Pm kisan 23rd installment: ಪಿಎಂ ಕಿಸಾನ್ 23 ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗಲಿದೆ ಯಾವ ಯಾವ ರೈತರಿಗೆ ಬಿಡುಗಡೆಯಾಗಲಿದೆ ಹಾಗೂ ಈ 23ನೇ ಕಂತಿನ ಹಣ ಜಮೆಯಾಗಲು ರೈತರೇನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Pm kisan 23rd installment ಪಿಎಂ ಕಿಸಾನ್ ಹಣ ಯಾವಾಗ ಜಮೆ ?
ಪಿಎಂ ಕಿಸಾನ್ ಯೋಜನೆಯ 23 ನೇ ಕಂತಿನ ಹಣ ಇದೇ ತಿಂಗಳು ಜೂನ್ ನಲ್ಲಿ ಜಮೆಯಾಗಲಿದೆ ಎಂದು ಹೇಳಲಾಗುತ್ತಿದೆ. ಹೌದು, ಕೃಷಿ ಚಟುವಟಿಕೆಗೆ ಸಹಾಯವಾಗಲೆಂದು ಜೂನ್ ತಿಂಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.
ಕಳೆದ 22ನೇ ಕಂತಿನ ಹಣವನ್ನು ಮಾರ್ಚ್ ತಿಂಗಳಲ್ಲಿ ಜಮೆ ಮಾಡಲಾಗಿತ್ತು. ಪ್ರತಿ ನಾಲ್ಕು ತಿಂಗಳಿಗೆ ಪಿಎಂ ಕಿಸಾನ್ ಯೋಜನೆಯ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು. ಮಾರ್ಚ್ ತಿಂಗಳ ಪ್ರಕಾರ ಜುಲೈ ತಿಂಗಳಲ್ಲಿ ಜಮೆಯಾಗಬೇಕು. ಆದರೆ ರೈತರ ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಸಹಾಯವಾಗಲೆಂದು ಒಂದು ತಿಂಗಳ ಮೊದಲೇ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಬಹುದು ಎಂದು ಹೇಳಲಾಗುತ್ತಿದೆ.
ಯಾರು ಯಾರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ ?
ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣವನ್ನು ಪಿಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಮಾತ್ರಕ್ಕೆ ಜಮೆ ಮಾಡಲಾಗುತ್ತದೆ ಎಂದು ಹೇಳಲಾಗುವುದಿಲ್ಲ. ಫಲಾನುಭವಿಗಳ ಪಟ್ಟಿಯಲ್ಲಿ ರೈತರ ಹೆಸರು ಇರಬೇಕು. ಫಲಾನಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗ ಹೆಸರು ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ.
ಅಲ್ಲಿ ಕರ್ನಾಟಕ ರಾಜ್ಯ, ಜಿಲ್ಲೆ, ತಾಲೂಕು, ಹೋಬಳಿ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಓಪನ್ ಆಗುತ್ತದೆ.
ಪಿಎಂ ಕಿಸಾನ್ ಜಮೆ ಆಗಲು ಏನು ಮಾಡಿರಬೇಕು ?
ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಜಮೆಯಾಗಬೇಕಾದರೆ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇದಾದ ನಂತರ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್, ಜಮೀನಿನ ಪಹಣಿಯಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು, ವ್ಯತ್ಯಾಸವಿದ್ದರೆ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.
ಆಧಾರ್ ಸೀಡ್ ಆಗಿರಬೇಕು.
ಹೌದು, ಪಿಎಂ ಕಿಸಾನ್ ಯೋಜನೆಗೆ ಆಧಾರ್ ಸೀಡ್ ಆಗಿರಬೇಕು.
ಇದನ್ನೂ ಓದಿ ಟ್ರ್ಯಾಕ್ಟರ್, ಹನಿ ನೀರಾವರಿಗೆ ಸಬ್ಸಿಡಿ ನೀಡಲು ರೈತರಿಂದ ಅರ್ಜಿ ಆಹ್ವಾನ
ನೀವು ಯಾವ ಬ್ಯಾಂಕ್ ಶಾಖೆಯಲ್ಲಿ ಖಾತೆ ಹೊಂದಿರುತ್ತೀರೋ ಆ ಬ್ಯಾಂಕಿನಲ್ಲಿ ಹೋಗಿ ನಿಮ್ಮ ಆಧಾರ್ ಕಾರ್ಡ್ ನೀಡಿ ಆಧಾರ್ ಸೀಡಿ ಮಾಡಿಸಿಕೊಳ್ಳಬೇಕು. ಇದು ಕಡ್ಡಾಯವಾಗಿರುವುದರಿಂದ ರೈತರು ತಪ್ಪದೆ ಆಧಾರ್ ಸೀಡ್ ಮಾಡಿಸಿಕೊಳ್ಳಬೇಕು.
ಪಿಎಂ ಕಿಸಾನ್ ಯೋಜನೆಯ ಯಾವಾಗ ಆರಂಭವಾಗಿದೆ ?
ಪಿಎಂ ಕಿಸಾನ್ ಯೋಜನೆಯ 2019 ರಲ್ಲಿ ಆರಂಭವಾಗಿದೆ. ಈ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ಒಟ್ಟು 22 ಕಂತಿನಲ್ಲಿ 44 ಸಾವಿರ ರೂಪಾಯಿ ಹಣ ರೈತರ ಖಾತೆಗೆ ಜಮೆಯಾಗಿದೆ. ಮುಂದಿನ ಕಂತು ಜೂನ್ ತಿಂಗಳ ಅಂತ್ಯದಲ್ಲಿ ಜಮೆಯಾಗುತ್ತದೆ. ಒಂದು ವೇಳೆ ಜೂನ್ ತಿಂಗಳ ಅಂತ್ಯದಲ್ಲಿ ಜಮೆಯಾಗದಿದ್ದರೆ ಜುಲೈ ತಿಂಗಳ ಮೊದಲ ವಾರದಲ್ಲಿ 9 ಕೋಟಿ ರೈತರ ಖಾತೆಗೆ ಜಮೆಯಾಗಲಿದೆ. ಅಂದರೆ 18 ಸಾವಿರ ಕೋಟಿ ರೂಪಾಯಿ ಏಕಕಾಲದಲ್ಲಿ ಬಿಡುಗಡೆ ಮಾಡಲಾಗುವುದು.





