ಗಂಗಾ ಕಲ್ಯಾಣ ಯೋಜನೆಯಡಿ 3 ಲಕ್ಷ ಸಬ್ಸಿಡಿ ಸಿಗಲಿದೆ ಅರ್ಜಿ ಹೀಗೆ ಸಲ್ಲಿಸಿ

Written by Ramlinganna

Published on:

Ganga Kaylyana scheme benefits : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ 3.25 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಸಿಗಲಿದೆ. ಹೌದು, ಯಾವ ಯಾವ ರೈತರಿಗೆ ಈ ಸೌಲಭ್ಯ ಸಿಗಲಿದೆ ಅರ್ಜಿ ಎಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೃಷಿಯಲ್ಲಿ ತೊಡಗಿಸಿಕೊಂಡವವರು ಗಂಗಾ ಕಲ್ಯಾಣ ನೀರಾವರಿ ಯೋಜನೆ ಅಡಿಯಲ್ಲಿ ಆರ್ಥಿಕ ನೆರವನ್ನು ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2026-27ನೇ ಸಾಲಿನ ವಿವಿಧ ಸಾಲ ಹಾಗೂ ಸಹಾಯಧನ ಸೌಲಭ್ಯ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳ್ನು ಆಹ್ವಾನಿಸಲಾಗಿದೆ.

ಗಂಗಾ ಕಲ್ಯಾಣ ನೀರಾವರಿ ಯೋಜನಯಡಿ ವಾರ್ಷಿಕ ಆದಾಯ 98 ಸಾವಿರ ರೂಪಾಯಿ ಮಿತಿಯೊಳಗಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. 3.75 ಲಕ್ಷ ಘಟಕ ವೆಚ್ಚದಲ್ಲಿ 3.25 ಲಕ್ಷ ಸಹಾಯಧನ ನೀಡಲಾಗುತ್ತದೆ. ಅರ್ಜಿದಾರರು ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು.

Ganga Kaylyana scheme benefits ಯಾರು ಯಾರು ಅರ್ಜಿ ಸಲ್ಲಿಸಬಹುದು ?

ಹಿಂದುಳಿದ ವರ್ಗಗಳ ಪ್ರವರ್ಗ 3 ಎ ಅಡಿಯಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ ಉತ್ತಮ ಕೊಳಗ ಮುಂತಾದ ಒಳಪಂಗಡಗಳ ಸಮುದಾಯದ ಜನರು ಈ ಯೋಜನೆಗಳ ಲಾಭ ಪಡೆಯಬಹುದು.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಯೋಜನೆ ಘಟಕ ವೆಚ್ಚ ರೂ.4.75 ಲಕ್ಷಗಳಲ್ಲಿ ರೂ.4.25 ಲಕ್ಷಗಳ ಸಹಾಯಧನ ಇದರಲ್ಲಿ ರೂ.75,000/-ಗಳನ್ನು ವಿದ್ಯುದ್ದೀಕರಣಕ್ಕೆ ಎಸ್ಕಾಂಗಳಿಗೆ ಪಾವತಿ ಮಾಡಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/- ಗಳ ಸಾಲವನ್ನು ಶೇ.4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.

ಉಳಿಕೆ ಜಿಲ್ಲೆಗಳಿಗೆ ಘಟಕ ವೆಚ್ಚ ರೂ.3.75 ಲಕ್ಷ ಇದರಲ್ಲಿ ಸಹಾಯಧನ ರೂ.3.25 ಲಕ್ಷ ಸಾಲ ರೂ.50,000/- ಗಳ ಸಾಲವನ್ನು ಶೇ.4 ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಸಹಾಯಧನದನ ಮೊತ್ತದಲ್ಲಿ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ವಿದ್ಯುದ್ದೀಕರಣಕ್ಕೆ ಎಸ್ಕಾಂಗಳಿಗೆ ಪಾವತಿ ಮಾಡಲಾಗುವುದು. ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಟ 02 ಎಕರೆ ಜಮೀನು ಇರಬೇಕು. ಎಸನ ಜಿಲ್ಲೆಗಳಲ್ಲಿ ಕನಿಷ್ಟ 01 ಎಕರೆ ಜಮೀನು ತೆರೆದ ಬಾವಿ: ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ತೆರೆದ ಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ ಪಿಎಂ ಕಿಸಾನ್ ಹಣ ಜಮೆಗೆ ಇಕೆವೈಸಿ ಕಡ್ಡಾಯ- ಸ್ಟೇಟಸ್ ಇಲ್ಲೇ ಚೆಕ್ ಮಾಡಿ

2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಗಳಲ್ಲಿ ಕಾರಣಾಂತರಗಳಿಂದ ಆಯ್ಕೆಯಾಗದೆ ಇರುವ ಅರ್ಹ ಅರ್ಜಿದಾರರು 2026-27ನೇ ಸಾಲಿನ ಪ್ರಕಟಣೆಗೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಕಳೆದ ಸಾಲುಗಳಲ್ಲಿ ಸಲ್ಲಿಸಿದ ಅರ್ಜಿಯನ್ನೇ ಆಯ್ಕೆ ಸಮಿತಿಗಳ ಮುಂದೆ ಆಯ್ಕೆಗೆ ಮತ್ತೊಮ್ಮೆ ಮಂಡಿಸಲಾಗುವುದು.

ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ನ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಆನ್ಲೈನ್ ನಲ್ಲಿ  ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಾಲತಾಣ

https://kvcdc.karnataka.gov.in/

ಅಥವಾ ನಿಗಮದ ದೂರವಾಣಿ ಸಂಖ್ಯೆ 080 29904350, 080 29904268 ಅನ್ನು ಸಂಪರ್ಕಿಸಬಹುದು. ಅಥವಾ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದವರ ಕಚೇರಿಯವರನ್ನು ಸಂಪರ್ಕಿಸಲು ಕೋರಲಾಗಿದೆ.

Leave a Comment