ಇಂದು ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ? ಇಲ್ಲಿದೆ ಮಾಹಿತಿ

Written by Ramlinganna

Published on:

rain rain orange alert : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ಇಡೀ ದಿವಸ ಮುಸುಕಿದ ಮೋಡ. ಇನ್ನೇನು ಮಳೆಯಾಗುತ್ತದೆ ಎಂದುಕೊಳ್ಳುತ್ತಿರುವಾಗಲೇ ಮೋಡಗಳು ಕಣ್ಮರೆಯಾಗುತ್ತಿವೆ. ಮೋಡವಿದ್ದರೂ ಮಳೆಯಾಗುತ್ತಿಲ್ಲ. ಹೀಗಾಗಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ.

ಆದರೆ ಕೆಲವು ಕಡೆ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಅದರಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬೆಳಗಾವಿ ಸಹಿತ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.

rain rain orange alert  ಎಲ್ಲೆಲ್ಲಿ ಮಳೆಯಾಗಲಿದೆ ?

ಜುಲೇ 8, 9 ಹಾಗೂ 10 ರಂದು ವಿವಿಧ ಜಿಲ್ಲೆಗಳಲ್ಲಿ ಮಲೆಯಾಗಲಿದೆ. ಹೌದು, ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 8 ರಂದು ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

64 ಮಿ.ಮೀ ನಿಂದ 115 ಮಿ.ಮೀ ಭಾರಿ ಮಳೆ ಜೊತೆಗೆ ಅತೀ ಭಾರಿ ಮಳೆಯುವ 115 ಮಿ.ಮೀ ನಿಂದ 204 ಮಿ.ಮೀ ವರೆಗೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಜುಲೈ 9 ಮತ್ತು 10 ರಂದು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 9 ರಂದು ಉತ್ತರ ಒಳನಾಡು ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಜುಲೈ 8 ರಿಂದ 9 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕೆಲವು ಕಡೆ 64 ರಿಂದ 115 ಮಿ.ಮೀ ವರೆಗೂ ಮಳೆಯಾಗುವ ಸಾಧ್ಯತೆಯಿರುವುದರಿಂದ ಯಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ಬೆಳೆ ವಿಮೆ ಮಾಡಿಸಿದ ನಂತರ ಹಣ ಜಮೆಯಾಗಲು ರೈತರೇನು ಮಾಡಬೇಕು?

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ  ಪಡೆಯಬಹುದು.

Leave a Comment