ಗೃಹಲಕ್ಷ್ಮೀ ಯೋಜನೆಗೆ 2443 ಕೋಟಿ ರೂಪಾಯಿ ಬಿಡುಗಡೆ ಮಾಹಿತಿ ಇಲ್ಲಿದೆ

Written by Ramlinganna

Published on:

Gruhalakshmi amount credit soon : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಗೃಹಲಕ್ಷ್ಮೀ ಯೋಜನೆಗೆ 2443 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು ಇನ್ನೂ ಮೂರ್ನಾಲ್ಕು ದಿನದಲ್ಲಿ ಪ್ರತಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ 32 ನೇ ಕಂತಿನ ಹಣ ಡಿಬಿಟಿ ಮೂಲಕ ಜಮೆ ಆಗಲಿದೆ ಎಂದು ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು.

ಅವರು ಜಿಬಿಎ ವ್ಯಾಪ್ತಿಯ ಯಲಹಂಕ, ಬ್ಯಾಟರಾ ಯನಪುರ, ಹೆಬ್ಬಾಳ, ಸ್ವರ್ವಜ್ಞನಗರ ವಿಧಾನಸಭಾ ಕ್ಷೇತ್ರಗಳ ಗ್ಯಾರೆಂಟಿ ಯೋಜನಗಳ ಅನು,ಠಾನ ಸಮಿತಿಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಗೃಹಲಕ್ಷ್ಮೀ ಯೋಜನೆಯಡಿ ಈವರೆಗೆ ಪ್ರತಿ ಯಜಮಾನಿಯರಿಗೆ 62 ಸಾವಿರ ರೂಪಾಯಿ ತಲುಪಿದೆ. ಪಂಚ ಗ್ಯಾರೆಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಇದುವರೆಗೂ 1,46,443 ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡಿದೆ ಎಂದರು.

ಗ್ಯಾರೆಂಟಿ ಯೋಜನೆಗಳ ದುರುಪಯೋಗ ತಡೆಯಲು ಗೃಹಲಕ್ಷ್ಮೀ ಮತ್ತು ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಮಾಡಲಾಗುತ್ತಿದೆ.

ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿತರಲ್ಲಿ 1,95,224 ಫಲಾನುಭವಿಗಳು  ಮೃತಪಟ್ಟಿದ್ದರೂ ಅವರ ಖಾತೆಗೆ ಸುಮಾರು 115 ಕೋಟಿ ರೂಪಾಯಿ ಹಣ ಸಂದಾಯವಾಗಿದೆ. ಮೃತ ಫಲಾನುಭವಿಗಳ ಹೆಸರನ್ನು 15 ದಿನದಲ್ಲಿ ಪಟ್ಟಿಯಿಂದ ಕೈಬಿಡುವ ಸಂಬಂಧ ಸರ್ಕಾರ ಶೀಘ್ರದಲ್ಲಿ ಮಾರ್ಗಸೂಚಿ ರಚಿಸಲಿದೆ ಎಂದರು.

Gruhalakshmi amount credit soon ಗೃಹಲಕ್ಷ್ಮೀ ಎಷ್ಟು ಕಂತುಗಳ ಹಣ ಜಮೆಯಾಗಿದೆ ಹೀಗೆ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಎಷ್ಟು ಕಂತುಗಳ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಎಂಬುದನ್ನು ಮಹಿಳೆಯರು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು.  ನಿಮ್ಮಲ್ಲಿರುವ ಮೊಬೈಲ್ ನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿರುವುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆಯಪ್ ಓಪನ್ ಆಗುತ್ತದೆ.. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ಇದಾದ ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ  ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ  ಓಟಿಪಿಯನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ ಇಲ್ಲಿಯವರೆಗೆ ಗೃಹಲಕ್ಷ್ಮೀ ಹಣ ಜಮೆಯಾಗಿದೆಯೋ ಇಲ್ಲವೋ ಎಂಬ ಮಾಹಿತಿ ಸಿಗಲಿದೆ.

ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಲು  ಯಾರು ಅರ್ಹರಾಗಿದ್ದಾರೆ?

ಗೃಹಲಕ್ಷ್ಮೀ ಯೋಜನೆಯ ಹಣ ಪಡೆಯಲು ಮಹಿಳೆಯರಿಗೆ ಸರ್ಕಾರವು ಅನೇಕ ಷರತ್ತುಗಳನ್ನು ವಿಧಿಸಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಯೋಜನೆಯ ಲಾಭ ಸಿಗಲಿದ್ದು, ಅರ್ಜಿ ಸಲ್ಲಿಕೆ ಹೇಗೆ ಯಾರು ಅರ್ಹರು ಯಾವ ಯಾವ ದಾಖಲೆ ಹೊಂದಿರಬೇಕು ಎಂಬ ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು?

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿಗೆ ಎಂದು ನಮೂದಿಸಿರುವ ಮಹಿಳೆ ಮಾತ್ರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ.

ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯಲು ಯಾವ ಯಾವ ದಾಖಲೆ ಹೊಂದಿರಬೇಕು

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ರೇಶನ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು. ಆಧಾರ್ ಕಾರ್ಡ್ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ 585 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು : ಬೆಳೆ ವಿಮೆ ಸ್ಟೇಟಸ್ ಇಲ್ಲೇ ಚೆಕ್ ಮಾಡಿ

ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಏನಾಗುತ್ತದೆ

ಕುಟುಂಬದ ಎಲ್ಲಾ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹತೆಹೊಂದಿರುವುದಿಲ್ಲ. ಒಂದು ಕುಟುಂಬದಲ್ಲಿ ಒಬ್ಬ ಮಹಿಳೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಗೃಹಲಕ್ಷ್ಮೀ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು,ಕುಟುಂಬದ ಮುಖ್ಯಸ್ಥೆಯಾಗಿರುವ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ತಿಂಗಳಿಗೆ 2 ಸಾವಿರ ರೂಪಾಯಿ ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಅಂದರೆ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗವುದು.

Leave a Comment