ಉಚಿತವಾಗಿ 20 ಕೋಳಿ ಮರಿ ವಿತರಣೆಗೆ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Written by Ramlinganna

Published on:

Free chicks distribution now : ಉಚಿತವಾಗಿ ಕೋಳಿ ಮರಿ ವಿತರಣೆಗೆ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಗದಗ, ಧಾರವಾಡ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗದಗ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ತಾಂಡಾಗಳಲ್ಲಿ ಇರುವ ಅರ್ಹ ಮಹಿಳಾ ಫಲಾನುಭವಿಗಳಿಗೆ ತಾಂಡಾ ಅಭಿವೃದ್ಧಿ ನಿಗಮದ ಯೋಜನೆಯಡಿ ಸಹಕಾರ ಕುಕ್ಕುಟ ಮಹಾ ಮಂಡಳ ನಿಯಮಿತ ಇವರ ಮುಖಾಂತರ ಐದು ವಾರದ ದೇಶಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಯಡಿ 5 ವಾರದ ದೇಶಇ ಕೋಳಿ ಮರಿ ವಿತರಿಸಲಾಗುವುದು. ಪ್ರತಿ ಫಲಾನುಭವಿಗೆ 20 ಕೋಟಿ ಮರಿಗಳನ್ನು ವಿತರಿಸಲಾಗುವುದು.

Free chicks distribution now ಗದಗ ಜಿಲ್ಲೆಯಿಂದಲೂ ಉಚಿವಾಗಿ 20 ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ

ಗದಗ ತಾಲೂಕಿನ ಗ್ರಾಮೀಣ ವಿಭಾಗದ ಅರ್ಹ ರೈತ ಮಹಿಳೆಯರಿಂದ (ಬಂಜಾರ, ಲಂಬಾಣಿ, ಲಮಾಣಿ, ಸುಕಾಲಿ, ಸುಗಾಲಿ ಜನಾಂಗದವರಿಗೆ ಮಾತ್ರ) ಅರ್ಜಿ ಕರೆಯಲಾಗಿದೆ.

ಅರ್ಹ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆ, ಗದಗ ಈ ಕಚೇರಿಗೆ ಸಂಪರ್ಕಿಸಬಹುದು

ಕುಂದಗೋಳ ತಾಲೂಕಿನ ರೈತ ಮಹಿಳೆಯರಿಗೆ ಉಚಿತವಾಗಿ ಕೋಳಿ ಮರಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಐದು ವಾರಗಳ ದೇಶಿ ಹಾಗೂ ಸುಧಾರಿತ ತಳಿಯ ಕೋಳಿ ಮರಿಗಳನ್ನು ಗ್ರಾಮೀಣ ಭಾಗದ ಎಸ್.ಸಿ, ಎಸ್.ಟಿ ಹಿಂದುಳಿದ ಹಾಗೂ ಸಾಮಾನ್ಯ ವರ್ಗದ 99 ಹಾಗೂ ಬಂಜಾರ, ಲಂಬಾಣಿ, ಸುಕಾಲಿ, ಸುಗಾಲಿ ವರ್ಗದ 93 ರೈತ ಮಹಿಳಾ ಫಲಾನುಭವಿಗಳಿಗೆ ತಲಾ 20 ಕೋಳಿ ಮರಿಗಲನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕುಂದಗೋಳ ಪಶು ವೈದ್ಯಕೀಯ ಆಸ್ಪತ್ರೆ ಹಾಗೂ ಪಶು ವೈದ್ಯಕೀಯ ಸಂಸ್ಥೆಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸ್ವಯಂ ಉದ್ಯೋಗ ಕೈಗೊಳ್ಳಲು ಮಹಿಳೆಯರಿಗೆ ಸಬ್ಸಿಡಿ

ಸ್ವಯಂ ಉದ್ಯೋಗ ಪ್ರಾರಂಭಿಸಲು ಮಹಿಳೆಯರಿಗೆ 1 ರಿಂದ 3 ಲಕ್ಷ ರೂಪಾಯಿಯವರೆಗೆ ಬ್ಯಾಂಕ್ ಸಾಲ ಮತ್ತು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, 2026-27ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಯೋಜನೆ ಅಡಿಯಲ್ಲಿ 2 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು.

ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಿಸಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನವನ್ನು ನೀಡಲಾಗುವುದು.

ಇದನ್ನೂ ಓದಿ : ನಿಮ್ಮ ಜಮೀನಿನ ಮೇಲೆ ಬೆಳೆ ಸಾಲವಿದೆಯೇ ? ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

21 ರಿಂದ 55 ವಯೋಮಾನದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು ಕನಿಷ್ಟ 50 ಸಾವಿರ ರೂಪಾಯಿಯಿಂದ  3 ಲಕ್ಷ ರೂಪಾಯಿಯವರೆಗೆ ಸಾಲ ನೀಡಲಾಗುವುದು.

ಯಾರಿಗೆ ಎಷ್ಟು ಸಬ್ಸಿಡಿ ನೀಡಲಾಗವುದು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಆದಾಯ ಮಿತಿ 2 ಲಕ್ಷ ರೂಪಾಯಿ ಈ ಮಹಿಳೆಯರಿಗೆ ಶೇ. 75 ರಷ್ಟು ಅಥವಾ ಗರಿಷ್ಠ 2 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು. ಇತರೆ ವರ್ಗದ ಫಲಾನುಭವಿಗಳಿಗೆ ಆದಾಯ ಮಿತಿ 1.50 ಲಕ್ಷ ರೂಪಾಯಿ. ಈ ವರ್ಗದ ಮಹಿಳೆಯರಿಗೆ ಶೇ. 30 ರಷ್ಟು ಅಂದರೆ ಗರಿಷ್ಠ 90 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನಲ್ಲಿ ಧನಶ್ರೀ ಯೋಜನೆ ಅಡಿಯಲ್ಲಿ ಹೆಚ್.ಐ.ವಿ ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ನೀಡಲಾಗುವ 45 ಸಾವಿರ ರೂಪಾಯಿಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

Leave a Comment