PM Kisan beneficiaries list ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಈಗಾಗಲೇ 9 ಕಂತಿನ ಹಣ ರೈತರ ಖಾತೆಗೆ ಜಮೆಯಾಗಿದೆ. ಈಗ 10ನೇ ಕಂತಿನ ಹಣ ಡಿಸೆಂಬರ್ 15 ರೊಳಗೆ ರೈತರ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ 10ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರುವುದನ್ನು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ಮಾಹಿತಿ.
ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಪ್ರತಿವರ್ಷ 6000 ರೂಪಾಯಿ ಮೂರು ಕಂತುಗಳಲ್ಲಿ ಜಮೆ ಮಾಡುತ್ತದೆ. ಈಗ ವರ್ಷಕ್ಕೆ 6 ಸಾವಿರ ರೂಪಾಯಿ ಬದಲು 12 ಸಾವಿರ ರೂಪಾಯಿ ವರ್ಷಕ್ಕೆ ರೈತರ ಖಾತೆಗೆ ಜಮೆ ಮಾಡಲಾಗುವ ಸುದ್ದಿಯೂ ಕೇಳಿಬರುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದ ಇನ್ನೂ ಯಾವುದೇ ಲಿಖಿತ ಆದೇಶ ಬಂದಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯ ಹಣವನ್ನು ಹೆಚ್ಚಿಸಿದರೆ ಮುಂದಿನ ತಿಂಗಳಿಂದಲೇ ರೈತರ ಖಾತೆಗೆ 4 ಸಾವಿರ ರೂಪಾಯಿ ಜಮೆಯಾಗಲಿದೆ.
ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ನೀವು ಮೊಬೈಲ್ ನಲ್ಲಿಯೇ ಚೆಕ್ ಮಾಡಬಹುದು.. ನೀವು
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಸಾಕು. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮೂರಿನ ಎಷ್ಟು ಜನ ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಫಲಾನುಭವಿಗಳಾಗಿದ್ದಾರೆ ಎಂಬ ಲಿಸ್ಟ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು, ತಂದೆಯ ಹೆಸರು, ಲಿಂಗ, ಹಾಗೂ ಊರಿನ ಪಟ್ಟಿ ಇರುತ್ತದೆ. ಈ ಲಿಸ್ಟ್ ನಲ್ಲಿ A to Z ಕ್ರಮವಾಗಿ ಹೆಸರು ಇರುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿ ಕೆಳಗಡೆ ಇರುವ ನಂಬರ್ ಗಳ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿಕೊಳ್ಳಬೇಕು. ಆರಂಭದಲ್ಲಿ A ದಿಂದ ಹೆಸರು ಆರಂಭವಾಗುತ್ತದೆ.
PM Kisan beneficiaries list ಏನಿದು ಪಿಎಂ ಕಿಸಾನ್ ಯೋಜನೆ?
ಸಣ್ಣ ಮತ್ತು ಅತೀ ಸಣ್ಣ ರೈತರ ಆದಾಯವನ್ನು ವೃದ್ಧಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2018 ರಲ್ಲಿ ಆರಂಭಿಸಿದೆ. 2 ಹೆಕ್ಟೇರ್ ಗಿಂತ ಕಡಿಮೆ ಕೃಷಿ ಭೂಮಿಯಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗಾಗಿ ಈ ಯೋಜನೆಯನ್ನು ಆರಂಭಿಸಲಾಗಿದೆ. ರೈತರು ನಿರ್ಧಿಷ್ಟ ಸಮಯದಲ್ಲಿ ಕೈಗೊಳ್ಳಬೇಕಾದ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಕೃಷಿ ಪರಿಕರಗಳನ್ನು ಕೊಂಡುಕೊಳ್ಳಲು ಆರ್ಥಿಕ ನೆರವು ನೀಡುವುದಕ್ಕಾಗಿ ಈ ಯೋಜನೆಯನ್ನು ಆರಂಭಿಸಲಾಗಿದೆ.
ಇದನ್ನೂ ಓದಿ : ಬೆಳೆ ಸಾಲಮನ್ನಾ ಪಟ್ಟಿಯಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲಿಯೇ ಚೆಕ್ ಮಾಡಿ.. ಇಲ್ಲಿದೆ ಸಂಪೂರ್ಣ ಮಾಹಿತಿ
ಈ ಯೋಜನೆ ಆರಂಭವಾದಾಗಿನಿಂದ ಪ್ರತಿವರ್ಷ 3 ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಿಂತೆ ವರ್ಷಕ್ಕೆ 6 ಸಾವಿರ ರೂಪಾಯಿ ಜಮೆ ಮಾಡುತ್ತಿದೆ. ಇಲ್ಲಿಯವರೆಗೆ 9 ಕಂತುಗಳಲ್ಲಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಹಣ ಜಮೆ ಮಾಡಲಾಗಿದೆ. ಈಗ 10ನೇ ಕಂತಿನ ಹಣವನ್ನು ಡಿಸೆಂಬರ್ 15 ರೊಳಗೆ ರೈತರ ಖಾತೆಗೆ ಜಮೆ ಮಾಡಲಾಗುವುದೆಂದು ಮೂಲಗಳಿಂದ ತಿಳಿದುಬಂದಿದೆ.
ಪಿಎಂ ಕಿಸಾನ್ ಯೋಜನೆಯನ್ನು ಪ್ರತಿವರ್ಷ ಏಪ್ರೀಲ್ ತಿಂಗಳಿಂದ ಜುಲೈ ತಿಂಗಳ ಅವಧಿಯಲ್ಲಿ ಒಂದು ಕಂತು, ಆಗಸ್ಟ್ ತಿಂಗಳಿಂದ ನವೆಂಬರ್ ತಿಂಗಳ ಅವಧಿಯಲ್ಲಿ ಎರಡನೇ ಹಾಗೂ ಡಿಸೆಂಬರ್ ತಿಂಗಳಿಂದ ಮಾರ್ಚ್ ತಿಂಗಳಿನಲ್ಲಿ ಮೂರನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ. ಈ ವರ್ಷದ ಎರಡನೇ ಕಂತನ್ನು ಆಗಸ್ಟ್ ತಿಂಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗಿತ್ತು. ಹಾಗಾಗಿ ಡಿಸೆಂಬರ್ ತಿಂಗಳ 15 ರೊಳಗೆ ರೈತರ ಖಾತೆಗೆ ಜಮೆ ಮಾಡುವ ಸಾಧ್ಯತೆಯಿದೆ.