Cow baffelo purchase subsidy : ಹಸು ಎಮ್ಮೆ ಸಾಕಾಣಿಕೆಯಲ್ಲಿ ಆಸಕ್ತಿರುವ ರೈತರಿಗೆ ಹಸು ಎಮ್ಮೆ ಖರೀದಿಗೆ ಸಬ್ಸಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಸಿಇಪಿಎಂಐಜೆಡ್ ಯೋಜನೆಯಡಿ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಣಿಬಾದಿತ ಗ್ರಾಮಗಳಲ್ಲಿ ಎರಡು ಮಿಶ್ರತಳಿ ಹಸು ಹಾಗೂ ಉನ್ನತೀಕರಿಸಿದ ಎಮ್ಮೆ ಸಾಕಾಣಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯನ್ನು ಕೆ.ಎಂ.ಇ.ಆರ್.ಸಿ ಮಾರ್ಗಸೂಚಿಯಂತೆ ಅನುಷ್ಠಾನಗೊಳಿಸಲು ಜಿ.ಪಿ.ಎಲ್.ಎಫ್ ಘಟಕದ ನೋಂದಾಯಿತ ಸಕ್ರೀಯ ಎಸ್.ಎಚ್.ಜಿ ಸದಸ್ಯರು ಇಲಾಖೆ ವೆಬ್ಸೈಟ್
www.vijaynagara.nic.in ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ ಅಥವಾ ಸಂಬಂಧಿತ ಗ್ರಾಮ ಪಂಚಾಯತಿಯ ಜಿ.ಪಿ.ಎಲ್.ಎಫ್ ಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Cow baffelo purchase subsidy ವಿವಿಧ ತರಬೇತಿ ನೀಡಲು ಅರ್ಜಿ ಆಹ್ವಾನ
ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಈ ಕೆಳಕಂಡ ದಿನಾಂಕಗಳಂದು ವಿವಿಧ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ ಆರ್ ಸೆಟ್ ನಿರ್ದೇಶಕರು ತಿಳಿಸಿದ್ದಾರೆ.
ಜುಲೈ 16 ರಿಂದ ಆಗಸ್ಟ್ 16 ರವರೆಗೆ ದ್ವಿಚಕ್ರ ವಾಹನ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಜುಲೈ 15 ರಂದು ಕನೆಯ ದಿನವಾಗಿದೆ. ಜುಲೈ 13 ರಿಂದ 25 ರವರೆಗೆ ಕೃಷಿ ಉದ್ಯಮಿ (ಕುರಿ ಮತ್ತು ಆಡು ಸಾಕಾಣಿಕೆ, ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕೆ) ತರಬೇತಿ ನೀಡಲಿದ್ದು, ಅರ್ಜಿ ಸಲ್ಲಿಕೆಗೆ ಜುಲೈ 12 ರಂದು ಕೊನೆಯ ದಿನವಾಗಿದೆ.
ಜುಲೈ 25 ರಂದು ಆಗಸ್ಟ್ 8 ರವರಗೆ ಸಿಸಿಟಿವಿ, ಇನ್ಸ್ಟಾಲೇಶನ್ ಮತ್ತು ಸರ್ವೀಸ್, ಸ್ಮೋಕ್ ಡಿಟೇಕ್ಟರ್ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗ ಜುಲೈ 24 ರಂದು ಕೊನಯ ದಿನವಾಗಿದೆ. ಜುಲೈ 20 ರಿಂದ ಆಗಸ್ಟ್ 20 ರವರೆಗೆ ಎಲೆಕ್ಟ್ರಿಕ್ ಮೋಟಾರ್, ರಿವೈಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ಸರ್ವೀಸ್ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಕೆಗೆ ಜುಲೈ 19 ಕೊನೆಯ ದಿನವಾಗಿದೆ.
ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ಕನಿಷ್ಠ ಕನ್ನಡ ಓದಲು ಮತ್ತು ಬರೆಯಲು ಬರಬೇಕು. ವಯೋಮಿತಿ 18 ರಿಂದ 50 ವರ್ಷದೊಳಗಿನ ಬಿಪಿಎಲ್, ಅಂತ್ಯೋದಯ ರೇಷನ್, ಎಮ್.ಜಿ.ಎನ್.ಆರ್.ಇ.ಜಿ.ಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9900135705, 7019939996, 9901694389, 9901098123 ಹಾಗೂ 9448994585 ಗಳಿಗೆ ಸಂಪರ್ಕಿಸಲು ಕೋರಲಾಗಿದೆ ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿದೆ.
ಬೆಳೆ ವಿಮೆಗೆ ಅರ್ಜಿ ಆಹ್ವಾನ
ಹಿರೇಕೆರೂರ ಹಾಗೂ ರಟ್ಟಿಹಳ್ಳಿ ತಾಲೂಕಿನ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ ಬೆಳೆ ವಿಮೆ ಮಾಡಿಸಿದ ನಂತರ ಹಣ ಜಮೆಯಾಗಲು ರೈತರೇನು ಮಾಡಬೇಕು?
ತೋಟಗಾರಿಕೆ ಬೆಳೆಗಳಾದ ಅಡಕೆ, ಮಾವು, ಶುಂಠಿ, ಹಸಿ ಮೆಣಸಿನಕಾಯಿ ಬೆಳೆಗಳಿಗೆ ಅಧಿಸೂಚಿಸಲಾಗಿದೆ. ರೈತರು ಬೆಳೆ ವಿಮೆ ಮಾಡಲು ಜುಲೈ 31 ಕೊನೆಯ ದಿನವಾಗಿದೆ.
ಆಸಕ್ತಿಯಿಂದ ತೋಟಗಾರಿಕೆ ಬೆಳೆ ಸಮೀಕ್ಷೆಯನ್ನು ಕಡ್ಡಾಯವಾಗಿ ಅಥವಾ ಗ್ರಾಮದ ಖಾಸಗಿ ಬೆಳೆ ಸಮೀಕ್ಷೆಗಾರರನ್ನು ಕರೆದುಕೊಂಡು ಹೋಗಿ ಪ್ರತಿ ಸರ್ವೆ ನಂಬರವಾರು ತಾವು ಬೆಳೆದ ಪ್ರತಿಯೊಂದು ಬೆಳೆಯನ್ನು ಬೆಳೆ ಸಮೀಕ್ಷೆ ಮೂಲಕ ನೋಂದಣಿ ಮಾಡಬೇಕು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.





