ಪಡಿತರ ಪಿಎಂ ಕಿಸಾನ್ ಹಣ ಪಡೆಯಲು ಇಕೆವೈಸಿ ಕಡ್ಡಾಯ ಮೊಬೈಲ್ ನಲ್ಲಿ ಮಾಡಿ

Written by Ramlinganna

Published on:

PMkisan ration card ekyc : ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ತೆರಳುವ ಒತ್ತಡ ಕಡಿಮೆ ಮಾಡಲು ಮೊಬೈಲ್ ಮೂಲಕವೇ ಮುಖಚರ್ಚೆ ಬಳಸಿ ಇಕೆವೈಸಿ ಮಾಡಿಕೊಳ್ಳುವ ಸೌಲಭ್ಯವನ್ನು ವಾರದಲ್ಲೇ ಅನುಷ್ಠಾನಗೊಳಿಸಲಾಗುವುದು ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ವಿಕಾಸೌಧದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಆದೇಶದಂತೆ ಪಡಿತರ ಚೀಟಿ ಹೊಂದಿರುವವರು ಪ್ರತಿ ಐದು ವರ್ಷಕ್ಕೊಮ್ಮೆ ಇಕೆವೈಸಿ ಮಾಡಿಸುವುದು ಕಡ್ಡಾಯ. 2.67 ಕೋಟಿ ಫಲಾನುಭವಿಗಳ ಇಕೆವೈಸಿ ಪ್ರಕ್ರಿಯೆ ನಡೆಯುತ್ತಿದೆ. ಇದುವರೆಗೂ ಶೇ. 36 ರಷ್ಟು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ ಎಂದರು.

ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಪಡೆಯಲು ಅಧಿಕ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಹೀಗಾಗಿ ಕೆಲವೆಡೆ ಸರ್ವರ್ ಹಾಗೂ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡಿದೆ. ಯಾವದೇ ಸ್ಥಳದಲ್ಲಿ ಸಮಸ್ಯೆ ಗಮನಕ್ಕೆ ಬಂದ ತಕ್ಷಣ ಇಲಾಖೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕೆಂದು ಸೂಚಿಸಿಲಾಗಿದೆ ಎಂದು ಮಾಹಿತಿ ನೀಡಿದರು.

ಇಕೆವೈಸಿ ಪ್ರಕ್ರಿಯೆ ಸುಗಮವಾಗಿ ನಡೆಯಲು ಆಹಾರ ಅಪ್ಲಿಕೇಶನ್ ನಲ್ಲಿ ಪ್ರತ್ಯೇಕ ಯೂಆರ್ ಎಲ್ ಒದಗಿಸಾಗಿದೆ. ಪ್ರಪ್ರಥಮ ಬಾರಿಗೆ ಆಙಾರ ಇಲಾಖೆಯ ಸರ್ವರ್ ನ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಅಣುಕು ಒತ್ತಡ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಫಲಾನುಭವಿಗಳು ತಮ್ಮ ಪಡಿತರ ಚೀಟಿಗೆ ಜೋಡಣೆಗಿರುವ ನ್ಯಾಯಬೆಲೆ ಅಂಗಡಿಗೆ ಖುದ್ದಾಗಿ ಭೇಟಿ ನೀಡಿ ಇಕೆವೈಸಿ ಮಾಡಿಸಬೇಕು. ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುವ ಪಟ್ಟಿಯಲ್ಲಿರುವ ಪಡಿತರ ಚೀಟಿದಾರರು ಮಾತ್ರ ಇಕೆವೈಸಿ ಮಾಡಿಸಬಹುದು. ಸೆಪ್ಟೆಂಬರ್ 30 ರೊಳಗೆ ಇಕೆವೈಸಿ ಮಾಡಿಸದ ಫಲಾನುಭವಿಗಳ ಹೆಸರನ್ನು ಮುಂದಿನ ದಿನಗಳಲ್ಲಿ ಪಡಿತರ ಚೀಟಿಯಿಂದ ತೆಗೆದುಹಾಕುವ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

PMkisan ration card ekyc  ಇಕೆವೈಸಿ ಮಾಡಿದರೆ ಮಾತ್ರ ಪಿಎಂ ಕಿಸಾನ್ ಮುಂದಿನ ಕಂತಿಣ ಜಮೆ

ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಜಮೆಯಾಗಬೇಕಾದರೆ ಬಯೋಮೆಟ್ರಿಕ್ ಇಕವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹೌದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ರೈತರು ಪ್ರತಿ ವರ್ಷವೂ ಬಯೋಮೆಟ್ರಿಕ್ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಸಹಾಯಕ ನಿರ್ದೇಶಕಿ ಶಾಂತಾಮಣಿ ಜಿ. ತಿಳಿಸಿದ್ದಾರೆ.

ಇದನ್ನುೂ ಓದಿ ಬೆಳೆ ವಿಮೆ ಹಣ ಜಮೆಯಾಗಿಲ್ಲವೇ ? ಯಾರಿಗೆ ಕರೆ ಮಾಡಬೇಕು ಇಲ್ಲಿದೆ ಮಾಹಿತಿ

ಇ ಕೆವೈಸಿ ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇಖೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇಕೆವೈಸಿ ಎಂಬ ಎರಡು ವಿಧಾನಗಳಿವೆ. ಬಯೋಮೆಟ್ರಿಕ್ ಇಕೆವೈಸಿ  ಮಾಡಿಸಿಕೊಳ್ಳಲು ರೈತರು ಹತ್ತಿರದ ನಾಗರಿಕ ಸೇವಾ ಕೇಂದ್ರ (ಸಿಎಸ್.ಸಿ) ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ರೈತರು ಸ್ವತಃ ತಾವೇ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವ pm&kisangol,aadhar face Rd ಡೌನ್ಲೋಡ್ ಮಾಡಿಕೊಂಡು ತಮ್ಮ ಇಕೆವೈಸಿಯನ್ನು ಮಾಡಿಕೊಳ್ಳಬೇಕು. ಇಕೆವೈಸಿ ಮಾಡಿಸಲು ಬಾಕಿ ಇರುವ ರೈತರ ಪಟ್ಟಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಸೂಚನಾ ಫಲಕದಲ್ಲಿ ಪ್ರಚಾರ ಪಡಿಸಲಾಗಿದ್ದು, ಸದರಿ ಪಟ್ಟಿಯಲ್ಲಿನ ರೈತರು ಮೇಲ್ಕಾಡಿಣಿಸಿದ ಸೇವಾ ಕೇಂದ್ರಗಳಲ್ಲಿ ಇಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಮೊದಲು ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಯಾರು ಯಾರಿಗೆ ಜಮೆಯಾಗುತ್ತದೆ ಎಂಬ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/homenew.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಅಲ್ಲಿ ನಿಮಗೆ ಹಲವಾರು ಆಯ್ಕೆಗಳು ಕಾಣಿಸುತ್ತವೆ. ಹೌದು, ನೀವು ನಿಮ್ಮ ಹೆಸರು ಪಿಎಂ ಕಿಸಾನ್ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಅಲ್ಲಿ ಕಾಣುವ Beneficiary list ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನಲ್ಲಿ ಯಾರು ಯಾರು ಫಲಾನುಭವಿಗಳಿದ್ದಾರೋ ಅವರ ಹೆಸರು ಕಾಣಿಸುತ್ತದೆ.

Leave a Comment