ಭಾಗ್ಯಲಕ್ಷ್ಮೀ ಬಾಂಡ್ ಪಡೆದ ಫಲಾನುಭವಿಗಳಿಗೆ ಹಣ ಬಿಡುಗಡೆ

Written by Ramlinganna

Published on:

Bhagyalakshmi amount credit check : ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಾಯಿಸಿದವರು 18 ವರ್ಷ ಪೂರ್ಣಗೊಂಡ ಫಲಾನುಭವಿಗಳು ತಮ್ಮ ಮುಂದಿನ ಶಿಕ್ಷಣಕ್ಕೆ ಆರ್ಥಿಕ ಸಹಾಯಧನ ಪಡೆಯಲು ತಮ್ಮ ಹತ್ತಿರದ ಅಂಗನವಾಡಿ ಕಾರ್ಯಕರ್ತೆಯ ಮೂಲಕ ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಈಗಾಗಲೇ 18 ವರ್ಷ ಪೂರ್ಣಗೊಂಡ ಹೆಣ್ಣುಮಕ್ಕಳಿಗೆ 2006-07ನೇ ಸಾಲಿನಲ್ಲಿ 854 ಫಲಾನುಭವಿಗಳಿಗೆ 32,352 ಗಳಂತೆ ಹಾಗೂ 2007-08ನ ಸಾಲಿನಲ್ಲಿ 263 ಫಲಾನುಭವಿಗಳಿಗೆ 31765 ಗಳಂತೆ ಒಟ್ಟು 1117 ಫಲಾನುಭವಿಗಳಿಗೆ ಎಲ್ಐಸಿ ಸಂಸ್ಥೆಯಿಂದ ನೇರವಾಗಿ ಟಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆಯಾಗಿರುತ್ತದೆ. ಇದೀಗ 2006-07 ಮತ್ತು 2007-08ನೇ ಸಾಲಿನಲ್ಲಿ ಜನಿಸಿದ ಹೆಣ್ಣುಮಕ್ಕಳ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿಯಾಗಿ ಬಾಂಡ್ ಪಡೆದ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿದೆ. ಪರಿಪಕ್ವ ಮೊತ್ತ ಪಡೆಯಲು ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ. ಈ ಯೋಜನೆಯಡಿ ಸೌಲಭ್ಯ ಪಡೆದ ಫಲಾನುಭವಿಗಳು ಮೂಲಕ ಬಾಂಡ್ ಜನನ, ವ್ಯಾಸಂಗ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಹತ್ತಿರದ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಪ್ರತಿ ವರ್ಷ 18 ವರ್ಷ ಪೂರ್ಣಗೊಂಡ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಯೋಜನೆಯ ಪರಿಪಕ್ವ ಮೊತ್ತವನ್ನು ಒದಗಿಸಲಾಗುತ್ತಿದೆ. ಹೆಣ್ಣುಮಕ್ಕಳಿಗೆ ಮುಂದಿನ ಹೆಚ್ಚಿನ ಶಿಕ್ಷಣಕ್ಕಾಗಿ ಆರ್ಥಿಕ ಸಹಾಯಧನ ಒದಗಿಸದಂತಾಗುತ್ತದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ಶಿಲ್ಪಾ ಹಿರೇಮಠ ತಿಳಿಸಿದ್ದಾರೆ.

Bhagyalakshmi amount credit check ಏನಿದು ಭಾಗ್ಯಲಕ್ಷ್ಮೀ ಯೋಜನೆ?

ಬಡನತ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನ ಉತ್ತೇಜಿ,ಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆ ಭಾಗ್ಯಲಕ್ಷ್ಮೀ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಆರ್ಥಿಕ ಸೌಲಭ್ಯವನ್ನು ಹೆಣ್ಣು ಮಗುವಿಗೆ ಅದರ ತಾಯಿ ತಂದೆ ಪೋಷಕರ ಮೂಲಕ ಕೆಲವು ನಿಬಂಧನೆಗಳನ್ನು ಪೂರೈಸಿದಲ್ಲಿ ಹಣ ಜಮೆ ಮಾಡಲಾಗುವುದು.

ಭಾಗ್ಯಲಕ್ಷ್ಮೀ ಯೋಜನೆಗೆ ಯಾರು ಯಾರು ಅರ್ಹತೆ ಪಡೆದಿರುತ್ತಾರೆ?

ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಲ್ಲಿ 31-03-2006 ನ ನಂತರ ಜನಿಸಿದ ಹೆಣ್ಣು ಮಕ್ಕಳು ಈ ಯೋಜನೆಯಡಿ ಫಲಾನುಭವಿಯಾಗಿ ನೋಂದಾಯಿಸಿಕೊಳ್ಳಲು ಅರ್ಹರಿರುತ್ತಾರೆ.

ಇದನ್ನೂ ಓದಿ : ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಲು ಅರ್ಜಿ ಆಹ್ವಾನ

ಮಗು ಜನಿಸಿದ ಒಂದು ವರ್ಷದೊಳಗೆ ಜನನ ಪ್ರಮಾಣ ಪತ್ರವನ್ನು ಒದಗಿಸಿ ನೋಂದಾಯಿಸಲು ಅವಕಾಶವಿತ್ತು.

ಯೋಜನೆಯ ಸೌಲಭ್ಯಗಳನ್ನು ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ಸೀಮಿತಗೊಳಿಸಲಾಗಿದೆ.

ಈ ಯೋಜನೆಯ ಅಡಿಯಲ್ಲಿ ನೋಂದಣಿಯಾದ ಮೊದಲನೇ ಹೆಣ್ಣು ಮಗುವಿನ ಹೆಸರಿನಲ್ಲಿ 19300 ಹಾಗೂ ಅದೇ ಕುಟುಂಬದಲ್ಲಿ 2ನೇ ಹೆಣ್ಣು ಮಗವಿನ ಹೆಸರಿನಲ್ಲಿ 18350 ರೂಪಾಯಿಗಳನ್ನು ಠೇವಣಿ ಇಡಲಾಗುತ್ತದೆ. 18 ವರ್ಷ ಪೂಣಗೊಂಡ ನಂತರದಲ್ಲಿ ಹೆಣ್ಣು ಮಕ್ಕಳು 1 ಲಕ್ಷ ರೂಪಾಯಿ ಹಣ ಪಡೆಯಲು ಅರ್ಹರಿರುತ್ತಾರೆ.

Bhagyalakshmi amount status check  ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಭಾಗ್ಯಲಕ್ಷೀ ಬಾಂಡ್ ಸ್ಟೇಟಸ್ ಚೆಕ್ ಮಾಡಲು ಈ

https://mahitikanaja.karnataka.gov.in/WomenAndChild/Bhagyalakshmi?ServiceId=5673&Type=Table&DepartmentId=3136

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಭಾಗ್ಯಲಕ್ಷ್ಮೀ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ನೀವು ಅಲ್ಲಿ ಅಲ್ಲಿ ನೀವು ನಿಮ್ಮ ಮಗಳ ಹೆಸರಿಗೆ ನೀಡಲಾದ ಭಾಗ್ಯಲಕ್ಷ್ಮೀ ಬಾಂಡ್ ಐಡಿ ನಂಬರ್ ಹಾಕಬೇಕು. ನಂತರ ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ನಿಮ್ಮ ಮಗಳ ಹೆಸರಿಗೆ ಭಾಗ್ಯಲಕ್ಷ್ಮೀ ಬಾಂಡ್ ಯಾವಾಗ ಮಾಡಿಸಲಾಗಿದೆ. ಭಾಗ್ಯಲಕ್ಷ್ಮೀ ಹಣ ಎಷ್ಟು ಬರುತ್ತದೆ. ಯಾವ ದಿನಾಂಕ ನಿಮ್ಮ ಖಾತೆಗೆ ಜಮೆಯಾಗಬಹುದು ಸೇರಿದಂತೆ ಎಲ್ಲಾ ಮಾಹಿತಿ ಮೊಬೈಲ್ ನಲ್ಲೇ ಸಿಗುತ್ತದೆ.

Leave a Comment