Goods and taxi vehicle subsidy : ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಸರಕು ವಾಹನ ಹಾಗೂ ಟ್ಯಾಕ್ಸಿ ವಾಹನ (ಹಳದಿ ಬೋರ್ಡ್) ಉದ್ದೇಶದಡಿ ವಾಹನ ಖರೀದಿಗೆ 4 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯ ( ಬ್ಯಾಂಕ್ ಸಹಯೊಗದೊಂದಿಗೆ) ವಾಹನ ಖರೀದಿಗೆ ಶೇ. 75 ರಷ್ಟು ಅಥವಾ ಗರಿಷ್ಠ 4 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪಾಸ್ಟ್ ಫುಡ್ ಟ್ರಕ್ ಟ್ರೈಲರ್ ಅಥವಾ ಮೊಬೈಲ್ ಕಿಚನ್ ಫುಡ್, ಕಿಯೋಸ್ಕ್ (ಸಫಾಯಿ ಕರ್ಮಚಾರಿ ನಿಗಮ ಹೊರತುಪಡಿಸಿ) ಫುಡ್ ಕಾರ್ಟ್ ವಾಹನಗಳ ಉದ್ದೇಶದಡಿ ಘಟಕ ವೆಚ್ಚದ ಶೇ. 75 ರಷ್ಟು ಅಥವಾ ಗರಿಷ್ಠ 4 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.
Goods and taxi vehicle subsidy ಯಾವ ಯಾವ ನಿಗಮಗಳಿಂದ ಅರ್ಜಿ ಆಹ್ವಾನ
ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಸಹಯೋಗದೊಂದಿಗೆ) ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ರೈತರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್ ಮೂಲಕ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
https://sevaone.karnataka.gov.in/services
ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
ಹೈನುಗಾರಿಕೆಗೂ ಸಬ್ಸಿಡಿ
ಸಫಾಯಿ ಕರ್ಮಚಾರಿ ನಿಗಮ ಹೊರತು ಪಡಿಸಿ ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮ ಹಸುಗಳಿಗೆ ಘಟಕ ವೆಚ್ಚದ ಶೇ. 50 ರಷ್ಟು ಅಥವಾ ಗರಿಷ್ಠ 1.25 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು.
ಇತರೆ ಉದ್ದೇಶ – ಸಣ್ಮ ಕೈಗಾರಿಕೆ, ಸೇವಾ ಕ್ಷೇತ್ರ, ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಠ 2 ಲಕ್ಷ ರೂಪಾಯಿಗಳ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು. ಆದಿ ಕರ್ನಾಟಕ, ಆದಿ ಆಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿದ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
ಅರ್ಜಿ ಸಲ್ಲಿಸಲು ಭಾವಚಿತ್ರ ಬೇಕು. ಜಾತಿ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆದಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು), ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು.
ಇದನ್ನೂ ಓದಿ : ಇ ಸ್ವತು ನೀಡಲು ಅರ್ಜಿ ಆರಂಭ ನಿಮ್ಮ ಇ ಸ್ವತ್ತು ದಾಖಲೆ ಹೀಗೆ ಡೌನ್ಲೋಡ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ ಅಥವಾ ನಿಗಮಗಳ ವೆಬ್ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ, ಎಸ್.ಟಿ ಸಹಾಯವಾಣಿ 9482300400 ಗೆ ಸಂಪರ್ಕಿಸಬಹುದು.





