PM Awas yojana benefits : ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಮನೆ ನಿರ್ಮಿಸಿಕೊಳ್ಳಲು ವಿವಿಧ ಜಿಲ್ಲೆಗಳಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಮಹಾನಗರ ಪಾಲಿಕೆಯ ವತಿಯಿಂದ 2026-27ನೇ ಸಾಲಿನ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆ ಅಡಿ ವಸತಿ ರಹಿತ ನಿವೇಶನ ರಹಿತ ಮಹಿಳೆಯರು, ವಿಕಲಚೇತನರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್.ಸಿ, ಎಸ್.ಟಿ ಹಿಂದುಳಿದ ಅಲ್ಪಸಂಖ್ಯಾತ ವರ್ಗದವರು ಸ್ವಚ್ಛತಾ ಕಾರ್ಮಿಕರು, ಪಿಎಂ ಸ್ವಾಧಿನಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು ಮತ್ತು ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು ವೆಬ್ಸೈಟ್ ವಿಳಾಸ
https://pmay-urban.gov.in/
ನಲ್ಲಿ ಅಥವಾ ಸಿ.ಎಸ್ಸಿ ಕೇಂದ್ರಗಳಲ್ಲಿ ಸ್ವತಃ ಅರ್ಜಿಯನ್ನು ಜೂನ್ 30 ರೊಳಗೆ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಪಾಲಿಕೆಯ ಕಚೇರಿಯ ಸಮಯದಲ್ಲಿ ಕಚೇರಿಗೆ ಸಲ್ಲಿಸಬೇಕು. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅವಶ್ಯಕ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು ಎಂದು ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು ತಿಳಿಸಿದ್ದಾರೆ.
PM Awas yojana benefits ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ ಜಿಲ್ಲೆಯಿಂದಲೂ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಕೊಳ್ಳೇಗಾಲನಗರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರಿಗೆ ನೀಡಲಾಗುವ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.
ಕೇಂದ್ರ ಸರ್ಕಾರದ ಯುನಿಫೈಡ್ ವೆಬ್ ಪೋರ್ಟಲ್ ನಲ್ಲಿ ಅಥವಾ ಸಿ.ಎಸ್.ಸಿ, ಗ್ರಾಮ ಒನ್ ಹಾಗೂ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
House construction subsidy available ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಅರ್ಜಿ ಆಹ್ವಾನ
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪುರಸಭೆಯಿಂದ 2025-27ನೇ ಸಾಲಿನ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ ವಸತಿ ರಹಿತ (ನಿವೇಶನ ರಹಿತ ಒಂಟಿ ಮಹಿಳೆಯರು, ವಿಕಲ ಚೇತನರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್.ಸಿ, ಎಸ್.ಟಿ, ಹಿಂದುಳಿದ ಅಲ್ಪ ಸಂಖ್ಯಾತ ವರ್ಗದವರು ಸ್ವಚ್ಛತಾ ಕಾರ್ಮಿಕರು, ಪಿಎಂ ಸ್ವಾಧಿನಿ ಯೋಜನೆ ಅಡಿ ಗುರುತಿಸಲ್ಪಟ್ಟ ಬೀದಿ ಬದಿ ವ್ಯಾಪಾರಿಗಳ ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು ಮತ್ತು ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು ವೆಬ್ಸೈಟ್ ವಿಳಾಸ
https://pmayg.dord.gov.in/netiayHome/Home.aspx
ರಲ್ಲಿ ಅಥವಾ ಸಿಎಸ್ಸಿ ಕೇಂದ್ರಗಳಲ್ಲಿ ಸ್ವತಃ ಅರ್ಜಿಗಳನ್ನು ಜೂನ್ 30 ರೊಳಗಾಗಿ ಸಲ್ಲಿಸಬಹುದು.
ಇದನ್ನೂ ಓದಿ : ಬೆಳೆ ವಿಮೆ ಅರ್ಜಿ ಆಹ್ವಾನ ಯಾವ ಬೆಳೆಗೆ ಎಷ್ಟು ಜಮೆ? ಮಾಹಿತಿ ಇಲ್ಲಿದೆ
ವಸತಿ ರಹಿತರು ನಿವೇಶನ ದಾಖಲೆಗಳಾದ ಹಕ್ಕುಪತ್ರ ಕ್ರಯಪತರ್, ದಾನ ಪತ್ರ, ಉಡುಗೊರೆ ಪತ್ರ , ಖಾತಾ ದಾಖಲೆಗಳನ್ನು ಲಗತ್ತಿಸಿ ಕುಟುಂಬ ಸದಸ್ಯರ ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಮತ್ತು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ವಸತಿ ನಿವೇಶನ ರಹಿತರು ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹೊರತುಪಡಿಸಿ, ಇತರೆ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





