ಟ್ಯಾಕ್ಸಿ ವಾಹನ ಖರೀದಿಗೆ 4 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

taxi vehicle subsidy get  : ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಸರಕು ವಾಹನ ಹಾಗೂ ಟ್ಯಾಕ್ಸಿ ವಾಹನ (ಹಳದಿ ಬೋರ್ಡ್) ಖರೀದಿಗೆ 4 ಲಕ್ಷ ರೂಪಾಯಿ ಸಬ್ಸಿಡಿ ನೀಡಲು  ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ, ನಾರಾಯಣ ಗುರು ಅಭಿವೃದ್ಧಿ ನಿಗಮ, ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ,  ರಾಜ್ಯ ಕುಂಬಾರ ಸಮುದಾಯಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯ ( ಬ್ಯಾಂಕ್ ಸಹಯೊಗದೊಂದಿಗೆ) ವಾಹನ ಖರೀದಿಗೆ ಶೇ. 75 ರಷ್ಟು ಅಥವಾ ಗರಿಷ್ಠ 4 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

taxi vehicle subsidy get ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.

ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿಗೆ ವಿವಿಧ ಯೋಜನೆಗಳಡಿ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ವಾವಲಂಬಿ ಸಾರಥಿ ಯೋಜನೆಯಡಿ ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ -2ಎ ಅಡಿಯಲ್ಲಿ 4 (ಎ) ಯಿಂದ 4 (ಝಡ್) ವರೆಗೆ ಬರುವ ಈಡಿಗ ಮತ್ತು ಅದರ ಉಪಜಾತಿ ಸಮುದಾಯದವರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಡಿಸೆಂಬರ್ 13 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 08022374832, 8050770004 ಗೆ ಸಂಪರ್ಕಿಸಬಹುದು.

ರಾಜ್ಯ ಕುಂಬಾರ ಅಭಿವೃದ್ಧಿ ನಿಗಮದಿಂದಲೂ ಅರ್ಜಿ ಕರೆಯಲಾಗಿದೆ. ಡಿಸೆಂಬರ್ 15 ಕೊನೆಯ ದಿನವಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ 2 ಎ ಅಡಿಯಲ್ಲಿ 6(ಎ)ಯಿಂದ 6 ವರೆಗೂ ಬರುವ ಕುಂಬಾರ ಮತ್ತು ಅದರ ಉಪಜಾತಿ ಸಮುದಾಯದವರು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 08022374832 ಗೆ ಸಂಪರ್ಕಿಸಬಹುದು.

2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್ ಮೂಲಕ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

https://sevaone.karnataka.gov.in/services

ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು. ಆದಿ ಕರ್ನಾಟಕ, ಆದಿ ಆಂದ್ರ, ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿದ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

ಅರ್ಜಿ ಸಲ್ಲಿಸಲು ಭಾವಚಿತ್ರ ಬೇಕು. ಜಾತಿ ಪತ್ರ (ಆರ್.ಡಿ ಸಂಖ್ಯೆ ಹೊಂದಿರಬೇಕು), ಆದಾಯ ಪತ್ರ (ಆರ್.ಡಿ. ಸಂಖ್ಯೆ ಹೊಂದಿರಬೇಕು), ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು.

ಇದನ್ನೂ ಓದಿ : ಗಂಗಾ ಕಲ್ಯಾಣ ಯೋಜನೆ ಬೋರ್ವೆಲ್ ಕೊರೆಯಲು 3.50 ಲಕ್ಷ ರೂಪಾಯಿ ಸಬ್ಸಿಡಿ

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಚೇರಿ ಅಥವಾ ನಿಗಮಗಳ ವೆಬ್ಸೈಟ್ ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ, ಎಸ್.ಟಿ ಸಹಾಯವಾಣಿ 9482300400 ಗೆ ಸಂಪರ್ಕಿಸಬಹುದು.

Leave a Comment