Voter New SIR list : ರಾಜ್ಯ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆ ಬಳಿಕ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ರಾಜ್ಯಾದ್ಯಂತ ಬರೋಬ್ಬರಿ 1 ಕೋಟಿ 8 ಸಾವಿರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ವಿಶೇಷವೆಂದರೆ, ರದ್ದಾದ ಮತಾದರರ ಪೈಕಿ ಅರ್ಧದಷ್ಟು ಪಾಲು ಬೆಂಗಳೂರು ನಗರವೊಂದರಲ್ಲೇ ಇದೆ. ಮರಣ ಹೊಂದಿದವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ನಕಲಿ ಮತದಾರರು ಹಾಗೂ ಗೈರು ಹಾಜರಾದವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.
ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು ತಮಗೆಲ್ಲಾ ಗೊತ್ತಿದ್ದ ಹಾಗೆ ಈಗಾಗಲೇ ಬಹಳಷ್ಟು ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಹಾಗಾದರೆ ಯಾರ ಯಾರ ಹೆಸರು ಇಲ್ಲ. ಯಾರ ಹೆಸರು ಇದೆ ಎಂಬುದನ್ನು ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.
ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿಯ ಪರಿಷ್ಕರಣೆ (ಸ್ಟೇಷನ್ ಇಂಟೆನ್ಸಿವ್ ರಿವಿಶನ್ (ಎಸ್.ಐ.ಆರ್) ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.
Voter New SIR list ತದಾರರ ಹೊಸ ಪಟ್ಟಿಯಲ್ಲಿ ಹೀಗೆ ಚೆಕ್ ಮಾಡಿ
ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂಬುದನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್
https://voters.eci.gov.in/
ಗೆ ಭೇಟಿ ನೀಡಿ ಪರಿಶೀಲಿಸಬಹುದು. ಈ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ Search Your Name in Last SIR ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಪೋಲಿಂಗ್ ಸ್ಟೇಷನ್, ಆಯ್ಕೆ ಮಾಡಿ ನಿಮ್ಮ ವೋಟರ್ ಐಡಿ ನಮೂದಿಸಬೇಕು. ಇನ್ನಿತರ ಮಾಹಿತ ಭರ್ತಿ ಮಾಡಿ ಅಲ್ಲಿರುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಸಾಕು ಹೊಸ ಮತಾದರರ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನ ಚೆಕ್ ಮಾಡಬಹುದು.
ವೆಬ್ಸೈಟ್ ದಲ್ಲಿ ನಿಮ್ಮ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿ. ಕರಡು ಪಟ್ಟಿಯನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬಹುದು.
ಒಂದು ವೇಳೆ ಪಟ್ಟಿಯಿಂದ ನಿಮ್ಮ ಹೆಸರು ಡಿಟಿಲ್ ಆಗಿದ್ದರೆ ಅಥವಾ 18 ವರ್ಷ ತುಂಬಿದ ಹೊಸ ಮತದಾರರಾಗಿದ್ದರೆ, ವೆಬ್ಸೈಟ್ ಮೂಲಕವೇ ನಮೂನೆ 6 ಭರ್ತಿ ಮಾಡಿ ಹೊಸ ವೋಟರ್ ಐಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ ತಿಂಗಳಾಂತ್ಯದವರೆಗೆ ಅವಕಾಶವಿದ್ದು, ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.
ಹೊಸ ಮತದಾರರ ಪಟ್ಟಿಯಲ್ಲಿ ಹೆಸರು ಹೀಗೂ ಚೆಕ್ ಮಾಡಬಹುದು
ಹೊಸ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು https://karnataka-asddo-lookup.vercel.app/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಕರ್ನಾಟಕ ಎಎಸ್.ಡಿಡಿಓ ಲಿಂಸ್ ಪೇಟ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಎಪಿಕ್ ನಂಬರ್ ನಮೂದಿಸಬೇಕು. ಅಂದರೆ ನಿಮ್ಮ ವೋಟರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಚೆಕ್ ದಿಸಿ ಎಪಿಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಈ ಗುರುತಿನ ಚೀಟಿ ತೆಗೆದುಹಾಕಿದ ಪಟ್ಟಿಯಲ್ಲಿ ಇಲ್ಲ ಎಂಬ ಸಂದೇಶ ಬಂದರೆ ನಿಮ್ಮ ಹೆಸರು ಡಿಲೀಟ್ ಆಗಿಲ್ಲ ಎನ್ನುವುದು ದೃಢಪಡುತ್ತದೆ. ಈ ಪಟ್ಟಿ ತೆಗೆದು ಹಾಕವಿಕೆಗಳನ್ನು ಮಾತ್ರ ಒಳಗೊಂಡಿದೆ. ನಿಮ್ಮ ಹೆಸರು ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಇರೆದಯೋ ಎಂದು ಖಚಿತಪಡಿಸಿಕೊಳ್ಳಲು voters.eci.gov.in ನೋಡಿ ಅಥಾ ನಿಮ್ಮ ಬಿಎಲ್ಓ ಅವರನ್ನು ವಿಚಾರಿಸಬಹುದು.





