ಕೃಷಿ ಯಂತ್ರೋಪಕರಣ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Krishi yantropakarana subsidy get :  ಕೃಷಿ ಯಂತ್ರೋಪಕರಣಗಳ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿ ಫ್ಲೋ, ಡಿಸ್ಕ್ ಫ್ಲೋ ಸೇರಿದಂತೆ ಇತರ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ನೀಡಲಾಗುವುದು.

ಪ್ರಸಕ್ತ 2026-27ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಡಿ ಸಾಮಾನ್ಯ ವರ್ಗದ ರೈತರಿಗೆ ಶೇ. 50 ರಷ್ಟು ಸಬ್ಸಿಡಿಯಲ್ಲಿ ಕೃಷಿ ಯಂತ್ರೋಪಕರಣಗಳ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೋಮವಾರಪೇಟೆ ತಾಲೂಕು ಕೃಷಿ ನಿರ್ದೇಶಕ ಕೆ.ಪಿ ವೀರಣ್ಣ ಮನವಿ ಮಾಡಿದ್ದಾರೆ.

Krishi yantropakarana subsidy get ಯಾವ ಯಾವ ಕೃಷಿ ಯಂತ್ರೋಪಕರಣಗಳ ಖರೀದಿಗೆ  ಅರ್ಜಿ ಆಹ್ವಾನ

ಈ ಯೋಜನೆಯಡಿ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟಾವೇಟರ್, ಎಂ.ಬಿ. ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಚಂತ್ರ, ಡೀಸೆಲ್ ಪಂಪ್ ಸೆಟ್, ಪವರ್ ಸ್ಪ್ರ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ ಹಾಗೂ ಮುಸುಕಿನ ಜೋಳ ಒಕ್ಕಣೆ ಯಂತ್ರಗಳನ್ನು ಸಹಾಯಧನದಲ್ಲಿ ಪಡೆಯಬಹುದು. ಅಲ್ಲದೆ ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಸಂಬಂಧಿಸಿದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡು ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳಿಗೂ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.

ಅರ್ಜಿ ಎಲ್ಲಿ ಸಲ್ಲಿಸಬೇಕು ?

ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಆಸಕ್ತ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ವ ಯಾವ ದಾಖಲ ಬೇಕು ?

ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ (ಆರ್.ಟಿಸಿ) ಆಧಾರ್ ಕಾರ್ಡ್ ಝಿರಾಕ್ಸ್ ಪ್ರತಿ ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಒಂದು ಛಾಯಾಚಿತ್ರ ಹಾಗೂ 100 ರೂಪಾಯಿ ಛಾಪಾ ಕಾಗದವನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ತೋಟಗಾರಿಕೆ ಇಲಾಖೆ ಅಥವಾ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೆ.ಪಿ. ವೀರಣ್ಣ ತಿಳಿಸಿದ್ದಾರೆ.

ಕೃಷಿ ಯಂತ್ರೋಪಕರಣಗಳ ಸೌಲಭ್ಯ ಪಡೆಯಲು ಕೊನಯೆ ದಿನಾಂಕದವರೆಗೆ ಕಾಯದೆ ಬೇಗನೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೌದು, ತಡಮಾಡದೆ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ. ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.

ಕೃಷಿ ಯಂತ್ರೋರಕರಣಗಳ ಸೌಲಭ್ಯ ಪಡೆಯಲು ಬೇಕಾಗುವ ಅರ್ಹತೆಗಳು

ಕೃಷಿ ಯಂತ್ರೋಪಕರಣಗಳ ಸೌಲಭ್ಯ ಪಡೆಯಲು ರಾಜ್ಯದ ನಿವಾಸಿಯಾಗಿರಬೇಕು. ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ರೈತರು ಕನಿಷ್ಠ 1 ಎಕರೆ ಕೃಷಿ ಜಮೀನನ್ನು ಹೊಂದಿರಬೇಕು. ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರಬೇಕು. ಜಮೀನು ಫಲಾನುಭವಿ ಹೆಸರಿನಲ್ಲಿ ಇರಬೇಕು. ರೈತರ ಗುರುತಿನ ಸಂಖ್ಯೆ (ಎಫ್.ಐ.ಡಿ) ಇರಬೇಕು. ಫಲಾನುಭವಿ ಹೆಸರಿನಲ್ಲಿ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಇರಬೇಕು.  ವಿಳಾಸ ಪುರಾವೆ, ಪಡಿತರ ಚೀಟಿ ಹೊಂದಿರಬೇಕು. ಭೂ ಮಾಲಿಕತ್ವದ ಪುರಾವೆ (ದಾಖಲೆ) ಅಥವಾ ಭೂ ಕಂದಾಯ ರಸೀದಿ ಹೊಂದಿರಬೇಕು. ಪಾಸ್ ಪೋರ್ಟ್ ಗಾತ್ರ ಛಾಯಾಚಿತ್ರ ಹೊಂದಿರಬೇಕು.

ಇದನ್ನೂ ಓದಿ ನಿಮ್ಮ ಜಮೀನಿನ ಮೇಲೆ ಬೆಳೆ ಸಾಲವಿದೆಯೇ ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಒಮ್ಮೆ ಸಬ್ಸಿಡಿಯಲ್ಲಿ ಕೃಷಿ ಯಂತ್ರೋಪಕರಣ ಪಡೆದರೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಿಲ್ಲ. ಅರ್ಜಿ ಸಲ್ಲಿಸಿದರೂ ಅವರಿಗೆ ಸೌಲಭ್ಯ ಸಿಗುವುದಿಲ್ಲ.  ಹೊಸಬರಿಗೆ ಆದ್ಯತೆ ನೀಡಲಾಗುವುದು. ಲಭ್ಯತೆಯ ಆಧಾರದ ಮೇಲೆ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗುವುದು. ಹಾಗಾಗಿ ಕೂಡಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.

Leave a Comment