Krishi Pandit award ಪ್ರಸಕ್ತ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಹಾಗೂ ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಚಿತ್ರದುರ್ಗ ಜಿಲ್ಲೆಯ ರೈತರು ಆಯಾ ತಾಲೂಕು ಮಟ್ಟದ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಕೃಷಿ ಪಂಡಿತ ಪ್ರಶಸ್ತಿಯಲ್ಲಿ ಪ್ರಥಮ ಬಹುಮಾನ 1,25,000, ದ್ವಿತೀಯ ಬಹುಮಾನ 1,00,000 ಹಾಗೂ ತೃತೀಯ ಬಹುಮಾನ 75,000 ರೂಪಾಯಿ ನೀಡಲಾಗುವುದು. ಕೃಷಿ ಪಂಡಿತ ಉದಯೋನ್ಮುಖ ಪ್ರಶಸ್ತಿಗೆ 50,000 ರೂಪಾಯು ನೀಡಲಾಗುವುದು.
ಅರ್ಹ ರೈತರು ಅರ್ಜಿ ಸಲ್ಲಿಸಬಹುದು. ಈ ಹಿಂತೆ ಕೃಷಿ ಪಂಡಿತ ಪ್ರಶಸ್ತಿ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಿ, ವಿಶ್ವವಿದ್ಯಾಲಯ, ಸರ್ಕಾರಿ ಸ್ವಯಂ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಮೌಲ್ಯಮಾಪನ ವೇಳೆಯಲ್ಲಿ ಸ್ಪರ್ಧಾಳು ಪ್ರಶಸ್ತಿಗೆ ಅರ್ಹತೆ ಪಡೆಯಲು ಕನಿಷ್ಟ 65 ಅಂಕ ನಿಗದಿಪಡಿಸಲಾಗಿದೆ. ಅರ್ಜಿಯ ನಮೂನೆ ಹಾಗೂ ಇನ್ನಿತರ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲೆಯ ಜಂಟಿ ನಿರ್ದೇಶಕ ಡಾ. ಪಿ. ರಮೇಶ ಕುಮಾರ ತಿಳಿಸಿದ್ದಾರೆ.
ಇದನ್ನೂ ಓದಿ: ರೈತರಿಗೆ ಸಂತಸದ ಸುದ್ದಿ. ನಿಮ್ಮ ಮೊಬೈಲ್ ಮೂಲಕವೇ ಕ್ಷಣಾರ್ಧದಲ್ಲಿ (Lands measure in mobile) ಜಮೀನಿನ ಅಳತೆ ತಿಳಿಯುವುದು ಹೇಗೆ?… ಇಲ್ಲಿದೆ ಸಂಪೂರ್ಣ ಮಾಹಿತಿ
ಭಾಗವಹಿಸುವವರ ಸಂಶೋಧನೆ / ಸಾಧನೆಗಳು ಮೂಲ ಸ್ವರೂಪವಾಗಿದ್ದು, ಬೇರೆ ರೈತರ ಸಾಧನೆಗಿಂತ ಭಿನ್ನವಾಗಿರಬೇಕು. ಇನ್ನಿತರ ರೈತರಿಗೆ ಆದರ್ಶವಾಗಿರಬೇಕು. ಹಾಗೂ ಅನುಕೂಲವಾಗಿರಬೇಕು ಹಾಗೂ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಬಯಸುವ ರೈತರು, ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ಪಡೆದು ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
Krishi Pandit award ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೃಷಿ ಇಲಾಖೆಯು ಪ್ರಸ್ತುತ ಸಾಲಿನ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಅರ್ಜಿಗಳನ್ನು ಮಂಗಳೂರಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ರಾಜ್ಯ ಮತ್ತು ಕೃಷಿ ಕ್ಷೇತ್ರದಲ್ಲಿ ನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಸಂಶೋಧನೆ ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಗಳ ಝಿರಾಕ್ಸ್ ಫೊಟೊಗ್ರಾಫ್, ಸಿಡಿಗಳನ್ನು ಲಗತ್ತಿಸಬೇಕು.
ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕ ಕಚೇರಿ ದೂರವಾಣಿ ಸಂಖ್ಯೆ 0824-2423601ಗೆ ಸಂಪರ್ಕಿಸಲು ಕೋರಲಾಗಿದೆ.