ಎಂಬ ಉದ್ದೇಶವನ್ನಿಟ್ಟುಕೊಂಡು ಈ ಯೋಜನೆ ಆರಂಭಿಸಲಾಗಿದೆ.
ಗ್ರಾಹಕರು ಗೃಹ ಬಳಕೆಗೆ ಪ್ರತ್ಯೇಕ ಮನೆಗಳಿಗೆ ಸೋಲಾರ್ ಅಳವಡಿಸಬಹುದು. 1 ಕಿ. ವ್ಯಾಟ್ ಗೆ 30 ಸಾವಿರ ರೂಪಾಯಿ, 2 ಕಿ.ವ್ಯಾಟ್ ಗೆ 60 ಸಾವಿರ ರೂಪಾಯಿ ಹಾಗೂ 3 ಕಿ.ವ್ಯಾಟ್ ಗೆ 78 ಸಾವಿರ ರೂಪಾಯಿ ಸಬ್ಸಿಡಿ ದೊರೆಯಲಿದೆ. ಫಲಾನುಭವಿಗಳಿಗೆ ಸಾಲ ಸೌಲಭ್ಯವೂ ಸಿಗಲಿದೆ. ಹೌದು, ಕನಿಷ್ಠ ಶೇ.6.7 ರಿಂದ 7.5 ರೂಪಾಯಿ ಬಡ್ಡಿ ದರದಲ್ಲಿ ಬ್ಯಾಂಕ್ ನಲ್ಲಿ ಸಾಲ ಸೌಲಭ್ಯವೂ ಸಿಗಲಿದೆ.





