ಉಚಿತವಾಗಿ ಪ್ಲಾಟ್ (ನಿವೇಶನ) ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Free plot purchase subsidy : ವಸತಿ ಮತ್ತು ನಿವೇಶನ ರಹಿತರ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲು ಸೆಪ್ಟೆಂಬರ್ 30 ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿದ್ದು, ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಫಲಾನುಭವಿಗಳಿಂದ ಉಚಿತ ನಿವೇಶನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು. (ವಿವಾಹಿತ ಅಥವಾ ಏಕ ಮಹಿಳಆ ಒಡೆತನದ ಗೃಹಿಣಿ) ಮಾಜಿ ಸೈನಿಕರು, ವಿಧುರರು, ಅಂಗವಿಕಲರು, ಹಿರಿಯ ನಾಗರೀಕರಾಗಿದ್ದಲ್ಲಿ ಪುರುಷರು ಸಹ ಅರ್ಹರಾಗಿರುತ್ತಾರೆ.

ಅರ್ಜಿದಾರರು ಸಂಬಂಧಪಟ್ಟ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರಬೇಕು. ಕುಟುಂಬವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದು, ವಾರ್ಷಿಕ ಆದಾಯ 1,20,000 ರೂಪಾಯಿಕ್ಕಿಂತ ಕಡಿಮೆ ಇರಬೇಕು.

ಅರ್ಜಿದಾರರ ಕುಟುಂಬವು ವಸತಿ ಮತ್ತು ನಿವೇಶನ ರಹಿತರಾಗಿದ್ದು, ಅರ್ಜಿದಾರರು ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆ ಅಥವಾ ನಿವೇಶನವನ್ನು ಹೊಂದಿರಬಾರದು. ಬೇರೆ ಯಾವುದೇ ಯೋಜನೆ ಇಲಾಖೆಯಿಂದ ಈಗಾಗಲೇ ವಸತಿ ನಿವೇಶನ ಸೌಲಭ್ಯ ಪಡೆದಿರಬಾರದು.

ಅರ್ಹ ಫಲಾನುಭವಿಗಳು ತಮ್ಮ ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರಗಳ ದಾಖಲೆಗಳನ್ನು ಲಗತ್ತಿಸಿ ಸೆಪ್ಟೆಂಬರ್ 30 ರೊಳಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಅಱ್ಜಿ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

Free plot purchase subsidy ವಸತಿ ರಹಿತರಿಂದ ಪ್ಲಾಟ್ ಖರೀದಿಸಲು ಅರ್ಜಿ  ಆಹ್ವಾನ

ತುಮಕೂರು ಜಿಲ್ಲೆಯ ತುರುವೆಕೇರೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ನಡೆದ 2018ರ ಸಮೀಕ್ಷೆ ಪಟ್ಟಿಯಲ್ಲಿ ಕೈ ಬಿಟ್ಟಿರುವ ಅರ್ಹ ವಸತಿ ರಹಿತ ಹಾಗೂ ನಿವೇಶನ ರಹಿತರನ್ನು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವೆಬ್ ಸೈಟ್ ನಲ್ಲಿ ಅಳವಡಿಸಲು ಇದೇ  ಸೆಪ್ಟೆಂಬರ್ ತಿಂಗಳ 30 ರವರೆಗೆ ಕಾಲಾವಕಾಶ ನೀಡಿದೆ.

ಅರ್ಹರು ಈ ಸುವರ್ಣಾಕಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜ ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿಗಳ ಆದೇಶದಂತೆ ನಿವೇಶನ ರಹಿತರಿಗೆ ನಿವೇಶನವನ್ನು ಹಂಚಿಕೆ ಮಾಡಲು ಲಭ್ಯವಿರುವ ಸರ್ಕಾರಿ ಜಮೀನಿನಿಲ್ಲಿ ವಿಶೇಷ ಅಭಿಯಾನ ಕೈಗೊಂಡು ಆಶ್ರಯ ನಿವೇಶನ ಮತ್ತು ವಸತಿಗಳನ್ನು ಪಡೆಯಲು ಫಲಾನುಭವಿಗಳು ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಪುಸ್ತಕವನ್ನು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿಗದಿತ ಸಮಯದಲ್ಲಿ ನೋಂದಣಿ ಮಾಡುವ ಮೂಲಕ ಜನರು ಇದರ ಸೌಲಭ್ಯವನ್ನು ಪಡೆದುಕೊಳ್ಳಬಹುದೆಂದು  ಇಓ ಅನಂತರಾಜ್ ತಿಳಿಸಿದ್ದಾರೆ.

ವಿವಿಧ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚತೌಡಯ್ಯ ಅಭಿವೃದ್ಧಿ ನಿಗಮದಿಂದ 2026-2027ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆ ಅಡಿಯಲ್ಲಿ ಸಾಲ, ಸಹಾಯಧನ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ ಪಡಿತರ ಪಿಎಂ ಕಿಸಾನ್ ಹಣ ಪಡೆಯಲು ಇಕೆವೈಸಿ ಕಡ್ಡಾಯ ಮೊಬೈಲ್ ನಲ್ಲಿ ಮಾಡಿ

ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣಕ್ಕೆ 2022-23, 2023-24, 2024-25 ಮತ್ತು 2025-26 ಸಾಲಿನಲ್ಲಿ ಸಾಲ ಪಡೆದ ಅರ್ಹ ವಿದ್ಯಾರ್ಥಿಗಳು 2026-27ನೇ ಸಾಲಿನಲ್ಲಿ ಮುಂದುವರಿದ ಕಂತುಗಳ 2,3,4 ಮತ್ತ 5ನೇ ಕಂತಿನ (ನವೀಕರಣ) ಸಾಲ ಪಡೆಯಲು ವರ್ಷದ ವ್ಯಾಸಂಗ ದೃಢೀಕರಣ, ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿಲ್ಲ. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ನಿಗಮದ https://ambigaradevelopment.karnataka.gov.in 080 22864099 ಡಿ ದೇವರಾಜ ಅರಸು ಹಿಂದುಳಿದ ವರ್ಗಾಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು.

 

Leave a Comment