crop insurance credit date : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ವಿಮೆ ಹಣ ಯಾವಾಗ ಜಮೆಯಾಗುತ್ತದೆ ಬೆಳೆ ವಿಮೆ ಹಣ ಹೇಗೆ ನಿರ್ಧರಿಸುತ್ತಾರೆ. ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು ಎಂಬುದು ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಬೆಳೆ ವಿಮೆ ಮಾಡಿಸಲು ಇನ್ನೂ ಕಾಲಾವಕಾಶವಿದೆ. ಹೌದು, ಜುಲೈ 31 ರೊಳಗೆ ವಿಮೆ ಮಾಡಿಸಲು ಇನ್ನೂ ಕಾಲಾವಕಾಶವಿದೆ. ಅತೀವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಕೃತಿ ವಿಕೋಪ ಸಮಯದಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಖಾಸಗಿ ಕಂಪನಿ ಸಹಯೋಗದಲ್ಲಿ ಬೆಳೆ ವಿಮೆ ಯೋಜನೆಯನ್ನು ಜಾರಿಗೆ ತರಲಾಗಿದೆ.
crop insurance credit date ಬೆಳೆ ವಿಮೆ ಹಣ ಯಾವಾಗ ಜಮೆಯಾಗುತ್ತದೆ ?
ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ಮಾತ್ರಕ್ಕೆ ವಿಮೆ ಹಣ ಜಮೆಯಾಗುತ್ತದೆ ಎಂದು ಹೇಳಕ್ಕಾಗುವುದಿಲ್ಲ. ಅತೀವೃಷ್ಟಿ ಅಥವಾ ಅನಾವೃಷ್ಟಿ ಅಥವಾ ಇನ್ಯಾವುದೋ ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾಳಾದರೆ ಮಾತ್ರ ಬೆಳೆ ವಿಮೆ ಹಣ ಜಮೆಯಾಗುತ್ತದೆ. ಹೌದು, ಉದಾಹರಣಗೆ ಅತೀವೃಷ್ಟಿ ನಿರಂತರ ಮಳೆಯಾಗಿದೆ ಬೆಳೆಯೆಲ್ಲಾ ಕೊಚ್ಚಿಹೋದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ನೀವು ದೂರು ನೀಡಬೇಕಾಗುತ್ತದೆ. ಆಗ ವಿಮಾ ಕಂಪನಿಯ ಪ್ರತಿನಿಧಿಗಳು ನಿಮ್ಮ ಜಮೀನಿಗೆ ಬಂದು ಬೆಳೆ ಪರಿಶೀಲಿಸುತ್ತಾರೆ. ನಂತರ ಶೇಕಡಾ ಎಷ್ಟು ಪ್ರಮಾಣ ಬೆಳೆ ಹಾನಿಯಾಗಿದೆ ಎಂಬುದರ ಆಧಾರದ ಮೇಲೆ ನಿಮ್ಮ ಖಾತೆಗೆ ಬೆಳೆ ವಿಮೆ ಹಣ ಜಮೆಯಾಗುತ್ತದೆ.
ಬೆಳೆ ವಿಮೆ ಅರ್ಜಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ಬೆಳೆ ವಿಮೆ ಮಾಡಿಸಿದ ನಂತರ ರೈತರು ಬೆಳೆ ವಿಮೆ ಪಾವತಿಯಾದ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಅರ್ಜಿ ಸಲ್ಲಿಸಿದ ನಂತರ ಎರಡು ದಿನಗಳ ನಿಂತ ನಿಮ್ಮ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸರಿಯಾದ ರೀತಿಯಲ್ಲಾಗಿದೆಯೋ ಇಲ್ಲವೋ ನಿಮ್ಮ ಹಣ ಪಾವತಿಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ನಿಮ್ಮ ಅರ್ಜಿಯ ಸ್ಟೇಟಸನ್ನು
ಮೊಬೈಲ್ ನಲ್ಲಿ ಚೆಕ್ ಮಾಡಬೇಕಾದರೆ ಈ
https://www.samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಮುಂದೆ/Go ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ನಂತರ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅದಾದ ಮೇಲೆ ಪ್ರೊಪೋಸಲ್ ನಂಬರ್, ಮೊಬೈಲ್ ನಂಬರ್, ಆಧಾರ್ ನಂಬರ್, ನಿಮ್ಮ ಹೆಸರು, ಕಾಣಿಸುತ್ತದೆ. ಸ್ಟೇಟಸ್ ನಲ್ಲಿ ಪೇಮೆಂಟ್ ಸಕ್ಸೆಸ್ ಆಗಿದೆಯೋ ಇಲ್ಲವೋ ಎಂಬ ಮಾಹಿತಿ ಕಾಣಿಸುತ್ತದೆ. ಇದಾದ ನಂತರ ನೀವು ವೀವ್ ಡಿಟೇಲ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನೀವು ಎಷ್ಟು ಹಣ ಪಾವತಿಸಿದ್ದೀರಿ ಬೆಳೆ ಹಾನಿಯಾದರೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬ ಮಾಹಿತಿ ಅಲ್ಲಿ ಕಾಣಿಸುತ್ತದೆ.
ಇದನ್ನೂ ಓದಿ : ಯಾವ ಯಾವ ಬೆಳೆಗಳಿಗೆ ಇನ್ನೂ ವಿಮೆ ಮಾಡಿಸಬಹುದು ? ಇಲ್ಲಿದೆ ಮಾಹಿತಿ
ಬೆಳೆ ವಿಮೆ ಮಾಡಿಸುವ ರೈತರು ಬೆಳೆ ಸಮೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು. ಹೌದು, ರೈತ ಮಿತ್ರರೇ ನೀವು ಸ್ವಯಂ ಆಗಿ ಬೆಳೆ ಸಮೀಕ್ಷೆ ಮಾಡಬಹುದು. ಅಥವಾ ನಿಮ್ಮ ಊರಲ್ಲಿ ಯಾರಾದರೂ ಮೊಬೈಲ್ ಸಹಾಯ ಪಡೆದು ಬೆಳೆ ಸಮೀಕ್ಷೆ ಮಾಡಬಹುದು. ಆದರೆ ಬೆಳೆ ಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆ ಮಾಡಿದ ನಂತರವೇ ನಿಮ್ಮ ಖಾತೆಗೆ ಬೆಳೆ ಹಾನಿಯಾದರೆ ಹಣ ಜಮೆಯಾಗುವುದು.





