Baragala parihara 1st installment : ಬರಗಾಲದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ರಾಜ್ಯ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಹೌದು, ರೈತ ಮಿತ್ರರೇ ತಮಗೆಲ್ಲಾ ಗೊತ್ತಿದ್ದ ಹಾಗಿ ಈ ವರ್ಷ ಭೀಕರ ಬರಗಾಲದಿಂದಾಗಿ ರೈತರ ಅಪಾರ ಬೆಳೆ ಹಾಳಾಗಿತ್ತು. ಹಾಗಾಗಿ ರಾಜ್ಯ ಸರ್ಕಾರವು 200 ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿತ್ತು. ಈಗ ಬರಗಾಲದ ಪರಿಹಾರದ ಮೊದಲ ಕಂತಿನ ಹಣ 1250 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ಬುಧವಾರ ಹೊಸಪೇಟೆ ತಾಲೂಕಿನ ಪೊತಲಕಟ್ಟೆ ಗ್ರಾಮದಲ್ಲಿ ಬರಪೀಡಿತ ಮೆಕ್ಕೆಜೋಳದ ಜಮೀನುಗಳಿಗೆ ಬೇಟಿ ನೀಡಿ ಪರಿಶೀಲಿಸಿದ ಡಿಸಿಎಂ ರೈತರೊಂದಿಗೆ ಸಂವಾದ ನಡೆಸಿದರು.
ಈಗಾಗಲೇ ರಾಜ್ಯದಲ್ಲಿ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ 23 ತಾಲೂಕುಗಳಲ್ಲಿ ಬರ ಪರಿಸ್ಥಿತಿಯ ಸ್ಥಳ ಪರಿಶೀಲನೆ ನಡೆಯುತ್ತಿದೆ. ಶೀಘ್ರದಲ್ಲಿ ಮತ್ತಷ್ಟು 10 ರಿಂದ 15 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಸಾಧ್ಯತೆ ಇದೆ ಎಂದು ಹೇಳಿದರು.
Baragala parihara 1st installment ಬರಗಾಲ ಪರಿಹಾರ ಹಣ ಯಾವಾಗ ಜಮೆಯಾಗುತ್ತದೆ ?
ಮೊದಲ ಕಂತಿನಡಿ ಅರ್ಹ ರೈತರಿಗೆ ತಲಾ 2500 ರೂಪಾಯಿ ಪರಿಹಾರವನ್ನು ನಿಗದಿತ ಮಾನದಂಡಗಳ ಪ್ರಕಾರ ಮುಂದಿನ 2-3 ದಿನಗಳಲ್ಲಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.
ಮೇವು ನಿರ್ವಹಣೆಗೆ ಮತ್ತೊಂದು 25 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕುಗಳನ್ನು ತೆರೆಯಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬೆಳೆ ಹಾಗೂ ಆಸ್ತಿ ನಷ್ಟದ ಪ್ರಾಥಮಿಕ ಅಂದಾಜು 50 ಸಾವಿರ ಕೋಟಿಯಿಂದ 60 ಸಾವಿರ ಕೋಟಿಯಷ್ಟಿದ ಎಂದು ತಿಳಿಸಿದರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್.ಡಿ.ಆರ್.ಎಫ್) ನಿಯಮಗಳಡಿ ಕೇಂದ್ರ ಸರ್ಕಾರದಿಂದ ಸುಮಾರು 10000 ಕೋಟಿಯಿಂದ 11000 ಕೋಟಿ ನೆರವು ಕೋರಲಾಗಿದೆ. ಕೇಂದ್ರ ಬರ ಪರಿಸ್ಥಿತಿ ಅಧ್ಯಯನ ತಂಡಗಳು ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಭೇಟಿ ನೀಡಿದ್ದು, ಶೀಘ್ರದಲ್ಲೇ ತಮ್ಮ ವರದಿಯನ್ನು ಸಲ್ಲಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಬರ ಪರಿಹಾರ ಹಣ ಜಮೆಯ ಸ್ಟೇಟಸ್ ಎಲ್ಲಿ ಚೆಕ್ ಮಾಡಬೇಕು ?
ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ರೈತರು ಚೆಕ್ ಮಾಡಲು ಈ
https://parihara.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪರಿಹಾರ ಹಣ ಸಂದಾಯ ವರದಿ (Parihara Payment Report) ಕಾಣಿಸುತ್ತದೆ. ಅಲ್ಲಿ ನೀವು ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity Type ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Year Type ನಲ್ಲಿ 2026-27 ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಆಧಾರ್ ಸಂಖ್ಯೆ ನಮೂದಿಸಿನಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ಇದಾದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ನೀವು ವಿವರಗಳನ್ನು ಪಡೆಯಲು / Fetch Details ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗಿದ್ದರೆ ಜಿಲ್ಲೆ, ತಾಲೂಕು, ಹೆಸರು, ಬ್ಯಾಂಕ್ ಹೆಸರು, ಸರ್ವೆ ನಂಬರ್, ಯಾವ ದಿನಾಂಕ ಹಮ ಜಮೆ ಮಾಡಲಾಗಿದೆ ಎಷ್ಟು ಹಣ ಜಮೆ ಮಾಡಲಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
ಇದನ್ನೂ ಓದಿ : ನಿಮ್ಮ ಜಮೀನು 20 ವರ್ಷಗಳ ಹಿಂದೆ ಯಾರ ಹೆಸರಿನಲ್ಲಿತ್ತು? ಇಲ್ಲೇ ಚೆಕ್ ಮಾಡಿ
ಇನ್ನೆರಡು ದಿನಗಳಲ್ಲಿ ರೈತರ ಖಾತೆಗೆ ನೇರವಾಗಿ ಜಮೆಯಾಗುವುದರಿಂದ ಎರಡು ದಿನಗಳ ನಂತರ ಸ್ಟೇಟಸ್ ಚೆಕ್ ಮಾಡಿ ಹಣ ಜಮೆಯಾಗಿರುವ ಕುರಿತು ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.





