Animal Husbandry Subsidy get now : ಹಸು ಅಥವಾ ಎಮ್ಮೆ ಸಾಕಾಣಿಕೆಗೆ 1 ಲಕ್ಷ 25 ಸಾವಿರ ರೂಪಾಯಿ ಸಬ್ಸಿಡಿ ನೀಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ರೈತ ಮಿತ್ರರೇ ತಮಗೆಲ್ಲಾ ಗೊತ್ತಿದ್ದ ಹಾಗೆ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾಗಾದರೆ ಯಾವ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು ಕೊನೆಯ ದಿನಾಂಕ ಯಾವುದು ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
Animal Husbandry Subsidy get now ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.
ಹಸು ಅಥವಾ ಎಮ್ಮೆ ಘಟಕ ವೆಚ್ಚದ ಶೇ. 50 ರಷ್ಟು ಅಥವಾ ಗರಿಷ್ಠ ಒಂದು ಲಕ್ಷ 25 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. 50 ಸಾವರ ರೂಪಾಯಿಯನ್ನು ಶೇ. 4 ರಷ್ಟು ಬಡ್ಡಿದರದಲ್ಲಿ ಸಾಲ ನೀಡಲಾಗುವುದು.
2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್ ಮೂಲಕ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
https://sevaone.karnataka.gov.in/services
ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು. ಆದಿ ಕರ್ನಾಟಕ, ಆದಿ ಆಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿದ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
ಅರ್ಜಿ ಸಲ್ಲಿಸಲು ಭಾವಚಿತ್ರ ಬೇಕು. ಜಾತಿ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆದಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು), ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು.
ಹಸು ಎಮ್ಮೆ ಖರೀದಿಸಲು ತೆಗೆದುಕೊಂಡ ಸಾಲಗಳ ಮೇಲೆ ಬಡ್ಡಿ ಸಬ್ಸಿಡಿ ಮತ್ತು ಜಾನುವಾರುಗಳಿಗೆ ವಿಮಾ ರಕ್ಷಣೆಯೂ ದೊರೆಯುತ್ತದೆ.
ಉಚಿತವಾಗಿ ಕುರಿ ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ
ಉಚಿತವಾಗಿ ಕುರಿ, ಮೇಕೆ, ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕೆಗೆ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು,ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುವುದು. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ ಆರಸೆಟ್ ನಿರ್ದೇಶಕರು ತಿಳಿಸಿದ್ದಾರೆ.
ಕೃಷಿ ಉದ್ಯಮಿ (ಕುರಿ ಮತ್ತು ಆಡು ಸಾಕಾಣಿಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ) ತರಬೇತಿಯನ್ನು ನವೆಂಬರ್ 23 ರಿಂದ ಡಿಸೆಂಬರ್ 5 ರವರೆಗೆ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ 22 ಕೊನೆಯ ದಿನವಾಗಿದೆ. ಬ್ಯೂಟಿ ಪಾರ್ಲರ್ ಮಹಿಳೆಯರಿಗಾಗಿ ತರಬೇತಿಯನ್ನು ನವೆಂಬರ್ 25 ರಿಂದ ಡಿಸೆಂಬರ್ 29 ರವರೆಗೆ ಮತ್ತು ಅಣಬೆ ಕೃಷಿ ತರಬೇತಿ ನವೆಂಬರ್ 25 ರಿಂದ ಡಿಸೆಂಬರ್ 4 ರವರೆಗೆ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ 24 ಕೊನೆಯ ದಿನವಾಗಿದೆ. ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು ಡಿಸೆಂಬರ್ 1 ರಿಂದ 12 ರವರೆಗೆ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ 30 ಕೊನೆಯ ದಿನವಾಗಿದೆ. ಮೆಹಂದಿ ಡಿಸೈನ್ ಕೋರ್ಸ್ ತರಬೇತಿಯು ಡಿಸೆಂಬರ್ 8 ರಿಂದ 14 ರವರೆಗೆ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಡಿಸೆಂಬರ್ 7 ಕೊನೆಯ ದಿನವಾಗಿದೆ.
ಇದನ್ನೂ ಓದಿ ಕೃಷಿ ಯಂತ್ರೋಪಕರಣ ಖರೀದಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಕನಿಷ್ಟ ಕನ್ನಡ ಓದಲು ಬರೆಯಲು ಬರಬೇಕು. ವಯೋಮಿತಿ 18 ರಿಂದ 50 ವರ್ಷದೊಳಗಿರಬೇಕು. ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಮೇಲ್ಕಂಡ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ತರಬೇತಿ ನಂತರ ಉದ್ಯೋಗ ಆರಂಭಿಸಲು ಬ್ಯಾಂಕುಗಳಿಂದ ಸಾಲಕ್ಕಾಗಿ ಸಹಾಯ ಮಾಡಲಾಗುತ್ತದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9900135705, 9901694389, 7019939996, 9901098123 ಹಾಗೂ 9448994585 ಗಳಿಗೆ (ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆಯೊಳಗಾಗಿ) ಸಂಪರ್ಕಿಸಲು ಕೋರಲಾಗಿದೆ.





