Sevasindhu ಕೋವಿಡ್ ಎರಡನೇ ಅಲೆಯ ಲಾಕ್ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಒಂದು ಬಾರಿ 2000 ರೂಪಾಯಿಗಳ ಆರ್ಥಿಕ ನೆರವು ನೀಡುತ್ತಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ 2021 ರ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಕಲಬುರಗಿ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸಂಘಟಿತ ವರ್ಗದ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು (ಮನೆ ಕೆಲಸ), ಟೈಲರ್ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ
ಯೋಜನೆ ಕುರಿತು ಮತ್ತು ಅರ್ಜಿ ಸಲ್ಲಿಸಲು ಮಾರ್ಗದರ್ಶನಕ್ಕಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇವಾ ಕೇಂದ್ರಗಳು, ವಾರ್ಡ್ ಮಟ್ಟದ ಸೇವಾ ಕೇಂದ್ರಗಳು (ಸಿ.ಎಸ್.ಸಿ.), ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳ ಕಚೇರಿಗಳಿಗೆ ಅಥವಾ ಕಾರ್ಮಿಕ ಸಹಾಯವಾಣಿ ಸಂಖ್ಯೆ 155214 ಅಥವಾ ಸೇವಾ ಸಿಂಧು ಸಂಸ್ಥೆಯ ಮೊಬೈಲ್ ಸಂಖ್ಯೆಗಳಾದ 8088304855, 6361799796, 9380204364 ಹಾಗೂ 9380206704 ಗಳಿಗೆ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ರಜಾದಿನಗಳನ್ನು ಹೊರತುಪಡಿಸಿ ಸಂಪರ್ಕಿಸಬಹುದಾಗಿದೆ
ಹೆಚ್ಚಿನ ಮಾಹಿತಿಗಾಗಿ 8088304855/ 6361799796 /9380204364 / 9380206704 – 9AM TO 6PM (ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ) ಸಂಪರ್ಕಿಸಬಹುದು.
ಮೀನುಗಾರಿಕೆಗೆ ಸಹಯಧನ ಹಾಗೂ ಮೀನುಮರಿ ನೀಡಲು ಅರ್ಜಿ ಆಹ್ವಾನ
ಮೀನುಗಾರಿಕೆ ಮಾಡಲಿಚ್ಚಿಸುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ರೈತರು ಮೀನುಗಾರಿಕೆ ಮಾಡಲು ಸಹಾಯಧನ ಪಡೆಯಬಹುದು. ಹೌದು, ಪ್ರಸಕ್ತ ಸಾಲಿನಲ್ಲಿ ಕೋಲಾರ ಜಿಲ್ಲಾ ವಲಯದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ (ಬಲೆ) ಹಾಗೂ ಮೀನು ಮಾರುಕಟ್ಟೆಗಳ ನಿರ್ಮಾಣ ಸಹಾಯಧನ ನೀಡಲಾಗುವುದು. ಮೀನು ಮಾರಟಕ್ಕೆ ಸಹಾಯ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮೀನುಗಾರರು ಸಂಬಂಧಿಸಿದ ತಾಲೂಕು ಮೀನುಗಾರಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೋಲಾರ ಮೀನುಗಾರಿಕೆ ಉಪ ನಿರ್ದೇಶಕರ ದೂರವಾಣಿ ಸಂಖ್ಯೆ 9740138511, ಕೋಲಾರ ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9964583932, ಮಾಲೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9972717346, ಮುಳಬಾಗಿಲು ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9482475770 , ಶ್ರೀನಿವಾಸಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9964583932, ಬೇತಮಂಗಲ (ಕೆಜಿಎಫ್ ಬಂಗಾರಪೇಟೆ) ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9036991112 ಹಾಗೂ ಮೀನುಗಾರಿಕೆ ಸಹಾಯವಾಣಿ ಸಂಖ್ಯೆ 8277200300 ಗೆ ಸಂಪರ್ಕಿಸಬಹುದು ಎಂದು ಕೋಲಾರ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ರೈತರು ತಡಮಾಡದೆ ಕೂಡಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.