Pradhanmantri fasal bima yojana: ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳಾದ ತೊಗರಿ, ಹೆಸರು, ಉದ್ದು, ಹತ್ತಿ ಸೂಯಾ ಅವರೆ ಹಾಗೂ ಇತರೆ ಎಲ್ಲಾ ಬೆಳೆಗಳಿಗೆ ಬೆಳೆ ವಿಮೆಗಾಗಿ ನೋಂದಾಯಿಸಿಕೊಳ್ಳಬೇಕೆAದು ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹಾಗೂ ಜಂಟಿ ಕೃಷಿ ನಿರ್ದೇಶಕರಾದ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.
ರೈತರು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಪಹಣಿ, ಮೊಬೈಲ್ ಸಂಖ್ಯೆಯೊAದಿಗೆ ತಮ್ಮ ಹತ್ತಿರದ ಪೋಸ್ಟ್ ಆಫೀಸ್, ಬ್ಯಾಂಕ್, ಗ್ರಾಮ್-ಒನ್ ಅಥವಾ ಸಿ.ಎಸ್.ಸಿ. ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅಥವಾ ಇಂಡಸ್ ಇಂಡ್ ಜನರಲ್ ಇನ್ಸೂರೆನ್ಸ್ ಕಂಪನಿ ಪ್ರತಿನಿಧಿಯನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬೇಕು. ಜಿಲ್ಲೆಯ ರೈತರು ಕೊನೆಯ ದಿನಾಂಕದವರೆಗೆ ಕಾಯದೇ, ಮುಂಚಿತವಾಗಿ ತಮ್ಮ ಬೆಳೆವಿಮೆ ನೋಂದಾಯಿಸಿಕೊಳ್ಳಬೇಕು.
Pradhanmantri fasal bima yojana ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು?
ನಿರ್ಧರಿತ ಬೆಳೆಗಳ ವಿವರ ಹಾಗೂ ರೈತರು ಪ್ರತಿ ಹೆಕ್ಟೇರ್‌ಗೆ ಪಾವತಿಸಬೇಕಾದ ಮೊತ್ತದ ವಿಮಾ ಮೊತ್ತದ ವಿವರ ಇಂತಿದೆ: ಮೆಕ್ಕೆಜೋಳ (ಮಳೆ ಆಶ್ರಿತ) ಬೆಳೆಗೆ 1350 ರೂ., ತೊಗರಿ (ನೀರಾವರಿ) ಬೆಳೆಗೆ 1206 ರೂ., ತೊಗರಿ (ಮಳೆ ಆಶ್ರಿತ) 1152 ರೂ., ಮೆಕ್ಕೆಜೋಳ (ನೀರಾವರಿ) ಬೆಳೆಗೆ 1524 ರೂ., ಹತ್ತಿ (ನೀರಾವರಿ) ಬೆಳೆಗೆ 4320 ರೂ., ಹತ್ತಿ (ಮಳೆ ಆಶ್ರಿತ) 2985 ರೂ., ಸಜ್ಜೆ (ಮಳೆ ಆಶ್ರಿತ) ಬೆಳೆಗೆ 696 ರೂ., ಎಳ್ಳು (ಮಳೆ ಆಶ್ರಿತ) ಬೆಳೆಗೆ 638 ರೂ., ಸೋಯಾಬೀನ್ (ಮಳೆ ಆಶ್ರಿತ) ಬೆಳೆಗೆ 944 ರೂ. ವಿಮಾ ಮೊತ್ತ ಇರುತ್ತದೆ. ಈ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2026ರ ಜುಲೈ 31 ರಂದು ಕೊನೆಯ ದಿನವಾಗಿದೆ.
ಇದನ್ನೂ ಓದಿ : ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಹೀಗೆ ಮಾಡಿ ಬೆಳೆ ವಿಮೆ ಪರಿಹಾರ ಪಡೆಯಿರಿ
ಭತ್ತ (ನೀರಾವರಿ) ಬೆಳೆಗೆ 2172 ರೂ., ಈರುಳ್ಳಿ (ನೀರಾವರಿ) 4695 ರೂ., ಸೂರ್ಯಕಾಂತಿ (ಮಳೆ ಆಶ್ರಿತ) 964 ರೂ. ಬೆಳೆಗಳಿಗೆ ವಿಮಾ ಇದ್ದು, ಈ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2026ರ ಆಗಸ್ಟ್ 14 ರಂದು ಕೊನೆಯ ದಿನವಾಗಿದೆ. ಹೆಸರುಕಾಳು (ಮಳೆ ಆಶ್ರಿತ) ಬೆಳೆಗೆ 794 ರೂ., ಉದ್ದು/ ಉದ್ದಿನಕಾಳು (ಮಳೆ ಆಶ್ರಿತ) ಬೆಳೆಗೆ 776 ರೂ.ಹಾಗೂ ಅರಿಶಿಣ ಬೆಳೆಗೆ 8210 ರೂ. ವಿಮಾ ಮೊತ್ತ ಇರುತ್ತದೆ. ಈ ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2026ರ ಜುಲೈ 15 ರಂದು ಕೊನೆಯ ದಿನವಾಗಿದೆ.
ಅತೀವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ನೆರವಿಗೆ ಬರಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಲಸ್ ಬಿಮಾ (ವಿಮಾ) ಯೋಜನೆಯನ್ನು 2026-27ನೇ ಸಾಲಿಗೆ ಸಹ ಜಾರಿಗೆ ತರಲಾಗಿದೆ.
ರೈತರು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಆಯಾ ತಾಲೂಕಿನ ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರವನ್ನು ಹಾಗೂ ಕಲಬುರಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಯಾವ ಬೆಳೆಗೆ ವಿಮೆ ಮಾಡಿಸಿದರೆ ಎಷ್ಟು ವಿಮೆ ಹಣ ಜಮೆಯಾಗುವುದು ಎಂಬುದನ್ನು ಚೆಕ್ ಮಾಡಲು ಈ
https://www.samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ Premium calculation ಮೇಲೆ ಕ್ಲಿಕ್ ಮಾಡಬೇಕು.ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು ಎಂಬ ಮಾಹಿತಿ ಕಾಣಿಸುತ್ತದೆ. ನಂತರ ನೀವು ಬೆಳೆ ಆಯ್ಕೆ ಮಾಡಿಕೊಂಡ ನಂತರ ನಿಮ್ಮ ಜಮೀನು ಎಷ್ಟು ಎಕರೆ ಇದೆ ಎಂಬುದನ್ನು ಅಲ್ಲಿ ನಮೂದಿಸಬೇಕು.ನಂತರ Show Premium ಮೇಲೆ ಕ್ಲಿಕ್ ಮಾಡದಸೆ ಸಾಕು ನಿಮಗೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬ ಮಾಹಿತಿ ಕಾಣಿಸುತ್ತದೆ ನೀವು ಕಟ್ಟು ಹಣ, ಎಷ್ಟು ಎಂಬ ಮಾಹಿತಿಯೂ ಕಾಣಿಸುತ್ತದೆ.





