rain alert four days : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಸೆಪ್ಟೆಂಬರ್ 20 ರಿಂದ 24 ರವರೆಗೆ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
rain alert four days ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ಸೆಪ್ಟೆಂಬರ್ 20 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬಿಸುವ ಸಾಧ್ಯತೆಯಿದೆ.
ಸೆಪ್ಟೆಂಬರ್ 20 ರಿಂದ ಉತ್ತರ ಒಳನಾಡಿನ ಕೊಪ್ಪಳ ಹಾಗೂ ರಾಯಚೂರು, ಕಲಬುರಗಿ, ಬೀದರ್, ಗದಗ,ಹಾವೇರಿ, ವಿಜಯಪುರ ಹಾಗೂ ಯಾದಿಗಿರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಆರಿ ಮಳೆ ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸೆಪ್ಟೆಂಬರ್ 21 ರಂದು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಹಾಗೂ ಬಿರುಗಾಳಿ (ಗಂಟೆಗೆ 30-40 ಕಿ.ಮೀ ವೇಗದಲ್ಲಿ) ಬೀಸಬಹುದು. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಧಾರವಾಡ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಬಹುತೇಕ ಕಡೆ ಗುಡುಗು ಸಹಿತ ಸಾಧಾರಣದಿಂದ ಕೂಡಿದ ಮಳೆ ಹಾಗೂ ಬಿರುಗಾಳಿ (ಗಂಟೆಗೆ 30 – 40 ಕಿ.ಮೀ ವೇಗ) ಬೀಸಲಿದೆ ಎಂದು ಜವಾಮಾನ ಇಲಾಖೆ ತಿಳಿಸಿದೆ.
ಸೆ. 22 ರಂದು ಬೀದರ್, ಕಲಬುರಗಿ, ಬೀದರ್, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹಾಗೂ ಬೆಳಗಾವಿ, ಧಾರವಾಡ, ಗದಗ, ಯಾದಗಿರಿ, ಕೊಪ್ಪಳ ಹಾವೇರಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಹಾಗೂ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಸೆ. 23 ಬುಧವಾರ ಬೀದರ್, ಹಾವೇರಿ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಲೆಯಾಗಲಿದೆ. ಬಾಗಲಕೋಟೆ ಧಾರವಾಡ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರವಾದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸೆಪ್ಟೆಂಬರ್ 24 ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಧಾರವಾಡ, ಬೆಳಗಾವಿ, ಬಾಗಲಕೋಟೆ, ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಹಾಗೂ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಪಡಿತರ ಪಿಎಂ ಕಿಸಾನ್ ಹಣ ಪಡೆಯಲು ಇಕೆವೈಸಿ ಕಡ್ಡಾಯ ಮೊಬೈಲ್ ನಲ್ಲಿ ಮಾಡಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ ಪಡೆಯಬಹುದು.





