ಉಚಿತ ಹೈನುಗಾರಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ

Written by By: janajagran

Updated on:

Free animal husbandry training ಪಶು ವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ ಧಾರವಾಡದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗ ರೈತ, ರೈತ ಮಹಿಳೆಯರಿಗೆ ಎರಡು ದಿನಗಳ ಕಾಲ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎರಡು ದಿನಗಳ ಕಾಲ ನಡೆಯುವ ತರಬೇತಿಯಲ್ಲಿ ತಂಡವಾರು ವೈಜ್ಞಾನಿಕ, ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಯ ತರಬೇತಿ ನೀಡಲಾಗುವುದು. ಆಸಕ್ತ ರೈತರು ತಮ್ಮ ಹೆಸರನ್ನು ಎಸ್ಎಂಎಸ್ ಮೂಲಕ ಕಚೇರಿಯ ದೂರವಾಣಿ ಕರೆ ಮೂಲಂಕ ಅಥವಾ ಖುದ್ದಾಗಿ ಭೇಟಿ ನೀಡಿ ತಮ್ಮ ಹೆಸರನ್ನು ಬೆಳಗ್ಗೆ 10.15 ರಿಂದ ಸಾಯಂಕಾಲ 5.15ರವರೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836 2443743 ಗೆ ಅಥವಾ ಮೊಬೈಲ್ ಸಂಖ್ಯೆ 9591024499 ಗೆ ಸಂಪರ್ಕಿಸಲು ಕೋರಲಾಗಿದೆ.

Free animal husbandry training ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಸೆಪ್ಟೆಂಬರ್ 6 ರಿಂದ 8ರವರೆಗೆ ಮೂರು ದಿನಗಳ ಕಾಲ ಆಧುನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆಗೆ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ನಗರದ ಪಿ.ಬಿ. ರಸ್ತೆ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ:ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ, ಎತ್ತಿನಬಂಡಿ ಹೋಗುವ ದಾರಿ, ಕೆರೆಕಟ್ಟೆ, ನಿಮ್ಮ ಸರ್ವೆನಂಬರ್ ನೋಡಬೇಕೆ… ಇಲ್ಲಿದೆ ಮಾಹಿತಿ

ತರಬೇತಿಯು ಬೆಳಗ್ಗೆ 10 ರಿಂದ ಸಾಯಂಕಾಲ 5 ರವರೆಗೆ ನಡೆಯಲಿದಂ. ಆಸಕ್ತ ರೈತರು, ಮಹಿಳೆಯರು, ನಿರುದ್ಯೋಗ ಯುವಕ ಯುವತಿಯರು ಇದರ ಅನುಕೂಲ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕ ತರಬೇತಿ ಕೇಂದ್ರ, ದಾವಣಗೆರೆ, ದೂರವಾಣಿ ಸಂಖ್ಯೆ 08192 233787 ಗೆ ಸಂಪರ್ಕಿಸಬಹುದು ಎಂದು ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಶುಪಾಲನೆಗೆ ಉಚಿತ ಸಹಾಯವಾಣಿ

ಶುಪಾಲನೆ, ಕುರಿ ಸಾಕಾಣಿಕೆ ಅಷ್ಟೇ ಅಲ್ಲ, ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ಸಹ  ಸಂಪೂರ್ಣ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವುದೇ ಕರೆ ಶುಲ್ಕ ಪಾವತಿಸುವ ಅವಶ್ಯಕತೆಯಿಲ್ಲ. ಪಶು ಇಲಾಖೆಯ ತಜ್ಞರಿಂದ ಮಾಹಿತಿ ಪಡೆಯಲು ಬಯಸಿದ್ದರೆ ಈ ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು. ನಿಮಗೆ ಬೇಕಾದ ಮಾಹಿತಿ ಪಶು ಇಲಾಖೆಯ ಸಿಬ್ಬಂದಿಗಳಿಗೆ ಮನೆಯಲ್ಲಿಯೇ ಕುಳಿತು ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ  ಸಂಪೂರ್ಣ ಮಾಹಿತಿ.

ರೈತರು ದೂರವಾಣಿ ಸಂಖ್ಯೆ 8277 100 200 (ಉಚಿತ)  24*7  ಕರೆ ಮಾಡಿ ಪಶುವೈದ್ಯರು ಮತ್ತು  ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು.

Leave a Comment