Goat farming free training ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದೇ ತಿಂಗಳು ಅಕ್ಟೋಬರ್ 4 ಮತ್ತು 5 ರಂದು ಬೆಳಗ್ಗೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ ದಾವಣಗೆರೆ ನಗರದ ಪಿ.ಬಿ. ರಸ್ತೆಯ ಅರುಣಚಿತ್ರಮಂದಿರ ಎದುರುಗಡೆಯಿರುವ ಪಶು ಆಸ್ಪತ್ರೆ ಆವರಣದ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿಗೆ ಹಾಜರಾಗಲು ಆಸಕ್ತಿಯಿರುವ ರೈತರು ಆಧಾರ್ ಕಾರ್ಡ್ ಝರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೊ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣದ ಪತ್ರ ಝರಾಕ್ಸ್ ಪ್ರತಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂರವಾಣಿ ಸಂಖ್ಯೆ 0812 233787 ಗೆ ಸಂಪರ್ಕಿಸಬಹುದು ಎಂದು ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Goat farming free training ಕುರಿ ಸಾಕಾಣಿಕೆ ಮಾಹಿತಿ ನೀಡಲು (FREE HELPLINE FOR GOAT FARMING)ಉಚಿತ ಸಹಾಯವಾಣಿ
ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ಸಹ ಸಂಪೂರ್ಣ ಮಾಹಿತಿ ಪಡೆಯಲು ರೈತರು ಸರ್ಕಾರದಿಂದ ಆರಂಭವಾದ ಉಛಿತ ಸಹಾಯವಾಣಿಗೆ ಕರೆ ಮಾಡಬಹುದು.
ಇದಕ್ಕಾಗಿ ನೀವು ಯಾವುದೇ ಕರೆ ಶುಲ್ಕ ಪಾವತಿಸುವ ಅವಶ್ಯಕತೆಯಿಲ್ಲ. ಪಶು ಇಲಾಖೆಯ ತಜ್ಞರಿಂದ ಮಾಹಿತಿ ಪಡೆಯಲು ಬಯಸಿದ್ದರೆ ಈ ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು. ನಿಮಗೆ ಬೇಕಾದ ಮಾಹಿತಿ ಪಶು ಇಲಾಖೆಯ ಸಿಬ್ಬಂದಿಗಳಿಗೆ ಮನೆಯಲ್ಲಿಯೇ ಕುಳಿತು ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ ಸಂಪೂರ್ಣ ಮಾಹಿತಿ.
ರೈತರು ದೂರವಾಣಿ ಸಂಖ್ಯೆ (farmer toll free number) 8277100200 (ಉಚಿತ) ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಕರೆ ಮಾಡಿ ಪಶುವೈದ್ಯರು ಮತ್ತು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು.
ಇದನ್ನೂ ಓದಿ: ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಬೇಕಾಗುವ ದಾಖಲೆ, ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ
ಈ ಉಚಿತ ಸಹಾಯವಾಣಿಯಿಂದ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹೀಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು.
ಆಸಕ್ತ ರೈತರು ಪಶುಪಾಲನೆಯ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.