Three days rain now : ಕರ್ನಾಟಕದ ವಿವಿಧ ಭಾಗಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಳೆ ಮೈಸೂರು ಭಾಗದಲ್ಲಿ ಸೆಪ್ಟೆಂಬರ್ 14 ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 12, 13 ಹಾಗೂ 14 ರಂದು ಸಾಧಾರಣ ಮಳೆಯಾಗಬಹುದು. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 12 ಹಾಗೂ 13 ರಂದು ಉತ್ತರ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಶನಿವಾರದಿಂದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಭಾನುವಾರದಂದು ಬೀದರ್, ಕಲಬುರಗಿ, ಯಾದಿಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗಲಿದೆ. ಸೋಮವಾರದಂದು ಉತ್ತರ ಒಳನಾಡು ಕರ್ನಾಟಕದಲ್ಲಿ ಒಣ ಹವಾಮಾನವಿರುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12 ರ ಶನಿವಾರ ಮಳೆಯಾಗಲಿದೆ. ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 13 ರ ಭಾನುವಾರ ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರವಾದ ಮಳೆಯಾಗಲಿದ್ದು, ಬಿರುಗಾಳಿಯೊಂದಿಗೆ ಗಂಟೆಗೆ 30- 40 ಕಿ.ಮೀ ವೇಗ ಬೀಸುವ ಸಾಧ್ಯತೆಯಿದೆ.
ಸೆಪ್ಟೆಂಬರ್ 14 ರ ಸೋಮವಾರದಂದು ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗಾಳಇಯೂ ಜೋರಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಲಾಗಿದೆ.
Three days rain now ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ ಬಂಡಿದಾರಿ ಮುಚ್ಚಿಹೋಗಿದೆಯೇ ಚೆಕ್ ಮಾಡಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





