Midterm crop insurance release : ಮುಂಗಾರು ಹಂಗಾಮಿನ ಖಾರೀಫ್ ಋತುಮಾನದಲ್ಲಿ ಮಳೆ ಕೊರತೆ ಕಾರಣ ಪ್ರಸಕ್ತ 2026-27ನೇ ಸಾಲಿನ ಬೆಳೆ ವಿಮೆ ಯೋಜನೆಯಡಿ ಅಲ್ಪಾವಧಿ ಬೆಳೆಗಳಾದ ಹೆಸರು, ಉದ್ದು ಹಾಗೂ ಸೋಯಾಬಿನ್ ಬೆಳೆಗಳಿಗೆ ಬೆಳೆ ವಿಮೆ ಮಧ್ಯಂತರ ಪರಿಹಾರಕ್ಕಾಗಿ 18 ಕೋಟಿ ರೂಪಾಯಿ ಸರ್ಕಾರಕ್ಕೆ ಕಲಬುರಗಿ ಜಿಲ್ಲಾಡಳಿತದಿಂದ ವರದಿ ಸಲ್ಲಿಸಿದ್ದು, ಶೀಘ್ರದಲ್ಲಿಯೇ ಪರಿಹಾರ ಮಂಜೂರಾಗಲಿದೆ ಎಂದು ರಾಜ್ಯದ ಗೃಹ, ಐಟಿಬಿಟಿ, ಇ ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಮಂಗಳವಾರ ಐವಾನ್ ಎ ಶಾಙಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇದರಿಂದ ಜಿಲ್ಲೆಯ 37051 ರೈತರಿಗೆ ನೆರವಾಗಲಿದೆ. ಕಳೆದ ವರ್ಷವೂ ಸಹ ಜಿಲ್ಲಾಡಳಿತ ಹಾಗೂ ನಮ್ಮೆಲ್ಲರ ಪ್ರಯತ್ನದಿಂದ ನಮ್ಮ ಜಿಲ್ಲೆಯ ರೈತರಿಗೆ ದಾಖಲೆ ಪ್ರಮಾಣದಲ್ಲಿ ಪರಿಹಾರ ಬರಲು ಸಾಧ್ಯವಾಗಿದೆ ಎಂದರು.
ಪ್ರಸ್ತುತ ಜೂನ್ ಮತ್ತು ಜುಲೈ ತಿಂಗಳಲ್ಲಿ ಸತತ ಮೂರು ವಾರಗಳ ಕಾಲ ಮಳೆ ಇಲ್ಲದ ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ಬರ ಘೋಷಣೆಯ ತಾಲೂಕಿನಲ್ಲಿ ಕಲಬುರಗಿ ಜಿಲ್ಲೆಯ ಒಂದು ತಾಲೂಕು ಇಲ್ಲ ಎಂಬ ಪತ್ರಕರ್ತರ ಪ್ರಶಅನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ತಿಂಗಳಲ್ಲಿ ಅಫಜಲ್ಪುರದಲ್ಲಿ ಶೇ. 65,ಆಳಂದಲ್ಲಿ ಶೇ. 66, ಚಿಂಚೋಳಿಯಲ್ಲಿ ಶೇ. 61, ಕಲಬುರಗಿ ಶೇ. 68, ಜೇವರ್ಗಿ ಶೇ. 74, ಕಮಲಾಪುರ ಶೇ. 57, ಯಡ್ರಾಮಿ ಶೇ. 69 ಹಾಗೂ ಶಹಾಬಾದ್ ಶೇ. 62 ಮಳೆ ಕೊರತೆ ಇದೆ. ಮುಂದಿನ ದಿನದಲ್ಲಿ ಈ ತಾಲೂಕುಗಳನ್ನು ಎನ್.ಡಿ.ಆರ್.ಎಫ್ ನಿಯಮಾವಳಿ ಪ್ರಕಾರ ಮಾಸಿಕ ಶೇ. 55 – 60 ರಷ್ಟು ಮಳೆ ಕೊರತೆ ಪ್ರದೇಶವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗುವುದು ಎಂದರು.
ಎನ್.ಡಿ.ಆರ್.ಎಫ್ ನಿಯಮ ಬದಲಾವಣೆ ತನ್ನಿ- ಬರ ಘೋಷಣೆಯ ಎನ್.ಡಿ.ಆರ್.ಎಫ್ ನಿಯಮಾವಳಿ 2020 ರಲ್ಲಿ ಎನ್.ಡಿ.ಎ ಸರ್ಕಾರ ಪರಿಷ್ಕರಿಸಿದ್ದು, ಇದರಿಂದ ವಾಸ್ತವದಲ್ಲಿ ಬರಗಾಲವಿದ್ದರೂ, ಬರ ಘೋಷಣೆ ಮಾಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಬರ ಘೋಷಣೆ ರಾಜ್ಯಗಳಿಗೆ ಸ್ವಾತಂತ್ರ್ಯವಿಲಲ್, ಯುಪಿಎ ಅವಧಿಯಲ್ಲಿ ಎನ್.ಡಿ.ಆರ್.ಎಫ್ ನಿಯಮಾವಳಿ ಜಾರಿಗೆ ತರಬೇಕೆಂದು ನಮ್ಮ ಬೇಡಿಕೆಯಾಗಿದ್ದು, ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಬೇಕು ಎಂದ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
Midterm crop insurance release ಬೆಳೆ ವಿಮೆ ಅರ್ಜಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ಬೆಳೆ ವಿಮೆ ಮಾಡಿಸಿದ ನಂತರ ರೈತರು ಬೆಳೆ ವಿಮೆ ಪಾವತಿಯಾದ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಅರ್ಜಿ ಸಲ್ಲಿಸಿದ ನಂತರ ಎರಡು ದಿನಗಳ ನಿಂತ ನಿಮ್ಮ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸರಿಯಾದ ರೀತಿಯಲ್ಲಾಗಿದೆಯೋ ಇಲ್ಲವೋ ನಿಮ್ಮ ಹಣ ಪಾವತಿಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ನಿಮ್ಮ ಅರ್ಜಿಯ ಸ್ಟೇಟಸನ್ನು
ಮೊಬೈಲ್ ನಲ್ಲಿ ಚೆಕ್ ಮಾಡಬೇಕಾದರೆ ಈ
https://www.samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಮುಂದೆ/Go ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ನಂತರ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅದಾದ ಮೇಲೆ ಪ್ರೊಪೋಸಲ್ ನಂಬರ್, ಮೊಬೈಲ್ ನಂಬರ್, ಆಧಾರ್ ನಂಬರ್, ನಿಮ್ಮ ಹೆಸರು, ಕಾಣಿಸುತ್ತದೆ. ಸ್ಟೇಟಸ್ ನಲ್ಲಿ ಪೇಮೆಂಟ್ ಸಕ್ಸೆಸ್ ಆಗಿದೆಯೋ ಇಲ್ಲವೋ ಎಂಬ ಮಾಹಿತಿ ಕಾಣಿಸುತ್ತದೆ. ಇದಾದ ನಂತರ ನೀವು ವೀವ್ ಡಿಟೇಲ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ನೀವು ಎಷ್ಟು ಹಣ ಪಾವತಿಸಿದ್ದೀರಿ ಬೆಳೆ ಹಾನಿಯಾದರೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬ ಮಾಹಿತಿ ಅಲ್ಲಿ ಕಾಣಿಸುತ್ತದೆ.
ಇದನ್ನೂ ಓದಿ : ಬೆಳೆ ಹಾನಿ ಪರಿಹಾರ ಎಕರೆಗೆ ಎಷ್ಟು ಜಮೆಯಾಗಲಿದೆ? ಇಲ್ಲಿದೆ ಮಾಹಿತಿ
ಬೆಳೆ ವಿಮೆ ಮಾಡಿಸುವ ರೈತರು ಬೆಳೆ ಸಮೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು. ಹೌದು, ರೈತ ಮಿತ್ರರೇ ನೀವು ಸ್ವಯಂ ಆಗಿ ಬೆಳೆ ಸಮೀಕ್ಷೆ ಮಾಡಬಹುದು. ಅಥವಾ ನಿಮ್ಮ ಊರಲ್ಲಿ ಯಾರಾದರೂ ಮೊಬೈಲ್ ಸಹಾಯ ಪಡೆದು ಬೆಳೆ ಸಮೀಕ್ಷೆ ಮಾಡಬಹುದು. ಆದರೆ ಬೆಳೆ ಸಮೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆ ಮಾಡಿದ ನಂತರವೇ ನಿಮ್ಮ ಖಾತೆಗೆ ಬೆಳೆ ಹಾನಿಯಾದರೆ ಹಣ ಜಮೆಯಾಗುವುದು.





