ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ ಇಲ್ಲಿದೆ ಮಾಹಿತಿ

Written by Ramlinganna

Published on:

PM kisan next installment : ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಯಾವಾಗ ಜಮೆಯಾಗಲಿದೆ ಹಾಗೂ ಮುಂದಿನ ಕಂತು ಜಮೆಯಾಗಬೇಕಾದರೆ ರೈತರೇನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ರೈತ ಮಿತ್ರರೇ, ತಮಗೆಲ್ಲಾ ಗೊತ್ತಿದ್ದ ಹಾಗೆ, ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಮ ಜಮೆಯಾಗಬೇಕಾದರೆ ಇಕೆವೈಸಿ ಮಾಡಿಸುವುದು ಕಡ್ಡಾಯಾಗಿದೆ..ಹೌದು, ಮಿತ್ರರೇ ಇಕೆವೈಸಿ ಮಾಡಿಸಲೇ ಬೇಕು. ಇಲ್ಲದಿದ್ದರೆ ಮುಂದಿನ ಕಂತು ಜಮೆಯಾಗುವುದಿಲ್ಲ. ಹಾಗಾದರೆ ಇಕೆವೈಸಿ ಮಾಡಿಸಲು ಏನು ಮಾಡಬೇಕು ಎಲ್ಲಿ ಮಾಡಿಸಬೇಕು. ಎಂಬ ಮಾಹಿತಿ ಇಲ್ಲಿದೆ.

PM kisan next installment ಪಿಎಂ ಕಿಸಾನ್ ಏಕೆವೈಸಿ ಹೇಗೆ ಎಲ್ಲಿ ಮಾಡಿಸಬೇಕು ?

ಪಿಎಂ ಕಿಸಾನ್ ನಿಧಿ ಪಡೆಯುತ್ತಿರುವ ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್  ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಇಕೆವೈಸಿ ಪೂರ್ಣಗೊಳಿಸಬೇಕು. ಇಲ್ಲದೆ ಇದ್ದರೆ ಮೊಬೈಲ್ ಮೂಲಕ ಯಾಪ್ ಬಳಸಿಯೂ ಇಕೆವೈಸಿ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ PMKISAN eKYC through FaceRecognition  APP ಮೂಲಕವೂ ರೈತರು ಸ್ವತಃ ಇಕೆವೈಸಿ ಮಾಡಿಕೊಳ್ಳಬಹುದು.

ಏನಿದು ಪಿಎಂ ಕಿಸಾನ್ ಯೋಜನೆ ?

ರೈತ ಬಾಂಧವರೇ ತಮಗೆಲ್ಲಾ ಗೊತ್ತಿದ್ದ ಹಾಗೆ, ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೆ ಕೃಷಿ ಚಟುವಟಿಕೆಗೆ ನೆರವಾಗುವಂತೆ ಪ್ರತಿ 4 ತಿಂಗಳಿಗೊಮ್ಮೆ ತಲಾ 2 ಸಾವಿರ ರೂಪಾಯಿಯಂತೆ ವಾರ್ಷಿಕ ಮೂರು ಕಂತುಗಳಲ್ಲಿ ಒಟ್ಟು 6 ಸಾವಿರ ರೂಪಾಯಿಗಳನ್ನು ನೇರವಾಗಿ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಅದರಂತೆ ಇಲ್ಲಿಯವೆರೆಗೆ 23 ಕಂತುಗಳಲ್ಲಿ ಹಣ ಪಾವತಿಸಲಾಗಿದೆ.

ಪಿಎಂ ಕಿಸಾನ್ ಯೋಜನೆಯ ಪರಿಷ್ಕೃತ ಮಾರ್ಗಸೂಚಿ ಅನ್ವಯ ಪ್ರತಿ ವರ್ಷ ಆರ್ಥಿಕ ನೆರವು ಪಡೆಯಲು ಇ ಕೆವೈಸಿ ಕಡ್ಡಾಯವಾಗಿದೆ.ಮುಂದಿನ ದಿನಗಳಲ್ಲಿ ಅರ್ಹ ರೈತರಿಗೆ ಆರ್ಥಿಕ ನೆವರು ವರ್ಗಾವಣೆ ಆಗಬೇಕಾದರೆ ಬಯೋಮೆಟ್ರಿಕ್ ಅಥವಾ ಫೇಸ್ ಅಥೆಂಟಿಕೇಶನ್ ಮೂಲಕ ಇಕೆವೈಸಿ ಮಾಡಿಸಬೇಕಿದೆ. ಹೀಗಾಗಿ ಅರ್ಹ ಫಲಾನುಭವಿ ರೈತರು ಸಮೀಪದ ಸಾಮಾನ್ಯ ನಾಗರಿಕ ಸೇವಾ ಕೇಂದ್ರಗಳು, ಗ್ರಾಮ ಒನ್ ಕೇಂದ್ರ ಮತ್ತು ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಇಕೆವೈಸಿ ಮಾಡಿಸಿಕೊಳ್ಳಬಹುದು. ಇಲ್ಲವೇ ರೈತರು ಸ್ವತಃ ಅಥವಾ ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಕೃಷಿ ಸಂಗಿ (ವಿಲೇಜ್ ನೋಡಲ್ ಆಫೀಸರ್) ಅವರನ್ನು ಭೇಟಿಯಾಗಿ ಅವರ ಮೂಲಕ ಪಿಎಂ ಕಿಸಾನ್ ಮೊಬೈಲ್ ಅಪ್ಲಿಕೇಶನ್ ನ ಫೇಸ್ ಅಥೆಂಟಿಕೇಶನ್ ಮೂಲಕ ಇಕೆವೈಸಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.  ಹೆಚ್ಚಿನ ಮಾಹಿತಿಗೆ ತಮ್ಮ ವ್ಯಾಪ್ತಿಯ ತಾಲೂಕು ಸಹಾಯಕ ಕೃಷಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು.

ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗುತ್ತದೆ ?

ಪಿಎಂ ಕಿಸಾನ್ ಹಣ ಅಕ್ಟೋಬರ್ ತಿಂಗಳಲ್ಲಿ ಜಮೆಯಾಗುವ ಸಾಧ್ಯತೆಯಿದೆ. ಹೌದು, ಪಿಎಂ ಕಿಸಾನ್ ಯೋಜನೆಯ 23ನೇ ಕಂತಿನ ಹಣ ಜೂನ್ ತಿಂಗಳಲ್ಲಿ ಜಮೆಯಾಗಿತ್ತು. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಮೆಯಾಗುವ ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಅಕ್ಟೋಬರ್ ತಿಂಗಳಲ್ಲಿ ಜಮೆಯಾಗುವ ಸಾಧ್ಯತೆಯಿದೆ.

ಪಿಎಂ ಕಿಸಾನ್ ಸ್ಟೇಟಸ್ ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಫಲಾನುಭವಿಗಳು ತಮ್ಮ ಸ್ಟೇಟಸ್ ಚೆಕ್ ಮಾಡಲು ಈ ಲಿಂಕ್

https://pmkisan.gov.in/BeneficiaryStatus_New.aspx

ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನೀವು ನಿಮ್ಮ Registration No ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯ್ ಕೋಡ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನೀವು ನಿಮ್ಮ ಸ್ಟೇಟಸ್ ಚೆಕ್ ಮಾಡಬಹುದು.

ಇದನ್ನೂ ಓದಿ : ರೈತರಿಗೆ ಗುಡ್ ನ್ಯೂಸ್ ನಿಮ್ಮ ಮೊಬೈಲ್ ನಲ್ಲೇ ಎಫ್ಐಡಿ ಹೀಗೆ ಚೆಕ್ ಮಾಡಿ

ಒಂದು ವೇಳೆ ನಿಮಗೆ ರೆಜಿಸ್ಟ್ರೇಶನ್ ನಂಬರ್ ಗೊತ್ತಿಲ್ಲದಿದ್ದರೆ Know Your Registration No ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. ನಂತರ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ನೀವು ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಬಹುದು.

Leave a Comment