E swattu Property status : ಕರ್ನಾಟಕದ ಗ್ರಾಮೀಣ ಆಸ್ತಿಗಳಿಗೆ ಇ ಸ್ವತ್ತು ಡಿಸೆಂಬರ್ ಅಂತ್ಯದೊಳಗೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಭೂ ಗ್ಯಾರೆಂಟಿ ಇ ಸ್ವತ್ತು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಸುಮಾರು 1,50,69,090 ಗ್ರಾಮೀಣ ಆಸ್ತಿ ಇದ್ದು, ಈ ಪೈಕಿ ಈಗಾಗಲೇ 42,92,484 ಆಸ್ತಿಗಳಿಗೆ ನಮೂನೆಬಿ ವಿತರಿಸಲಾಗಿದೆ. ಇನ್ನೂ 97,59,867 ಆಸ್ತಿಗಳಿಗೆ ಇ ಸ್ವತ್ತು ನೀಡಬೇಕಾಗಿದ್ದು, ವ್ಯಾಜ್ಯ ರಹಿತ, ಸರ್ಕಾರಿ, ಅರಣ್ಯ ಭಊಮಿಯಲ್ಲಿಲ್ಲದ 80 ಲಕ್ಷ ಗ್ರಾಮೀಣ ಆಸ್ತಿಗಳಿಗೆ 2027 ಅಂತ್ಯದೊಳಗೆ ಇ ಸ್ವತ್ತು ನೀಡಲು 5927 ಗ್ರಾಮ ಪಂಚಾಯತಿಗಳಿಗೂ ಗುರಿ ನಿಗದಿ ಪಡಿಸಲಾಗಿದೆ.
E swattu Property status ನಿಮ್ಮ ಜಮೀನಿನ ಇ ಸ್ವತ್ತು ಚೆಕ್ ಮಾಡಿ
ನಿಮ್ಮ ಜಮೀನಿನ ಇ ಸ್ವತ್ತು ಚೆಕ್ ಮಾಡಲು ಈ
https://eswathu.karnataka.gov.in/eCitizen/Citizen/frm_CitizenPropertyList.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಜಿಲ್ಲೆ, ತಾಲೂಕು, ಪಂಚಾಯತ್, ಊರು ಆಯ್ಕೆ ಮಾಡಿಕೊಂಡು ಇ ಸ್ವತ್ತು ದಾಖಲೆ ಚೆಕ್ ಮಾಡಬಹುದು.
ರಾಜ್ಯದಲ್ಲಿ ಶೇ. 61 ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿದ್ದು, ಇ ಸ್ವತ್ತು ಪಡೆಯುವಲ್ಲಿ ಸಾಕಷ್ಟು ವಿಳಂಬ ಆಗುತ್ತಿತ್ತು. ಈ ತೊಡಕು ನಿವಾರಿಸಲು ತಾವು ಸಚಿವರಾದ ಬಳಿಕ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಬೆಂಗಳೂರು ನಗರ, ಮಂಗಳೂರು, ಕಲಬುರಗಿ ಮತ್ತು ಬೆಳಗಾವಿ ಜಿಪಂಗಳ ಸಿಇಒಗಳನ್ನು ಒಳಗೊಂಡ ಪಂಚ ಸದಸ್ಯರ ಸಮಿತಿ ರಚಿಸಿ, ಸಮಿತಿಯ ಶಿಫಾರಸಿನಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳು, 2025ಕ್ಕೆ ತಿದ್ದುಪಡಿ ತರಲಾಗಿದೆ.
ಇ ಸ್ವತ್ತು ಏಕೆ ?
ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬ ನಾಗರಿಕರೂ ಸುರಕ್ಷಿತ, ನಿಖರ, ಡಿಜಟಲೀಕರಿಸಿದ ಮತ್ತು ಭೌಗೋಳಿಕವಾಗಿ ಉಲ್ಲೇಖಿಸಲಾದ ಭೂಮಿ ಮತ್ತು ಆಸ್ತಿ ದಾಖಲೆ ವಿತರಿಸಲು ಭೂ ಗ್ಯಾರೆಂಟಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ 5927 ಗ್ರಾಪಂಗಳ ವ್ಯಾಪ್ತಿಯಲ್ಲಿ ವಿಶೇಷವಾಗಿ ಗ್ರಾಮಠಾಣಾ ಪ್ರದೇಶದಲ್ಲಿ ಇ ಸ್ವತ್ತು ನೀಡಲು ಪ್ರಕ್ರಿಯೆ ಆರಂಭಿಸಲಾಗಿದೆ.
ಇ ಸ್ವತ್ತು ಸಮಸ್ಯೆಗೆ ಈ ನಂಬರಿಗೆ ಕರೆ ಮಾಡಿ
ಇ ಸ್ವತ್ತು ಪಡೆಯುವಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಎದುರಾದರೆ, ಉಚಿತ ಸಹಾಯವಾಣಿ ಸಂಖ್ಯೆ 9483476000 ಗೆ ಸಪರ್ಕಿಸಬಹುದು.
ಕಂದಾಯ ಭೂಮಿಯಲ್ಲಿ ಅಭಿವೃದ್ಧಿ ಪಡಿಸಲಾದ ಪರಿವರ್ತನೆ ಆದ ಭೂಮಿ ಮತ್ತು ಪರಿವರ್ತನೆ ಆಗ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೂ ಇ ಸ್ವತ್ತು ನೀಡಲು ಕ್ರಮ ವಹಿಸಲಾಗಿದೆ.
ಇ ಸ್ವತ್ತು ಪಡೆಯುವಲ್ಲಿ ಸಮಸ್ಯೆಗೆ ಯಾರಿಗೆ ಕರೆ ಮಾಡಬೇಕು
ಇ ಸ್ವತ್ತು ಪಡೆಯುವಲ್ಲಿ ಸಾರ್ವಜನಿಕರಿಗೆ ಯಾವುದೇ ತೊಡಕಾದರೆ ಅವರು ಸಹಾಯವಾಣಿ 9483476000 ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಇದನ್ನೂ ಓದಿ : ಬೆಳೆ ವಿಮೆಗೆ ಅರ್ಜಿ ಆಹ್ವಾನ ಯಾವ ಬೆಳೆಗೆ ಎಷ್ಟು ಹಣ ಜಮೆ? ಇಲ್ಲಿದೆ ಮಾಹಿತಿ
ಅದೇ ರೀತಿ ಕಂದಾಯ ಭೂಮಿಯಲ್ಲಿ ಅಭಿವೃದ್ಧಿ ಪಡಿಸಲಾದ ಪರಿವರ್ತನೆ ಆದ ಭೂಮಿ ಮತ್ತು ಪರಿವರ್ತನೆ ಆಗದ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೂ ಇ ಸ್ವತ್ತು ನೀಡಲು ಕ್ರಮ ವಹಿಸಲಾಗಿದೆ.ಇದರಲ್ಲಿ ಮೊದಲ ಹಂತದಲ್ಲಿ ಪರಿವರ್ತನೆ ಆಧ ಭೂಮಿಯಲ್ಲಿ ಅಭಿವೃದ್ಧಿ ಪಡಿಸಲಾದ ಬಿ ಖರಾಬು ಭೂಮಿ ಇಲ್ಲದ ಸರ್ವೆ ನಂಬರ್ ಸ್ವತ್ತಗಳಿಗೂ ಇ ಸ್ವತ್ತು ನೀಡಲಾಗುವುದು. ದಾಖಲೆಗಳು ಲಭ್ಯವಿಲ್ಲದವರೆಗೆ 2025 ರ ಏಪ್ರೀಲ್ 7 ರ ಪೂರ್ವದಲ್ಲಿ ವಿದ್ಯುತ್ ಬಿಲ್ ಆಧಾರದ ಮೇಲೆ ಮತ್ತು ಸ್ಥಳ ಮಹಜರು ಮಾಡಿ ಆಕ್ಷೇಪಣೆ ಸಲ್ಲಿಸಲು 21 ದಿನ ಅವಕಾಶ ನೀಡಿ ನಂತರ ಇ ಸ್ವತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.
ಕೃಷಿ ಜಮೀನಿನಲ್ಲಿ ವಾಸಕ್ಕಾಗಿ ಅಥವಾ ಕೃಷಿ ಉದ್ದೇಶಕ್ಕಾಗಿ ನಿರ್ಮಿಸಿಕೊಂಡಿರುವ ಕಟ್ಟಡಗಳಿಗೆ ನೋಂದಾಯಿತ ದಾಖಲೆಗಳಿಲ್ಲದಿದ್ದರೂ ನಿಯಮಾನುಸಾರ ಇ ಸ್ವತ್ತು ದಾಖಲೆಗಳನ್ನು ಪಡೆಯಲು ಅವಕಾಶ ಕಲ್ಪಿಸುವ ಮೂಲಕ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದೆ. 4000 ಚದರಡಿಯವರೆಗಿನ ಸ್ವತ್ತಿಗೆ ಈ ಸೌಲಭ್ಯ ಲಭಿಸಲಿದೆ ಎಂದರು.





