ಪಿಎಂ ಕಿಸಾನ್ ಹಣ ಜಮೆಯಾಗಲು ಇಕೆವೈಸಿ ಕಡ್ಡಾಯ ಇಲ್ಲಿದೆ ಮಾಹಿತಿ

Written by Ramlinganna

Published on:

PM kisian EKYC mandatory ಪಿಎಂ ಕಿಸಾನ್ ಯೋಜನೆಯಡಿ ಮುಂದಿನ ಕಂತಿನ ಹಣ ಜಮೆಯಾಗಬೇಕಾದರೆ ರೈತರು ಬಯೋಮೆಟ್ರಿಕ್ ಅಥವಾ ಫೇಸ್ ಆಧಾರಿತ ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿಯಂತೆ ವಾರ್ಷಿಕ 6 ಸಾವಿರ ರೂಪಾಯಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗುತ್ತದೆ.

ಫಲಾನುಭವಿಗಳು  ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್, ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಮೂಲಕ ಇಕೆವೈಸಿ ಮಾಡಿಸಬಹುದು. ಫೇಸ್ ಆಧಾರಿತ ಇ ಕೆವೈಸಿಯನ್ನು ಪಿಎಂ ಕಿಸಾನ್ ಮೊಬೈಲ್ ಯಾಪ್ ಮೂಲಕವೂ ಮಾಡಿಕೊಳ್ಳಬಹುದು. ಇ ಕೆವೈಸಿ ಮಾಡಿಸದಿದ್ದರೆ ಮುಂದಿನ ಕಂತಿ ಹಣ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

PM kisian EKYC mandatory ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಮೊದಲು ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಯಾರು ಯಾರಿಗೆ ಜಮೆಯಾಗುತ್ತದೆ ಎಂಬ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/homenew.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಅಲ್ಲಿ ನಿಮಗೆ ಹಲವಾರು ಆಯ್ಕೆಗಳು ಕಾಣಿಸುತ್ತವೆ. ಹೌದು, ನೀವು ನಿಮ್ಮ ಹೆಸರು ಪಿಎಂ ಕಿಸಾನ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಅಲ್ಲಿ ಕಾಣುವ Beneficiary list ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾರು ಯಾರು ಫಲಾನುಭವಿಗಳಿದ್ದಾರೋ ಅವರ ಹೆಸರು ಕಾಣಿಸುತ್ತದೆ.

ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಹಣ ಜಮೆಯಾಗುವುದೇ?

ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಹಣ ಜಮೆಯಾಗುತ್ತದೆ ಎಂದು ಹೇಳಕ್ಕಾಗುವುದಿಲ್ಲ. ಏಕೆಂದರೆ ಫಲಾನುಭವಿಗಳು ಅರ್ಹತೆ ಪಡೆದಿರಬೇಕು. ಇದರೊಂದಿಗೆ ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಯಾರು ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿಲ್ಲವೋ ಅವರು ಇಕೆವೈಸಿ ಮಾಡಿಸಿಕೊಂಡರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಜಮೆಯಾಗುತ್ತದೆ.

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಯಾವಾಗ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಅಥವಾ ನವೆಂಬರ್ ತಿಂಗಳ ಆರಂಭದಲ್ಲಿ ಜಮೆಯಾಗುತ್ತದೆ. ಏಕೆಂದರೆ ಪ್ರತಿ ನಾಲ್ಕು ತಿಂಗಳಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ.

ಇದನ್ನೂ ಓದಿ ಉಚಿತವಾಗಿ 500 ಮೀನು ಮರಿ ವಿತರಣೆ ಬೈಕ್, ನಾಲ್ಕು ಚಕ್ರ ವಾಹನ ಖರೀದಿಗೆ ಸಬ್ಸಿಡಿ

ಕಳೆದ ನವೆಂಬರ್ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಿತ್ತು ಹಾಗಾಗಿ ಮುಂದಿನ ಫೆಬ್ರವರಿ ತಿಂಗಳ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಹಣ ಜಮೆಯಾಗಲಿದೆ.

ಪಿಎಂ ಕಿಸಾನ್ ಯೋಜನೆಯ ಅರ್ಹತೆಗಳೇನು?

ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ಸಣ್ಣ ಮತ್ತು ಅತೀ ಭೂಮಾಲಿಕ ರೈತರಾಗಿರಬೇಕು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, 10 ಸಾವಿರಕ್ಕಿಂತ ಹೆಚ್ಚು ಪಿಂಚಣಿ ಪಡೆಯುವವರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ. ರೈತರು ಒಟ್ಟು 2 ಹೆಕ್ಟೇರಿಗಿಂತ ಕಡಿಮೆ ಭೂಮಿ ಹೊಂದಿದವರಿಗೆ ಹಣ ಜಮೆಯಾಗುವುದು. ವೈದ್ಯರು, ವಕೀಲರು, ಇಂಜನೀಯರರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ. ಮಾಜಿ ಮತ್ತ ಹಾಲಿ ಸಚಿವರು, ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಈ ಸೌಲಭ್ಯ ಸಿಗುವುದಿಲ್ಲ.

Leave a Comment