Gangakalayana 3 lakh subsidy : ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೋರ್ವೆಲ್ ಕೊರೆಯಲು 3 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ರೈತ ಮಿತ್ರರೇ ತಮಗೆಲ್ಲಾ ಗೊತ್ತಿದ್ದ ಹಾಗೆ ಕಳೆದ ತಿಂಗಳು ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ರೈತರಿಗೆ ಸಹಾಯವಾಗಲೆಂದು ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.
ಯಾವ ಯಾವ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ ?
2026-27ನೇ ಸಾಲಿನಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮಗಳಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿದಾರರು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು ?
ಒಕ್ಕಲಿಗ ಸಮುದಾಯಕ್ಕೆ ಸೇರಿದ್ದು ವಾರ್ಷಿಕ ಆದಾಯ 98 ಸಾವಿರ ರೂಪಾಯಿಗಳ ಮಿತಿಯೊಳಗಿರುವ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು.
Gangakalayana 3 lakh subsidy ಎಷ್ಟು ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ಸಿಗಲಿದೆ ?
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಯೋಜನೆ ಘಟಕ ವೆಚ್ಚ 4.75 ಲಕ್ಷ ರೂಪಾಯಿಗಳಲ್ಲಿ 4.25 ಲಕ್ಷ ರೂಪಾಯಿಗಳ ಸಹಾಯಧನ ಇದರಲ್ಲಿ 75 ಸಾವಿರ ರೂಪಾಯಿಗಳನ್ನು ವಿದ್ಯುದ್ದೀಕರಣಕ್ಕೆ ಎಸ್ಕಾಂಗಳಿಗೆ ಪಾವತಿ ಮಾಡಲಾಗುವುದು. 50 ಸಾವಿರ ರೂಪಾಯಿಗಳ ಸಾಲವನ್ನು ಶೇ. 4 ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
ಉಳಿಕೆ ಜಿಲ್ಲೆಗಳಿಗೆ ಘಟಕ ವೆಚ್ಚ 3.75 ಲಕ್ಷ ಇದರಲ್ಲಿ ಸಹಾಯಧನ 3.25 ಲಕ್ಷ ರೂಪಾಯಿ 50 ಸಾವಿರ ರೂಪಾಯಿಗಳ ಸಾಲವನ್ನು ಶೇ. 4 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಸಹಾಯಧನ ಮೊತ್ತದಲ್ಲಿ ಪ್ರತಿ ಕೊಳವೆ ಬಾವಿಗೆ 75 ಸಾವಿರ ರೂಪಾಯಿಗಳನ್ನು ವಿದ್ಯುದ್ದೀಕರಣಕ್ಕೆ ಎಸ್ಕಾಂಗಳಿಗೆ ಪಾವತಿ ಮಾಡಲಾಗುವುದು.
ಈ ಯೋಜನೆಯಡಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉಥ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಜಮೀನು ಇರಬೇಕು.
ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕು.
2023-24, 2024-25, 2025-26 ನೇ ಸಾಲಿನಲ್ಲಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಗಳಲ್ಲಿ ಕಾರಣಾಂತರಗಳಿಂದ ಆಯ್ಕೆಯಾಗದೆ ಇರುವ ಅರ್ಹ ಅರ್ಜಿದಾರರು 2026-27ನೇ ಸಾಲಿನ ಪ್ರಕಟಣೆಗೆ ಅರ್ಜಿಯನ್ನು ಸಲ್ಲಿಸುವುದು ಅವಶ್ಯಕತೆಯಿರುವುದಿಲ್ಲ. ಕಳೆದ ಸಾಲುಗಳಲ್ಲಿ ಸಲ್ಲಿಸಿದ ಅರ್ಜಿಯನ್ನೇ ಆಯ್ಕೆ ಸಮಿತಿಗಳ ಮುಂದೆ ಆಯ್ಕೆಗೆ ಮತ್ಮೊಮ್ಮೆ ಮಂಡಿಸಲಾಗುವುದು.
ಇದನ್ನೂ ಓದಿ ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ ಇಲ್ಲಿದೆ ಮಾಹಿತಿ
ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿದಾರರು ಸೇವಾ ಸಿಂದು ಪೋರ್ಟಲ್ ನದಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಕ್ಟೋಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30 ರಂದು ನಿಗದಿಪಡಿಸಲಾಗಿತ್ತು.
ಯೋಜನೆಯ ಅರ್ಹತೆ, ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಾಲತಾಣ
https://kvcdc.karnataka.gov.in
ಅಥವಾ ನಿಗಮದ ದೂರವಾಣಿ ಸಂಖ್ಯೆ 080 29904350, 29904268 ಅನ್ನು ಸಂಪರ್ಕಿಸುವುದು ಅಥವಾ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದವರ ಕಚೇರಿಯನ್ನು ಸಂಪರ್ಕಿಸಬಹುದು.





