ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆ ? ಇಲ್ಲಿ ಚೆಕ್ ಮಾಡಿ

Written by Ramlinganna

Published on:

Crop insurance calculation check now : ರೈತ ಬಾಂಧವರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲಿಯೇ ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತಮಿತ್ರರೇ, ತಮಗೆಲ್ಲಾ ಗೊತ್ತಿದ್ದ ಹಾಗೆ ಈಗ ಎಲ್ಲಾ ಮಾಹಿತಿಗಳು ಮೊಬೈಲ್ ನಲ್ಲೇ ಪಡೆಯಬಹುದು. ಇದಕ್ಕಾಗಿ ಯಾರ ಸಹಾಯವೂ ಬೇಕಿಲ್ಲ, ಇಲ್ಲಿ ನೀಡಲಾದ ಮಾಹಿತಿಯಂತೆ ಒಂದೇ ನಿಮಿಷದಲ್ಲಿ ಬೆಳೆ ವಿಮೆ ಹಣ ಜಮೆಯ ಸ್ಟೇಟಸನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

Crop insurance calculation check now  ನಿಮ್ಮ ಮೊಬೈಲ್ ನಲ್ಲಿ ಯಾವ ಬೆಳೆಯಿಂದ ಎ,ಟು ವಿಮೆ ಹಣ ಜಮೆಯಾಗಬಹುದು ಹೀಗೆ ಚೆಕ್ ಮಾಡಿ

ರೈತರು ಯಾವ ಬೆಳೆಯಿಂದ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/PublicHome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು
Premium Calculator ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ತ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕ ಮಾಡಿಕೊಳ್ಳಬೇಕು. ಇದಾದ ನಂತರ ನೀವು ಯಾವ ಬೆಳೆಗೆ ವಿಮೆ ಮಾಡಿಸಿದ್ದೀರೋ ಆ ಬೆಳೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ಎಷ್ಟು ಎಕರೆಗೆ ಬೆಳೆ ವಿಮೆ ಮಾಡಿಸಿದ್ದೀರಿ ಎಂಬುದನ್ನು ಅಲ್ಲಿ ನಮೂದಿಸಬೇಕು. ಇದಾದ ನಂತರ Show Premium ಮೇಲೆ ಕ್ಲಿಕ್ ಮಾಡಬೇಕು.

ಉದಾಹರಣೆಗೆ ನೀವು ಒಂದು ಎಕರೆಗೆ ಬೆಳೆ ವಿಮೆ ಮಾಡಿಸಿದ್ದರೆ ನಿಮಗೆ ಎಕರೆಗೆ 23 ಸಾವಿರ ರೂಪಾಯಿಯವರೆಗೆ ಬೆಳೆ ವಿಮೆ ಹಣ ಜಮೆಯಾಗುವುದು. ಒಂದು ವೇಳೆ ಒಂದು ಹೆಕ್ಟೇರ್ ಜಮೀನಿದ್ದರೆ 57 ಸಾವಿರ ರೂಪಾಯಿಯವರೆಗೆ ಬೆಳೆ ವಿಮೆ ಹಣ ಜಮೆಯಾಗುವುದು. ಇದು ನಿಮ್ಮ ಬೆಳೆ ಸಂಪೂರ್ಣವಾಗಿ ಹಾಳಾಗಿರಬೇಕು. ಆಗ ಮಾತ್ರ ಇಷ್ಟು ಹಣ ಜಮೆಯಾಗವುದು.

ಬೆಳೆ ವಿಮೆ ಹಣ ಹೇಗೆ ನಿರ್ಧರಿಸುತ್ತಾರೆ ?

ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆ ಹಾಳಾಗಿರಬೇಕು. ಪ್ರಾಕೃತಿಕ ವಿಕೋಪದಿಂದಾಗಿ ಅಂದರೆ ಅತೀ ಮಳೆ ಅತೀ ಕಡಿಮೆ ಮಳೆ, ಬರಗಾಲ ಹಾಗೂ ಭೂ ಕುಸಿತದಿಂದಾಗಿ ಬೆಳೆ ಹಾಳಾದರೆ 72 ಗಂಟೆಯೊಳಗೆ ರೈತರು ವಿಮಾ ಕಂಪನಿಗೆ ಕರೆ ಮಾಡಬೇಕು.

ಇದನ್ನೂ ಓದಿ : ನಿಮ್ಮ ಅಕ್ಕಪಕ್ಕದ ರೈತರ ಹೆಸರಿಗೆಷ್ಟು ಜಮೀನಿದೆ ಇಲ್ಲೇ ಚೆಕ್ ಮಾಡಿ

ಹೌದು, ನೀವು ಯಾವ ವಿಮಾ ಕಂಪನಿಗೆ ಬೆಳೆ ವಿಮೆ ಹಣ ಪಾವತಿಸಿದ್ದೀರೋ ಆ ವಿಮಾ ಕಂಪನಿಗೆ ಕರೆ ಮಾಡಬೇಕು. ಆಘ ವಿಮಾ ಕಂಪನಿಯ ಪ್ರತಿನಿಧಿ ನಿಮ್ಮ ಜಮೀನಿಗೆ ಬರುವುದು. ಅಲ್ಲಿ ನಿಮ್ಮ ಬೆಳೆ ಯಾವ ಪ್ರಮಾಣದಲ್ಲಿ ಹಾಳಾಗಿದೆ ಎಂಬುದನ್ನು ಪರಿಶೀಲಿಸುತ್ತಾರೆ. ನಂತರ ಅವರು ಬೆಳೆ ವಿಮೆ ಹಣ ಪಾವತಿಸಲು ವಿಮಾ ಕಂಪನಿಗೆ ವರದಿ ಸಲ್ಲಿಸುತ್ತಾರೆ. ಆ ವರದಿಯ ಆಧಾರದ ಮೇಲೆ ರೈತರಿಗೆ ಬೆಳೆ ವಿಮೆ ಹಣ ಜಮೆಯಾಗುವುದು.

ಬೆಳೆ ವಿಮೆ ಹಣ ಯಾವಾಗ ಬಿಡುಗಡೆಯಾಗುತ್ತದೆ 

ಎಲ್ಲಾ ಅರ್ಹತೆ ಪಡೆದಿದ್ದರೂ ಕೆಲವು ಸಲ ವಿಮೆ ಹಣ ಜಮೆಯಾಗುವುದಿಲ್ಲ. ಏಕೆಂದರೆ ರೈತರ ಜಮೀನಿನ ಪಹಣಿಯಲ್ಲಿ ಬ್ಯಾಂಕ್ ಪಾಸ್ ಬುಕ್ ನಲ್ಲಿ ಹಾಗೂ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಹೆಸರು ಒಂದೇ ರೀತಿಯಾಗಿರಬೇಕು. ಒಂದು ವೇಳೆ ಹೆಸರು ವ್ಯತ್ಯಾಸವಿದ್ದರೆ ವಿಮೆ ಹಣ ರೈತರ ಖಾತೆಗೆ ಜಮೆಯಾಗುವುದಿಲ್ಲ. ಹಾಗಾಗಿ ಹೆಸರು ವ್ಯತ್ಯಾಸವಿದ್ದರೆ ಕೂಡಲೇ ಹೆಸರು ಸರಿಪಡಿಸಿಕೊಳ್ಳಬೇಕು. ಆಗ ಮಾತ್ರ ನಿಮ್ಮ ಖಾತೆಗೆ ಹಣ ಜಮೆಯಾಗುವುದು.

Leave a Comment