crop insurance last date here : ಮುಂಗಾರು ಹಂಗಾಮಿನ ಬೆಳಗಳಿಗೆ ವಿಮೆ ಮಾಡಿಸಲು ಜುಲೈ 31 ಕೊನೆಯ ದಿನವಾಗಿದೆ. ಹಾಗಾದರೆ ಯಾವ ಯಾವ ಬೆಳೆಗಳಿಗೆ ಜುಲೈ 31ರೊಳೆಗೆ ವಿಮೆ ಮಾಡಿಸಬಹುದು. ಇಲ್ಲಿದೆ ಮಾಹಿತಿ. 2026ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಟಾನಗೊಳಿಸಲು ಇಂಡಸ್ಯಿAಡ ಜನರಲ್ ಇನ್ಸುರೆನ್ಸ ವಿಮಾ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ
ಮುಂಗಾರು ಹಂಗಾಮಿಗೆ ತಾಲೂಕಿನ ಬೆಳೆಗಳ ವಿವರ ಹಾಗೂ ನೊಂದಣಿಗೆ ಕೊನೆಯ ದಿನಾಂಕದ ವಿವರ ಇಂತಿದೆ. ತೊಗರಿ (ಮಳೆ ಆಶ್ರಿತ), ತೊಗರಿ (ನೀರಾವರಿ), ಹತ್ತಿ (ಮಳೆ ಆಶ್ರಿತ), ಹತ್ತಿ (ನೀರಾವರಿ), ಎಳ್ಳು (ಮಳೆ ಆಶ್ರಿತ), ಸಜ್ಜೆ (ಮಳೆ ಆಶ್ರಿತ), ಮೆಕ್ಕೆಜೋಳ (ಮಳೆ ಆಶ್ರಿತ), ಮೆಕ್ಕೆಜೋಳ (ನೀರಾವರಿ), ಸೋಯಾಬೀನ್ (ಮಳೆ ಆಶ್ರಿತ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು 2026ರ ಜುಲೈ 31 ಕೊನೆಯ ದಿನವಾಗಿದೆ. ಹೆಸರು (ಮಳೆ ಆಶ್ರಿತ), ಉದ್ದು (ಮಳೆ ಆಶ್ರಿತ) ಬೆಳೆÀಗಳಿಗೆ ನೋಂದಣಿ ಮಾಡಿಕೊಳ್ಳಲು 2026ರ ಜುಲೈ 15 ಕೊನೆಯ ದಿನವಾಗಿದೆ. ಸೂರ್ಯಕಾಂತಿ (ಮಳೆ ಆಶ್ರಿತ), ಭತ್ತ (ನೀರಾವರಿ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳು 2026ರ ಆಗಸ್ಟ್ 14 ರಂದು ಕೊನೆಯ ದಿನವಾಗಿದೆ.
ಬೆಳೆಸಾಲ ಪಡೆಯದ ರೈತರು ನೊಂದಣಿಗಾಗಿ ಅರ್ಜಿಯೊಂದಿಗೆ ಭೂಮಿ ಹೊಂದಿರುವುದ್ದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ್ ಖಾತೆ/ ಪಾಸ್ಬುಕ್ ಮತ್ತು ಆಧಾರ ಸಂಖ್ಯೆಯೊAದಿಗೆ ಡಿ.ಸಿ.ಸಿ/ಇತರೆ ಬ್ಯಾಂಕ್ ಗ್ರಾಮ-ಒನ್ ಮತ್ತು ಸಿ.ಎಸ್.ಸಿ ಕೇಂದ್ರಗಳಿಗೆ ಸಂಪರ್ಕಿಸಬೇಕು.
ಪ್ರಸಕ್ತ ಸಾಲು ಮತ್ತು ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಧಳ, ನಿರ್ಧಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘಸ್ಪೋಟ ಮತ್ತು ಗುಡುಗು ಮಿಂಚುಗಳಿAದಾಗಿ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಎಲ್ಲಾ ರೈತರು ಉಳಿದ ಬೆಳೆಗಳ ಆಯ್ಕೆಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಹಾಗೂ ನೊಂದಣಿಗಾಗಿ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘÀಗಳಿಗೆ ಸಂಪರ್ಕಿಸಿ ಬೆಳೆ ವಿಮೆ ನೊಂದಣಿಯ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ.
ಪ್ರತಿ ಹೆಕ್ಟೇರ್ಗೆ ರೈತರು ಪಾವತಿಸಬೇಕಾದ ವಿಮಾ ಮೊತ್ತದ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರು ಕಚೇರಿ ಸಂಪರ್ಕಿಸಲು ಕೋರಲಾಗಿದೆ.
crop insurance last date here ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು. ವಿಮೆ ಮಾಡಿಸಿದರೆ ಎಷ್ಟು ಹಣ ಜಮೆಯಾಗಬಹುದು
ರೈತರು ತಮ್ಮ ಊರಿನ ವ್ಯಾಪ್ತಿಯಲ್ಲಿರುವ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಈ
https://www.samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಕುರಿತು ಮಾಹಿತಿ ಪಡೆಯುವ ಪೇಜ್ ಸಂರಕ್ಷಣೆ ತೆರೆದುಕೊಳ್ಳುತ್ತದೆ.
ಅಲ್ಲಿ ನೀವು ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. Premium Calculator ಮೇಲೆ ಕ್ಲಿಕ್ ಮಾಡಬೇಕು ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
ಇದನ್ನೂ ಓದಿ : ಬೆಳೆ ಹಾನಿಯಾದರೆ ಯಾರಿಗೆ ಕರೆ ಮಾಡಬೇಕು ? ಇಲ್ಲಿದೆ ಮಾಹಿತಿ
ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರಿಂದ ನೀವು ಯಾವ ಯಾವ ಬೆಳೆಗಳ ವಿಮೆ ಮಾಡಿಸಬಹುದು ಎಂಬ ಬೆಳೆಗಳ ಹೆಸರು ಕಾಣಿಸುತ್ತದೆ. ಬೆಳೆ ಆಯ್ಕೆ ಮಾಡಿಕೊಂಡ ನಂತರ ನೀವು ಎಷ್ಟು ಎಕರೆ ವಿಮೆ ಮಾಡಿಸಬೇಕೆಂದುಕೊಂಡಿದ್ದೀರೋ ಅಲ್ಲಿ ನಮೂದಿಸಬೇಕು. ನಂತರ Show Premium ಮೇಲೆ ಕ್ಲಿಕ್ ಮಾಡಬೇಕು. ಉದಾಹರಣೆಗೆ ನೀವು ತೊಗರಿ ಒಂದು ಎಕರೆಗೆ ವಿಮೆ ಮಾಡಿಸಬಹುದಾದರೆ ಎಕೆರೆಗೆ ರೈತರು 466 ರೂಪಾಯಿ ಪಾವತಿಸಬೇಕು. ನಿಮ್ಮ ಬೆಳೆ ಸಂಪೂರ್ಣ ಹಾನಿಯಾದರೆ ನಿಮಗೆ 23 ಸಾವಿರ ರೂಪಾಯಿಯವರೆಗೆ ವಿಮೆ ಹಣ ಜಮೆಯಾಗಲಿದೆ. ಇದೇ ರೀತಿ ನೀವು ಬೇರೆ ಬೇರೆ ಬೆಳೆಗಳನ್ನು ಚೆಕ್ ಮಾಡಬಹುದು.





