ಇಲ್ಲಿ ಬಯೋಮೆಟ್ರಿಕ್ ಇಕೆವೈಸಿ ಮಾಡಿದರೆ ಮಾತ್ರ ಪಿಎಂ ಕಿಸಾನ್ ಕಂತಿಣ ಜಮೆ

Written by Ramlinganna

Published on:

PM kisan biomatric ekyc : ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಜಮೆಯಾಗಬೇಕಾದರೆ ಬಯೋಮೆಟ್ರಿಕ್ ಇಕವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹೌದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ರೈತರು ಪ್ರತಿ ವರ್ಷವೂ ಬಯೋಮೆಟ್ರಿಕ್ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಸಹಾಯಕ ನಿರ್ದೇಶಕಿ ಶಾಂತಾಮಣಿ ಜಿ. ತಿಳಿಸಿದ್ದಾರೆ.

ಇ ಕೆವೈಸಿ ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇಖೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇಕೆವೈಸಿ ಎಂಬ ಎರಡು ವಿಧಾನಗಳಿವೆ. ಬಯೋಮೆಟ್ರಿಕ್ ಇಕೆವೈಸಿ  ಮಾಡಿಸಿಕೊಳ್ಳಲು ರೈತರು ಹತ್ತಿರದ ನಾಗರಿಕ ಸೇವಾ ಕೇಂದ್ರ (ಸಿಎಸ್.ಸಿ) ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ರೈತರು ಸ್ವತಃ ತಾವೇ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವ pm&kisangol,aadhar face Rd ಡೌನ್ಲೋಡ್ ಮಾಡಿಕೊಂಡು ತಮ್ಮ ಇಕೆವೈಸಿಯನ್ನು ಮಾಡಿಕೊಳ್ಳಬೇಕು. ಇಕೆವೈಸಿ ಮಾಡಿಸಲು ಬಾಕಿ ಇರುವ ರೈತರ ಪಟ್ಟಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಸೂಚನಾ ಫಲಕದಲ್ಲಿ ಪ್ರಚಾರ ಪಡಿಸಲಾಗಿದ್ದು, ಸದರಿ ಪಟ್ಟಿಯಲ್ಲಿನ ರೈತರು ಮೇಲ್ಕಾಡಿಣಿಸಿದ ಸೇವಾ ಕೇಂದ್ರಗಳಲ್ಲಿ ಇಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

PM kisan biomatric ekyc  ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಮೊದಲು ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಯಾರು ಯಾರಿಗೆ ಜಮೆಯಾಗುತ್ತದೆ ಎಂಬ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/homenew.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಅಲ್ಲಿ ನಿಮಗೆ ಹಲವಾರು ಆಯ್ಕೆಗಳು ಕಾಣಿಸುತ್ತವೆ. ಹೌದು, ನೀವು ನಿಮ್ಮ ಹೆಸರು ಪಿಎಂ ಕಿಸಾನ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಅಲ್ಲಿ ಕಾಣುವ Beneficiary list ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾರು ಯಾರು ಫಲಾನುಭವಿಗಳಿದ್ದಾರೋ ಅವರ ಹೆಸರು ಕಾಣಿಸುತ್ತದೆ.

ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಹಣ ಜಮೆಯಾಗುವುದೇ?

ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಹಣ ಜಮೆಯಾಗುತ್ತದೆ ಎಂದು ಹೇಳಕ್ಕಾಗುವುದಿಲ್ಲ. ಏಕೆಂದರೆ ಫಲಾನುಭವಿಗಳು ಅರ್ಹತೆ ಪಡೆದಿರಬೇಕು. ಇದರೊಂದಿಗೆ ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಯಾರು ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಮಾಡಿಸಿಲ್ಲವೋ ಅವರು ಇಕೆವೈಸಿ ಮಾಡಿಸಿಕೊಂಡರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಜಮೆಯಾಗುತ್ತದೆ.

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಯಾವಾಗ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಅಥವಾ ನವೆಂಬರ್ ತಿಂಗಳ ಆರಂಭದಲ್ಲಿ ಜಮೆಯಾಗುತ್ತದೆ. ಏಕೆಂದರೆ ಪ್ರತಿ ನಾಲ್ಕು ತಿಂಗಳಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ.

ಇದನ್ನೂ ಓದಿ ಬೆಳೆ ವಿಮೆ ಹಣ ಜಮೆಯಾಗಿಲ್ಲವೇ ? ಯಾರಿಗೆ ಕರೆ ಮಾಡಬೇಕು ಇಲ್ಲಿದೆ ಮಾಹಿತಿ

ಕಳೆದ ನವೆಂಬರ್ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಿತ್ತು ಹಾಗಾಗಿ ಮುಂದಿನ ಫೆಬ್ರವರಿ ತಿಂಗಳ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಹಣ ಜಮೆಯಾಗಲಿದೆ.

ಪಿಎಂ ಕಿಸಾನ್ ಯೋಜನೆಯ ಅರ್ಹತೆಗಳೇನು?

ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ಸಣ್ಣ ಮತ್ತು ಅತೀ ಭೂಮಾಲಿಕ ರೈತರಾಗಿರಬೇಕು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ. ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, 10 ಸಾವಿರಕ್ಕಿಂತ ಹೆಚ್ಚು ಪಿಂಚಣಿ ಪಡೆಯುವವರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ. ರೈತರು ಒಟ್ಟು 2 ಹೆಕ್ಟೇರಿಗಿಂತ ಕಡಿಮೆ ಭೂಮಿ ಹೊಂದಿದವರಿಗೆ ಹಣ ಜಮೆಯಾಗುವುದು. ವೈದ್ಯರು, ವಕೀಲರು, ಇಂಜನೀಯರರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ. ಮಾಜಿ ಮತ್ತ ಹಾಲಿ ಸಚಿವರು, ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಈ ಸೌಲಭ್ಯ ಸಿಗುವುದಿಲ್ಲ.

 

Leave a Comment