ಮನೆ ನಿರ್ಮಿಸಲು ಸಹಾಯಧನ ಬೇಕೆ? ಇಲ್ಲಿದೆ ಮಾಹಿತಿ

Written by Ramlinganna

Published on:

House construction subsidy available : ಖಾಲಿ ನಿವೇಶನ ಹೊಂದಿರುವ ಹಾಗೂ ಮನೆಯಿಲ್ಲದವರು ಮನೆ ಕಟ್ಟಿಸಿಕೊಳ್ಳಲು ಫಲಾನುಭವಿಗೆ ಸಹಾಯಧನ ನೀಡಲು ವಿವಿಧ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಚಿತ್ರದುರ್ಗ, ರಾಯಚೂರು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ.

ಜೂನ್ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ನಿವೇಶನ ಹೊಂದಿದ್ದು, ವಸತಿ ರಹಿತರಾಗಿರುವ ಟೆಂಟ್ ಅಥವಾ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು.

ಜಿಲ್ಲೆಗೆ ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಒಟ್ಟು 100 ಮನೆಗಳ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ. ಅದರಂತೆ ಚಳ್ಳಕೆರೆ ತಾಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಟೆಂಟು ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರು ದಾಖಲಾತಿಗಳೊಂದಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಚಳ್ಳಕೆರೆ ಕಚೇರಿ ಸಂಪರ್ಕಿಸಲು ಕೋರಿದೆ.

House construction subsidy available ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಅರ್ಜಿ ಆಹ್ವಾನ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪುರಸಭೆಯಿಂದ 2025-27ನೇ ಸಾಲಿನ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ  ವಸತಿ ರಹಿತ (ನಿವೇಶನ ರಹಿತ ಒಂಟಿ ಮಹಿಳೆಯರು, ವಿಕಲ ಚೇತನರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್.ಸಿ, ಎಸ್.ಟಿ, ಹಿಂದುಳಿದ ಅಲ್ಪ ಸಂಖ್ಯಾತ ವರ್ಗದವರು ಸ್ವಚ್ಛತಾ ಕಾರ್ಮಿಕರು, ಪಿಎಂ ಸ್ವಾಧಿನಿ ಯೋಜನೆ ಅಡಿ ಗುರುತಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳ ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು ಮತ್ತು ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು ವೆಬ್ಸೈಟ್ ವಿಳಾಸ

https://pmayg.dord.gov.in/netiayHome/Home.aspx

ರಲ್ಲಿ ಅಥವಾ ಸಿಎಸ್ಸಿ ಕೇಂದ್ರಗಳಲ್ಲಿ ಸ್ವತಃ ಅರ್ಜಿಗಳನ್ನು ಜೂನ್ 30 ರೊಳಗಾಗಿ ಸಲ್ಲಿಸಬಹುದು.

ಇದನ್ನೂ ಓದಿ ನಿಮ್ಮ ಹೆಸರಿನಲ್ಲಿರುವ ಜಮೀನು ಹಿಂದೆ ಯಾರ ಯಾರ ಹೆಸರಿನಲ್ಲಿತ್ತು? ಹೀಗೆ ಚೆಕ್ ಮಾಡಿ

ವಸತಿ ರಹಿತರು ನಿವೇಶನ ದಾಖಲೆಗಳಾದ ಹಕ್ಕುಪತ್ರ ಕ್ರಯಪತರ್, ದಾನ ಪತ್ರ, ಉಡುಗೊರೆ ಪತ್ರ , ಖಾತಾ ದಾಖಲೆಗಳನ್ನು ಲಗತ್ತಿಸಿ ಕುಟುಂಬ ಸದಸ್ಯರ ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಮತ್ತು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.

ವಸತಿ ನಿವೇಶನ ರಹಿತರು ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊರತುಪಡಿಸಿ, ಇತರೆ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ  ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಗದಗ ಜಿಲ್ಲೆಯ ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನಲ್ಲಿ 2026-27ನೇ ಸಾಲಿಗೆ ತೋಟಗಾರಿಕಾ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ಯೋಜನೆಗಳಾದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ರಾಷ್ಟ್ರೀಯ ಕೃಷಿ ವಿಸ್ತರಣೆ ಮತ್ತು ತಂತ್ರಜ್ಞಾನ ಅಭಿಯಾನ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಕಾರ್ಯಕ್ರಮಗಳಡಿ ಪ್ರೋತ್ಸಾಹಧನ, ಸಹಾಯಧನ ಸೌಲಭ್ಯಕ್ಕಾಗಿ ಆಸಕ್ತಿ ಹೊಂದಿದ ಘಟಕವಾರು ಪ್ರತ್ಯೇಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 17 ಕೊನೆಯ ದಿನವಾಗಿದೆ. ಆಸಕ್ತ ತೋಟಗಾರಿಕೆ ರೈತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಶಿರಹಟ್ಟಿ ಕಚೇರಿಗೆ ಸಂಪರ್ಕಿಸಬಹುದು.

Leave a Comment