Best Horticulture Farmer Award ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯಲ್ಲಿ ಡಿಸೆಂಬರ್ 22 ರಿಂದ 24 ರವರೆಗೆ ನಡೆಯುವ ತೋಟಗಾರಿಕೆ ಮೇಳದಲ್ಲಿ ಶ್ರೇಷ್ಠ ತೋಟಗಾರಿಕೆ ರೈತರಿಗೆ ನಗದು ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
Best Horticulture Farmer Award ಶ್ರೇಷ್ಠ ರೈತ /ರೈತ ಮಹಿಳೆ ಪ್ರಶಸ್ತಿ
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಿಗೆ ಪ್ರತಿ ಜಿಲ್ಲೆಗೆ ಒಬ್ಬರಂತೆ ಶ್ರೇಷ್ಠ ತೋಟಗಾರಿಕೆ ರೈತ/ರೈತ ಮಹಿಳೆಯರನ್ನು ಆಯ್ಕೆ ಮಾಡಲಾಗುವುದು. ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ರೈತ/ರೈತ ಮಹಿಳೆಯರು ಅರ್ಜಿ ನಮೂನೆಯನ್ನು ತೋಟಗಾರಿಕೆ ವಿಶ್ವವಿದ್ಯಾಲಯದ ವೆಬ್ ಸೈಟ್
www.uhsbagalkot.karnataka.gov.in ಮೂಲಕ
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 10 ರೊಳಗಾಗಿ ಆಯಾ ಜಿಲ್ಲೆಗಳ ಅರ್ಜಿದಾರರು ಸಂಬಂಧಪಟ್ಟ ತೋಟಗಾರಿಕೆ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಸಲ್ಲಿಸಲು ಕೋರಲಾಗಿದೆ.
ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ರೈತರು ಡೀನ್, ತೋಟಗಾರಿಕೆ ಮಹಾವಿದ್ಯಾಲಯ ಹಳ್ಳದಕೇರಿ ಫಾರ್ಮ, ಹೈದ್ರಾಬಾದ್ ರಸ್ತೆ, ಬೀದರ್. 585 403 ಇಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಫೋನ್ ನಂಬರ್. 08482-225792, 9480696385ಗೆ ಕರೆ ಮಾಡಬಹುದು.
ವಿಜಯಪುರ ಜಿಲ್ಲೆಯ ರೈತರು ಮುಖ್ಯಸ್ಥರು, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ತಿಡಗುಂದಿ 586119 ಇಲ್ಲಿ ಅರ್ಜಿ ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9480696390 ಗೆ ಕರೆ ಮಾಡಬಹುದು.ಬಾಗಲಕೋಟೆ ಜಿಲ್ಲೆಯ ರೈತರು ಡೀನ್, ತೋಟಗಾರಿಕೆ ಮಾಹವಿದ್ಯಾಲಯ ಉದ್ಯಾನಗಿರಿ, ಬಾಗಲಕೋಟೆ 587103 ರಲ್ಲಿ ಅರ್ಜಿ ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08354 230601, ಮೊ. 9449872876 ಗೆ ಕರೆ ಮಾಡಬಹುದು.
ಇದನ್ನೂ ಓದಿ ಮೊಬೈಲ್ ನಲ್ಲೇ ಜಮೀನಿನ ಸ್ಕೆಚ್ ನಕ್ಷೆ ಹೀಗೆ ಪಡೆಯಿರಿ
ಬೆಳಗಾವಿ ಜಿಲ್ಲೆಯ ರೈತರು ಡೀನ್, ಕಿತ್ತೂರ ರಾಣಿ ಚೆನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಅರಭಾವಿ 591310, ತಾ. ಗೋಕಾಕ, ಜಿಲ್ಲೆ ಬೆಳಗಾವಿ ರಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08332 220701 ಮೊ. 9449872860ಗೆ ಸಂಪರ್ಕಿಸಲು ಕೋರಲಾಗಿದೆ.
ಇನ್ನು ಇತರ ಜಿಲ್ಲೆಗಳ ರೈತರು ಈ ಕೆಳಗಡೆಯಿರುವ ಫೈಲ್ ನಲ್ಲಿರುವ ವಿಳಾಸದಲ್ಲಿ ಅರ್ಜಿ ಪಡೆದು ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಸಂಬಂಧಿಸಿದ ನಂಬರಿಗೆ ಕರೆ ಮಾಡಿ ಸಂಪರ್ಕಿಸಬಹುದು.
ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ನಿಬಂಧನೆಗಳು
ಅರ್ಜಿದಾರರು ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದ ಯಾವುದೇ ಕೃಷಿ/ತೋಟಗಾರಿಕೆ/ ಪಶುಸಂಗೋಪನೆ ಮತ್ತು ಐಸಿಎಆರ್ ಪ್ರಶಸ್ತಿಗಳನ್ನು ತಮ್ಮ ಹಾಗೂ ತಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಪಡೆದಿರಬಾರದು.
ಅರ್ಜಿದಾರರು ನಿಗದಿತ ಅರ್ಜಿ ನಮೂನೆಯಲ್ಲ ಸಂಪೂರ್ಣವಾಗಿ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ನೀಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಆಯ್ಕೆ ಸಮಿತಿಯು ಪರಿಶೀಲಿಸಿ ಕಿರುಪಟ್ಟಿ ಮಾಡಿದ ಮೂರು ಕ್ಷೇತ್ರಗಳಿಗೆ ಮಾತ್ರ ಕ್ಷೇತ್ರವೀಕ್ಷಣೆ ಮಾಡಲಾಗುವುದು. ಆಯ್ಕೆಯು ವಿಶ್ವವಿದ್ಯಾಲಯದ ನಿಯಮ ಹಾಗೂ ಆಯ್ಕೆ ಸಮಿತಿಯ ನಿರ್ಧಾರಕ್ಕೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಡಾ. ಎಸ್.ಐ ಅಥಣಿ, ವಿಸ್ತರಣಾ ನಿರ್ದೇಶಕರು, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟ ಮೊ. 9480696381/ 08354 230101, ಡಾ. ಕಾಂದೇಶ ಜಿ. ಪ್ರಾಧ್ಯಾಪಕರು ಮತ್ತು ತಾಂತ್ರಿಕ ಅಧಿಕಾರಿಗಳು ಇವರ ಮೊ. 63640 64901, ಡಾ. ಶ್ರೀಪಾದ ವಿ. ಸಹಾಯಕ ಪ್ರಾಧ್ಯಾಪಕರು ಮೊ. 94483 44103ಗೆ ಸಂಪರ್ಕಿಸಲು ಕೋರಲಾಗಿದೆ.