Crop insurance application status here: ಮುಂಗಾರು ಹಂಗಾಮಿಗೆ ಬೆಳೆ ವಿಮೆ ಪಾವತಿಸಿದ ರೈತರು ಈಗ ತಮ್ಮ ಅರ್ಜಿ ಯಾವ ಸ್ಥಿತಿಯಲ್ಲಿ ಎಂಬ ಸ್ಟೇಟಸನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತ ಮಿತ್ರರೇ ನಿಮ್ಮ ಬಳಿ ಮೊಬೈಲ್ ಇದ್ದರೆ ಸಾಕು, ಕೇವಲ ಒಂದೇ ನಿಮಿಷದಲ್ಲಿ ಯಾರ ಸಹಾಯವೂ ಇಲ್ಲದೆ ಸ್ಟೇಟಸ್ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.
Crop insurance application status here ಬೆಳೆ ವಿಮೆ ಅರ್ಜಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ ?
ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ಈ
https://www.samrakshane.karnataka.gov.in/PublicHome.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆಯ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಹಲವಾರು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು check status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚಾ ಕೋಡ್ ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಮೊಬೈಲ್ ನಲ್ಲಿಯೇ ಜಮೀನಿನ ಪೋಡಿ ನಕ್ಷೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪ್ರೊಫೆಸಲ್ ಸಂಖ್ಯೆ, ಮೊಬೈಲ್ ನಂಬರ್ ಸಂಖ್ಯೆಯ ಕೊನೆಯ ಮೂರು ನಂಬರ್ ಗಳು ಕಾಣಿಸುತ್ತದೆ. ನಿಮ್ಮ ಹೆಸರು ಸಹ ಕಾಣಿಸುತ್ತದೆ. ಅದರ ಮುಂದೆ ಸ್ಟೇಟಸ್ ಅಂದರೆ ನಿಮ್ಮ ಅರ್ಜಿಯ ಸ್ಟೇಟಸ್ ಕಾಣಿಸುತ್ತದೆ. ಅರ್ಜಿ ಬೆಳೆಯ ನೋಂದಣಿ ಪ್ರಗತಿಯಲ್ಲಿದೆಯೋ ಅರ್ಜಿಯನ್ನು ತೆಗೆದು ಹಾಕಲಾಗಿದೆಯೇ ಅಥವಾ ಸ್ವೀಕೃತವಾಗಿದೆಯೋ ಎಂಬ ಮಾಹಿತಿ ಕಾಣಿಸುತ್ತದೆ. ನೀವು ಬೆಳೆ ವಿಮೆಯನ್ನು ಎಲ್ಲಿ ಪಾವತಿಸಿದ್ದೀರಿ. ನೀವು ಪಾವತಿಸಿದ ಪೇಮೆಂಟ್ ಸಕ್ಸೆಸ್ ಫುಲ್ ಆಗಿದೆಯೋ ಇಲ್ಲವೋ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಕಾಣಿಸುವ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ View Detailಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಯಾವ ಬೆಳೆಗೆ ನೀವು ವಿಮೆ ಪಾವತಿಸಿದ್ದೀರಿ ನೀವು ಎಷ್ಟು ಬೆಳೆ ವಿಮೆ ಹಣ ಪಾವತಿಸಿದ್ದೀರಿ ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಬಹುದು ಎಂಬ ಮಾಹಿತಿಯೂ ಕಾಣಿಸುತ್ತದೆ. ಬಿತ್ತನೆ ಮಾಡಿದ ದಿನಾಂಕ ಮಾಹಿತಿಯೂ ನಿಮಗೆ ಕಾಣಿಸುತ್ತದೆ. ಈ ಆಧಾರದ ಮೇಲೆ ನಿಮ್ಮ ಅರ್ಜಿ ಯಾವ ಹಂತದಲ್ಲಿಯೇ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಬೆಳೆ ವಿಮೆ ಜಮೆಯಾಗಬೇಕಾದರೆ ಏನು ಮಾಡಬೇಕು ?
ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಜಮೆಯಾಗಬೇಕಾದರೆ ವಿಮೆ ಹಣ ಪಾವತಿಸಿದ ನಂತರ ಅಥವಾ ಮೊದಲು ಬೆಳೆ ಸಮೀಕ್ಷೆ ಮಾಡಬೇಕು. ಬೆಳೆ ವಿಮೆ ಪಾವತಿಸಿದ ನಂತರ ಒಂದು ವೇಳೆ ನಿಮ್ಮ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಅಂದರೆ ಅತೀವೃಷ್ಟಿ ಅಥವಾ ಅನಾವೃಷ್ಟಿಯಿಂದ ಬೆಳೆ ಹಾಳಾದರೆ ನೀವು ಯಾವ ಬೆಳೆ ವಿಮಾ ಕಂಪನಿಗೆ ಹಣ ಪಾವತಿಸಿದ್ದೀರೋ ಆ ವಿಮಾ ಕಂಪನಿಗೆ ಕರೆ ಮಾಡಬೇಕು. ಆಗ ಬೆಳೆ ವಿಮಾ ಕಂಪನಿಯ ಪ್ರತಿನಿಧಿ ನಿಮ್ಮ ಜಮೀನಿಗೆ ಬರುತ್ತಾರೆ. ನಿಮ್ಮ ಬೆಳೆಯನ್ನು ಪರಿಶೀಲಿಸುತ್ತಾರೆ. ಅಂದರೆ ನಿಮ್ಮ ಬೆಳೆ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ಚೆಕ್ ಮಾಡುತ್ತಾರೆ. ನಂತರ ಮೇಲಧಿಕಾರಿಗಳಿಗೆ ಅವರು ವರದಿ ಸಲ್ಲಿಸುತ್ತಾರೆ. ಇದಾದ ನಂತರ ನಿಮ್ಮ ಬೆಳೆ ಯಾವ ಪ್ರಮಾಣದಲ್ಲಿ ಹಾನಿಯಾಗಿದೆಯೋ ಆ ಆಧಾರದ ಮೇಲೆ ನಿಮ್ಮ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗುತ್ತದೆ. ಒಂದು ವೇಳೆ ಬೆಳ ವಿಮೆ ಹಣ ಜಮೆಯಾಗದಿದ್ದರೆ ನೀವು ವಿಮಾ ಕಂಪನಿಯ ಸಹಾಯವಾಣಿ ನಂಬರಿಗೂ ಕರೆ ಮಾಡಿ ವಿಚಾರಿಸಬಹುದು.





