ಉಚಿತವಾಗಿ 20 ದೇಶಿ ಕೋಳಿ ಮರಿಗಳ ವಿತರಣೆಗೆ ಅರ್ಜಿ ಆಹ್ವಾನ

Written by Ramlinganna

Published on:

Twenty chicks free distribution : 2026-27ನೇ ಸಾಲಿನಲ್ಲಿ ಗ್ರಾಮೀಣ ಬಾಗದ ಅರ್ಹ ರೈತ ಮಹಿಳೆಯಿರಗೆ ಐದು ವಾರದ 20 ನಾಟಿ ಅಥವಾ ದೇಶಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಚಿತ್ರದುರ್ಗ,  ಹಾಸನ,  ಸೇರಿದಂತೆ ವಿವಿಧ ಜಿಲ್ಲೆಗಳಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಎಲಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿ ನೀಡಲಾಗಿದೆ.

ಕರ್ನಾಟಕ ಸಹಕಾರ ಕುಕ್ಕುಟ ಮಹಾ ಮಂಡಳಿ ನಿಯಮಿತದ ವತಿಯಿಂದ ಹೊಸದುರ್ಗ ತಾಲೂಕಿನಲ್ಲಿ ಒಟ್ಟು 99 ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಇದರಲ್ಲಿ ಮೀಸಲಾತಿ ಅನ್ವಯ ಪರಿಶಿಷ್ಟ ಜಾತಿಗೆ 17, ಪರಿಶಿಷ್ಟ ಪಂಗಡಕ್ಕೆ 7, ಹಿಂದುಳಿದ ವರ್ಗಕ್ಕೆ 32 ಹಾಗೂ ಸಾಮಾನ್ಯ ವರ್ಗಕ್ಕೆ 43 ಸ್ಥಾನಗಳನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ ತಾಂಡಾ ಅಭಿವೃದ್ಧಿ ನಿಗಮದಿಂದ ಗ್ರಾಮೀಣ ಭಾಗದ ಬಂಜಾರ, ಲಂಬಾಣಿ, ಲಮಾಣಿ, ಸುಕಾಲಿ ಮತ್ತು ಸುಗಾಲಿ ಜನಾಂಗದ 93 ರೈತ ಮಹಿಳೆಯರಿಗೆ ತಲಾ 20 ನಾಟಿ ಅಥವಾ ದೇಶಿ ಕೋಳಿ ಮರಿಗಳನ್ನು ಉಚಿತವಾಗಿ ನೀಡಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಡಿಸೆಂಬರ್ 08 ಕೊನೆಯ ದಿನಾಂಕವಾಗಿದ್ದು, ಫ್ರೂಟ್ಸ್ ಐಡಿ ಕಡ್ಡಾಯವಾಗಿರುತ್ತದೆ.

ಸ್ಥಳೀಯ ಪಶು ಆಸ್ಪತ್ರೆ ಅಥವಾ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ, ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದು.

Twenty chicks free distribution ಉಚಿತವಾಗಿ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ

ತಾಂಡಾ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಗ್ರಾಮೀಣ ಭಾಗದ ರೈತ ಮಹಿಳೆಯರಿಗೆ 5 ವಾರದ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಯಡಿ ಹಾಸನ ತಾಲೂಕಿಗೆ ಒಟ್ಟು 94 ತಾಂಡಾ (ಬಂಜಾರಾ) ಮಹಿಳಾ ಫಲಾನುಭವಿಗಳಿಗೆ ನೀಡಲಾಗುವುದು. ಆಸಕ್ತ ಗ್ರಾಮೀಣ ಮಹಿಳೆಯರಿಂದ ನವೆಂಬರ್ 25 ರಿಂದ ಡಿಸೆಂಬರ್ 16 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ತಿಳಿಸಿದ್ದಾರೆ.

ಪಶು ಆಸ್ಪತ್ರೆ, ಸಂತೆಪೇಟೆ ಹಾಸನ ಅರ್ಜಿಗಳನ್ನು ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂತೆಪೇಟೆ ಪಶು ಆಸ್ಪತ್ರೆಯ ದೂರವಾಣಿ ಸಂಖ್ಯೆ 9663261514 ಹಾಗೂ 9632889950 ಗೆ ಸಂಪರ್ಕಿಸಬಹುದು.

Twenty chicks free distribution ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ

ಬೆಳಗಾವಿ ಗ್ರಾಮೀಣ ಪ್ರದೇಶದ ತಾಂಡಾಗಳಲ್ಲಿ ವಾಸಿಸುವ ಬಂಜಾರ, ಲಮಾಣಿ, ಲಂಬಾಣಿ, ಸುಕಾಲಿ ಹಾಗೂ ಸುಗಾಲಿ ಸಮುದಾಯದ ಮಹಿಳೆಯರಿಗೆ ಉಚಿತವಾಗಿ 20 ಕೋಳಿ ಮರಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸಹಕಾರ  ಕುಕ್ಕುಟ ಮಹಾಮಂಡಳಿ, ನಿಯಮಿತ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2026-27 ನೇ ಸಾಲಿನಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಇದನ್ನೂ ಓದಿ : ಗಂಗಾ ಕಲ್ಯಾಣ ಯೋಜನೆ ಬೋರ್ವೆಲ್ ಕೊರೆಯಲು 3.50 ಲಕ್ಷ ರೂಪಾಯಿ ಸಬ್ಸಿಡಿ

ಯೋಜನೆಯಡಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ ತಲಾ 20 ರಂತೆ ಐದು ವಾರಗಳ ದೇಶಿ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಬೆಳಗಾವಿ ತಾಲೂಕಿನಲ್ಲಿ ಗ್ರಾಮೀಣ ಪ್ರದೇಶದ ತಾಂಡಾಗಳಲ್ಲಿ ವಾಸಿಸುವ ಅರ್ಹ ರೈತ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನವೆಂಬರ್ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬೆಳಗಾವಿಯ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಆಸಕ್ತ ಮಹಿಳೆಯರು ಕೊನೆಯ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗನೆ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಅರ್ಜಿ ಬಂದರೆ ಅಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಲಭ್ಯತೆಯ ಆಧಾರದ ಮೇಲೆ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲಾಗುವುದು. ಈ ಹಿಂದೆ ಮಹಿಳೆಯರು ಉಚಿತವಾಗಿ ಕೋಳಿ ಮರಿಗಳನ್ನು ಪಡೆದಿರಬಾರದು. ಹೊಸದಾಗಿ ಪಡೆಯುವವರಿಗೆ ಆದ್ಯತೆ ನೀಡಲಾಗುವುದು. ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸಲ್ಲಿಸಬೇಕಾಗುತ್ತದೆ.

Leave a Comment