in 15 district rain alert : ಕರ್ನಾಟಕದಲ್ಲಿ ಇಂದಿನಿಂದ ಒಂದು ವಾರ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
in 15 district rain alert ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?
ಆಗಸ್ಟ್ 17 ರಿಂದ 22 ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರೆ, ಉತ್ತರ ಒಳನಾಡು ಮತ್ತು ಮಲೆನಾಡು ಸಹಿತಿ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ 17 ರಂದು ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ ಹಾಗೂ ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಗಾಳಿಯೊಂದಿಗೆ ಮಳೆಯಾಗಲಿದೆ.ಗಂಟೆಗೆ 40-50 ಕಿ.ಮೀ ವೇಗದಲ್ಲಿ ಹಗುರದಿಂದ ಸಾಧಾರಣೆ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಆಗಸ್ಟ್ 18 ರಂದು ಗದಗ, ಕೊಪ್ಪಳ, ಧಾರವಾಡ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 19 ರಿಂದ 22 ರವರೆಗೆ ಬಾಗಲಕೋಟೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಹಾವೇರಿ, ಜಿಲ್ಲೆಗಳಲ್ಲಿಯೂ ನಿರಂತರ ಗಾಲಿಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ.
ಬಳ್ಳಾರಿ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಿರಂತರ ಗಾಳಿ ಬೀಸುವ ಸಾಧ್ತೆಯಿದ್ದು, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 17 ರಿಂದ 22 ರವರಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಚಿತ್ರದುರ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ಬೆಂಗಳೂರು ಗ್ರಾಮೀಣ, ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಯವರೆಗೆ ಮೋಡ ಮುಸುಕಿದ ವಾತಾವರಣ ಕೂಡಿರಲಿದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಗ್ರಾಮೀಣ ಆಸ್ತಿಗಳಿಗೆ ಇ ಸ್ವತ್ತು ನೀಡುವುದು ಹೇಗೆ ? ಇಲ್ಲಿದೆ ಮಾಹಿತಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





