ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Written by Ramlinganna

Published on:

Anganawadi workers job news : ರಾಜ್ಯದ ವಿವಿಧ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ 6 ಅಂಗನವಾಡಿ ಕೇಂದ್ರಗಳಾದ ಮುತ್ರಾಲಪೇಟೆ ಬಿ, ಉತ್ತನೂರು ಎ, ಮೆಹಬೂಬ್ ನಗರ ಎ, ರೆಹಮತ್ ನಗರ ಬಿ ಮತ್ತು ಸಿ, ಹೈದರೀನಗರ ಇ ಗಳಲ್ಲಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜೂನ್ 30 ರೊಳಗೆ ಅರ್ಜಿ ಸಲ್ಲಿಸಬೇಕು. ಶಿಶು ವಿಹಾರದ ಕೆಲಸಕ್ಕೆ ಪಿಯುಸಿ 2ನೇ ವರ್ಷ ಪಾಸಾಗಿರಬೇಕು. ಈ ವಿದ್ಯಾರ್ಹತೆಯ ಅಭ್ಯರ್ಥಿ ಲಭ್ಯವಿಲ್ಲದಿದ್ದಲ್ಲಿ, ಕನಿಷ್ಠ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿ ಪರಿಗಣಿಸಬಹುದು.

ಗರಿಷ್ಠ 35 ವರ್ಷ, ಶಿಶುವಿಹಾರದ ಸಹಾಯಕ್ಕೆ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿ ಪರಿಗಣಿಸಬಹುದು. ಈ ವಿದ್ಯಾರ್ಹತೆಯ ಅಭ್ಯರ್ಥಿ ಲಭ್ಯವಿಲ್ಲದಿದ್ದಲ್ಲಿ, 7ನೇ ತರಗತಿ ಪಾಸಾಗಿರುವ ಅಭ್ಯರ್ಥಿ ಪರಿಗಣಿಸಬಹುದು. ಮಿತಿ 35 ವರ್ಷ. ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು.

Anganawadi workers job news ಹಾಸನ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನ

ಹಾಸನ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 104 ಅಂಗನವಾಡಿ ಸಹಾಯಕಿಯರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಜೂನ್ 29 ರಂದು ಕೊನೆಯ ದಿನಾಂಕವಾಗಿರುತ್ತದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಿಂದಲೂ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 97 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು 19 ರಿಂದ 35 ವಯೋಮಾನದೊಳಗಿನ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆಫ್ಲೈನ್ ಮೂಲಕ (ಭೌತಿಕವಾಗಿ) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ ಬೈಕ್ ಖರೀದಿಗೆ ಶೇ. 60 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ

ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಮುಚ್ಚಿದ ಲಕೋಟೆಯಲ್ಲಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಜೂನ್ 29 ರ ಸಂಜೆ 5.30 ರೊಳಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಆಫ್ಲೈನ್ ಮೂಲಕ (ಭೌತಿಕವಾಗಿ) ಸಲ್ಲಿಸಬಹುದು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಪಾಂಡವಪೂರ ತಾಲೂಕಿನಿಂದಲೂ ಅರ್ಜಿ ಆಹ್ವಾನ

ಪಾಂಡವಪುಪರ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳನ್ನು ಗುರುತಿಸಲು ಆಫ್ಲೈನ್ (ಭೌತಿಕವಾಗಿ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗೌರವಧನ ಆಧಾರದ ಮೇಲೆ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರನ್ನು ಗುರುತಿಸಲು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 29 ರಂದು ಸಂಜೆ 5.30ಗಂಟೆ ಕೊನೆಯ ದಿನ. ಪಟ್ಟಣ ಸೇರಿದಂತೆ ತಾಲೂಕಿನಲ್ಲಿ 10 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 41 ಸಹಾಯಕಿಯರ ಹುದ್ದೆ ಖಾಲಿ ಇದ್ದು, ಆಸಕ್ತರು ಪಟ್ಟಣದ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಎಲ್ಲಾ ದಾಖಲಾತಿಗಳನ್ನೊಳಗೊಂಡು ಭರ್ತಿ ಮಾಡಿದ ಅರ್ಜಿಯನ್ನು ಲಕೋಟೆಯಲ್ಲಿ ಶಿಶು ಅಭಿವೃದ್ಧಿ ಯೋಜನೆ ಕಚೇರಿಗೆ ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08236 255642 ಗೆ ಸಂಪರ್ಕಿಸಬಹುದು ಎಂದು ಪೂರ್ಣಿಮಾ ಕೋರಿದ್ದಾರೆ.

ಹಾಸನ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಲೂರು ಸಿದ್ದಾಪುರ ಶಿಶು ಅಭಿವೃದ್ಧಿ ಯೆಜನಾ ಕಚೇರಿ ವ್ಯಾಪ್ತಿಯಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗೆ ಆಫ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಲೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಜೂನ್ 30 ರಂದು ಕೊನೆಯ ದಿನಾಂಕವಾಗಿರುತ್ತದೆ. ಅವಶ್ಯಕ ದಾಖಲೆಗಳೊಂದಿಗೆ ಆಲೂರಿನ ಸಿದ್ದಾಪುರ ಅಂಗನವಾಡಿ ಸರ್ವೆ ವ್ಯಾಪ್ತಿಯ 18 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸತಕ್ಕದ್ದು. ಅವಧಿ ಮುಗಿದ ನಂತರ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಆಲೂರು ದೂರವಾಣಿ ಸಂಖ್ಯೆ 9902847504, 8970383966 ಗೆ ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Leave a Comment