Plot purchase subsidy get : ಪ್ಲಾಟ್ ಖರೀದಿ ಮಾಡಲಿಚ್ಚಿಸುವ ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ರಾಯಚೂರು ಜಿಲ್ಲೆಯ, ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಆಶ್ರಯ ಕಾಲನಿಯ ನಿವೇಶನ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತುರ್ವಿಹಾಳ ಗ್ರಾಮದ ವ್ಯಾಪ್ತಿಯಲ್ಲಿ ಬರುವ ತುರ್ವಿಹಾಳ ಪಟ್ಟಣದ ಸರ್ವೆ ನಂಬರ್ 236, ಹಿಸ್ಸಾ ನಂಬರ 4 ರಲ್ಲಿ ಎಕರೆ 6 ಜಮೀನು ಇದ್ದು, ಈ ಜಮೀನಿನಲ್ಲಿ ಆಶ್ರಯ ಯೋಜನೆಯ ಮಾನದಂಡಗಳಂತೆ ವಸತಿ ವಿನ್ಯಾಸವನ್ನು ರಚನೆ ಮಾಡಲಾಗಿದೆ.
ಈ ವಿನ್ಯಾಸದಲ್ಲಿ ಈ ಹಿಂದಿನ ಗ್ರಾಮ ಪಂಚಾಯತ ಅವಧಿಯಲ್ಲಿ 2015 ನೇ ಸಾಲಿನಲ್ಲಿ 66 ಜನ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿದೆ.
ಆಸಕ್ತರು ನಿಗದಿತ ಅರ್ಜಿ ನಮೂನೆ, ತುರ್ವಿಹಾಳ ಪಟ್ಟಣದ ಖಾಯಂ ನಿವಾಸಿಯಾಗಿರಬೇಕು. ಕುಟುಂಬದ ಗಂಡ ಹೆಂಡತಿಯ ಆಧಾರ್ ಕಾರ್ಡ್, ಅರ್ಜಿದಾರರ ಹೆಸರಿನಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, 100 ರೂಪಾಯಿ ಸ್ಟ್ಯಾಂಪ್ ನಲ್ಲಿ ಈ ಹಿಂದೆ ನಾವು ಯಾವುದೇ ನಿವೇಶನ ಅಥವಾ ವಸತಿ ಯೋಜನೆ ಅಡಿಯಲ್ಲಿ ಸರ್ಕಾರದಿಂದ ಸೌಲಭ್ಯ ಪಡೆದಿರುವುದಿಲ್ಲವೆಂದು ಹಾಗೂ ರಾಜ್ಯದ ಯಾವುದೇ ಪ್ರದೇಶದಲ್ಲಿ ಯಾವುದೇ ಪಕ್ಕಾ ಮನೆ ಹೊಂದಿರುವುದಿಲ್ಲ ಎಂದು ನಿವೇಶನ ಇಲ್ಲದ ಬಗ್ಗೆ ನೋಟರಿ ಮಾಡಿದ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ, 2 ಪಾಸ್ ಪೋಟೊದೊಂದಿಗೆ ಜೂನ್ 23 ರೊಳಗಾಗಿ ಈ ಕಚೇರಿಗೆ ಕಚೇರಿ ಸಮಯದಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪಪಂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Plot purchase subsidy get ಚಿತ್ರದುರ್ಗದಲ್ಲಿ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಚಿತ್ರದುರ್ಗ ಜಿಲ್ಲೆಯವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ಸ್ವಂತ ನಿವೇಶನ ಹೊಂದಿದ್ದು, ವಸತಿ ರಹಿತರಾಗಿರುವ ಟೆಂಟ್ ಅಥವಾ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
ಇದನ್ನೂ ಓದಿ ನಿಮ್ಮೂರಿನಲ್ಲಿ ಇಂದು ಮಳೆಯಾಗುವುದೇ? ಈ ವರುಣಮಿತ್ರ ನಂಬರಿಗೆ ಕರೆ ಮಾಡಿ
ಜಿಲ್ಲೆಗೆ ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಒಟ್ಟು 100 ಮನೆಗಳ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲೂಕುಗಳ ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫಲಾನುಭವಿಗಳು ಸ್ವಂತ ನಿವೇಶನ ಹೊಂದಿರುವುದಕ್ಕೆ ಸಂಬಂಧಿಸಿದ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ ಪ್ರತಿ, 2 ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳು ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಖಾತೆಯ ಪಾಸ್ ಬುಕ್ ನಕಲು ಪ್ರತಿಯನ್ನು ಒದಗಿಸಬೇಕಾಗಿರುತ್ತದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳ ಸಮೇತ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊದಲು ಅರ್ಜಿ ಸಲ್ಲಿಸಿದವರಿಗೆ ಲಭ್ಯತೆಯ ಆಧಾರದ ಮೇಲೆ ವಿತರಿಸಲಾಗುವುದು.





