ಈ ಮಹಿಳೆಯರ ಖಾತೆಗೆ ಜಮೆಯಾಯಿಯಿತು ಎರಡು ಕಂತಿನ ಗೃಹಲಕ್ಷ್ಮೀ ಹಣ

Written by Ramlinganna

Published on:

Gruhalakshmi 36th installment credited : ಮಹಿಳೆಯರಿಗೆ ಗುಡ್ ನ್ಯೂಸ್. ಅದೇನಪಾ ಅಂದರೆ, ಮೊನ್ನೆ ಗೃಹಲಕ್ಷ್ಮೀ ಯೋಜನೆಯ 34ನೇ ಕಂತಿನ ಹಣ ಜಮೆಯಾಗಿತ್ತು. ನಿನ್ನೆ 35 ಹಾಗೂ 36ನೇ ಕಂತಿನ ಅಂದರೆ ಎರಡು ಕಂತಿನ ಒಟ್ಟು 4 ಸಾವಿರ ರೂಪಾಯಿ ಜಮೆಯಾಗಿದೆ.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ ದೀಪಾವಳಿ ಹಬ್ಬಕ್ಕಿಂತ ಮೊದಲು ಮೂರು ಕಂತಿನ ಹಣ ಒಟ್ಟಿಗೆ ಬಿಡುಗಡೆ ಮಾಡಲಾಗಿತ್ತು. ದೀಪಾವಳಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಜಮೆಯಾಗುತ್ತದೆ ಎಂದು ಹೇಳಲಾಗಿತ್ತು. ಕೆಲವು ಮಹಿಳೆಯರಿಗೆ ಜಮೆಯಾದರೆ ಇನ್ನೂ ಕೆಲವು ಮಹಿಳೆಯರ ಖಾತೆಗೆ ಹಣ ಜಮೆಯಾಗಿದ್ದಿಲ್ಲ. ಅಂದು ಯಾವ ಯಾವ ಮಹಿಳೆಯರ ಖಾತೆಗೆ ಹಣ ಜಮೆಯಾಗಿದ್ದಿಲ್ಲವೋ ಅಂತಹವರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 35 ಹಾಗು 36ನೇ ಕಂತಿನ ಹಣ ಶುಕ್ರವಾರ ಜಮೆಯಾಗಿದೆ.

Gruhalakshmi 36th installment credited ನಿಮ್ಮ ಖಾತೆಗೆ ಜಮೆಯಾಯಿತೋ ಇಲ್ಲವೋ ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ 3 ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಯಿತೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಮೊಬೈಲ್  ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ನಿಮಗಾಗಿ ಮಾಹಿತಿ.

ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಎಷ್ಟು ಕಂತುಗಳ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.dbtkarnataka&hl=en_IN

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಡಿಬಿಟಿ ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಸಂಖ್ಯೆ ಬರುತ್ತದೆ. ಈ ಓಟಿಪಿ ಸಂಖ್ಯೆನ್ನು ನಮೂದಿಸಿದ ನಂತರ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಗೃಹಲಕ್ಷ್ಮೀ ಬಟನ್ ಒತ್ತಿದರೆ ಸಾಕು ನಿಮ್ಮ ಖಾತೆಗೆ  ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ.

ಗೃಹಲಕ್ಷ್ಮೀ ಯೋಜನೆಯ 34, 35 ಹಾಗೂ 36ನೇ ಕಂತು ಸೇರಿ ಒಟ್ಟು 7405.86 ಕೋಟಿ ರೂಪಾಯಿ ಮೊತ್ತವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಳೆದ ಬುಧವಾರ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದರು. ಈಗ 34ನೇ ಕಂತಿನ ಹಣ 2500 ಕೋಟಿ ರೂಪಾಯಿ, 35ನೇ ಕಂತಿನ 2452.93 ಕೋಟಿ ರೂಪಾಯಿ ಅದೇ ರೀತಿ 36ನೇ ಕಂತಿನ 2452.93 ಕೋಟಿ ರೂಪಾಯಿ ಬಿಡುಗಡೆ ಆಗಿದೆ. ಪ್ರತಿ ಫಲಾನುಭವಿಗೆ ಇಲ್ಲಿಯವರೆಗೆ 72 ಸಾವಿರ ರೂಪಾಯಿಯಂತೆ 1.24 ಕೋಟಿ ಮಹಿಳೆಯರಿಗೆ 86838.36 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಇಲ್ಲಿಯವರೆಗೆ ನಿಮಗೆಷ್ಟು ಕಂತುಗಳು ಬಂದಿವೆ? ಎಷ್ಟು ಹಣ ಜಮೆಯಾಗಿದೆ?

ಗೃಹಲಕ್ಷ್ಮೀ ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ಫಲಾನುಭವಿಗಳ ಖಾತೆಗೆ ಒಟ್ಟು 36 ಕಂತುಗಳ ಹಣ ಜಮೆಯಾಗಿದೆ. ಹೌದು, 36 ಕಂತುಗಳು ಒಟ್ಟು ಹಣ 72 ಸಾವಿರ ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ.

 ಉಚಿತ ಸಹಾಯವಾಣಿ ನಂಬರ್ 181

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಹಾಯವಾಣಿಯನ್ನು ಆರಂಭಿಸಿದೆ. ಹೌದು, 181 ಎಂಬ ಸಂಖ್ಯೆಗೆ ಕರೆ ಮಾಡಿದರೆ ಸಾಕು ಎಲ್ಲಾ ಮಾಹಿತಿ ನಿಮಗೆ ಸಿಗಲಿದೆ.

ಇದನ್ನೂ ಓದಿ : ಬೆಳೆ ವಿಮೆಗೆ ಅರ್ಜಿ ಆಹ್ವಾನ ಯಾವ ಬೆಳೆಗೆ ಎಷ್ಟು ಹಣ ಜಮೆ? ಇಲ್ಲಿದೆ ಮಾಹಿತಿ

ಕೆಲವೊಮ್ಮೆ ತಾಂತ್ರಿಕ ದೋಷಗಳಿಂದಲೋ ಅಥವಾ ಇ-ಕೆವೈಸಿ ಮಾಡಿಸದಿದ್ದರೆ ಇಲ್ಲವೆ ತೆರಿಗೆ ಪಾವತಿಸುತ್ತಿದ್ದರೆ ಇಂತಹ ಸಂದರ್ಭದಲ್ಲಿ ಗೃಹಲಕ್ಷ್ಮೀ ಹಣ ನಿಲ್ಲಿಸಲಾಗಿರುತ್ತದೆ. ಈ ಬಗ್ಗೆ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಖರವಾದ ಮಾಹಿತಿ ಪಡೆಯಬಹುದು.

Leave a Comment