Subsidy for bike purchase : ಮೀನುಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಸಂತಸದ ಸುದ್ದಿ. ಅದೇನಪಾ ಅಂದರೆ, ಮೀನು ಮಾರಾಟಕ್ಕೆ ದ್ವಿಚಕ್ರ ವಾಹನ (ಬೈಕ್ ) ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಮೀನುಗಾರಿಕೆ ಇಲಾಖೆಯು ಪ್ರಸಕ್ತ ಸಾಲಿಗೆ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆ ಅಡಿಯಲ್ಲಿ ಮೀನು ಸಲಕರಣೆ ಕಿಟ್, ಮೀನು ಮಾರುಕಟ್ಟೆ ನಿರ್ಮಾಣ ಹಾಗೂ ಮೀನು ಮಾರಾಟಕ್ಕೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಮತ್ತು ಸಮಗ್ರ ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಮರಿ ಖರೀದಿ, ಜಲಾಶಯ, ಕೆರೆಗಳ ಅಂಚಿನಲ್ಲಿ ಮೀನುಮರಿ ಪಾಲನೆಗೆ ಸಹಾಯಧನ ನೀಡಲಾಗುವುದು. ಗ್ರಾಮ ಪಂಚಾಯತ್ ಕೆರೆಗಳಿಗೆ ಉಚಿತವಾಗಿ ಮೀನುಮರಿ ದಾಸ್ತಾನು ಮಾಡುವ ಸಲುವಾಗಿ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯ್ದ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮೀನುಗಾರರು ನಾಗರಿಕ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಎಪ್ಐಡಿ ಬಳಸಿಕೊಂಡು ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಬಾದಾಮಿ ಮೊಬೈಲ್ ನಂಬರ್ 8095303104, 9886820761 ಜಮಖಂಡಿ ಮೊಬೈಲ್ ನಂಬರ್ 9886820761 ನಂಬರಿಗೆ ಸಂರ್ಕಿಸುವತೆ ಮೀನುಗಾರಿಕೆ ಉಪನಿರ್ದೇಶಕಿ ಅಂಜನಾದೇವಿ ಟಿ. ತಿಳಿಸಿದ್ದಾರೆ.
Subsidy for bike purchase ಎಫ್ಐಡಿ ಇದ್ದರೆ ಮಾತ್ರ ಈ ಸೌಲಭ್ಯ ಸಿಗಲಿದೆ ?
ಹಾಗಾದರೆ ಏನಿದು ಎಫ್ಐಡಿ ಎಂಬ ಪ್ರಶ್ನೆ ನಿಮಗೆ ಮೂಡುತ್ತಿದ್ದರೆ ಆಧಾರ್ ಕಾರ್ಡ್, ವೋಟರ್ ಕಾರ್ಡ್, ಪ್ಯಾನ್ ಕಾರ್ಡ್ ದಂತೆ ರೈತರಿಗೆ ಎಫ್ಐಡಿ ಕಾರ್ಡ್ ಅತೀ ಮುಖ್ಯವಾದ ದಾಖಲೆಯಾಗಿದೆ. ಹೌದು, ಈ ದಾಖಲೆಯ ಸಹಾಯದಿಂದ ರೈತರು ಸರ್ಕಾರಿ ಸೌಲಭ್ಯ ಪಡೆದುಕೊಳ್ಳಬಹುದು. ಹಾಗಾದರೆ ಎಪ್ಐಡಿ ಮಾಡಿಸಿಲ್ಲವೋ ಈಗಲೇ ಎಫ್ಐಡಿ ಮಾಡಿಸಿಕೊಳ್ಳಬಹುದು.
ನಿಮ್ಮ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ ಹೀಗೆ ಚೆಕ್ ಮಾಡಿ
ನಿಮ್ಮ ಹೆಸರಿಗೆ ಎಪ್ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://fruits.karnataka.gov.in/OnlineUserLogin.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಫ್ರೂಟ್ಸ್ ಐಡಿ ಚೆಕ್ ಮಾಡುವ ಹಾಗೂ ಎಫ್ಐಡಿ ನೋಂದಣಿ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ನಂತರ ನೀವು ಪಾಸ್ವರ್ಡ್ ನಮೂದಿಸಬೇಕು ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿದ ನಂತರ ನಿಮಗೆ ಫ್ರೂಟ್ಸ್ ಐಡಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಎಫ್ಐಡಿ ಸೇರಿದಂತೆ ಜಮೀನಿನ ಎಲ್ಲಾ ಮಾಹಿತಿಯನ್ನು ಪಡೆಯಬಹುದು.
ಇದನ್ನೂ ಓದಿ : ಮೊಬೈಲ್ ನಲ್ಲಿಯೇ ಜಮೀನಿನ ಪೋಡಿ ನಕ್ಷೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಒಂದು ವೇಳೆ ನಿಮಗೆ ಪಾಸ್ವರ್ಡ್ ನೆನಪಿಲ್ಲದಿದ್ದರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Reset Password ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರಿಗೆ ಪಾಸ್ವರ್ಡ್ ಕಳಿಸಲಾಗುವುದು. ಆ ಪಾಸ್ವರ್ಡ್ ನಮೂದಿಸಿ ಲಾಗಿನ್ ಮಾಡಿಕೊಳ್ಳಬೇಕು. ನಂತರ ನೀವು ಪಾಸ್ವರ್ಡ್ ನಿಮಗೆ ಬೇಕಾದಂತೆ ಬದಲಾಯಿಸಿಕೊಳ್ಳಬೇಕು. ಮೊದಲು ಹಳೆಯ ಪಾಸ್ವರ್ಡ್ ಅಂದರೆ ನಿಮ್ಮ ಮೊಬೈಲಿಗೆ ಬಂದ ಪಾಸ್ವರ್ಡ್ ಹಾಕಬೇಕು. ಇದಾದ ನಂತರ ನೀವು ಹೊಸದಾಗಿ ಕ್ರಿಯೇಟ್ ಮಾಡಿದ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಬೇಕು. ಆಗ ನಿಮ್ಮ ಮೊಬೈಲಿಗೆ ಮತ್ತೇ ಓಟಿಪಿ ಬರುತ್ತದೆ. ಅದನ್ನು ನಮೂದಿಸಿ ಲಾಗಿನ್ ಆಗಬೇಕು





