rain alert in 16 district ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕಳೆದ 10 ದಿನಗಳಿಂದ ಚುರುಕುಗೊಂಡ ಮಳೆ ಮತ್ತೆರಡು ದಿನ ಮುಂದುವರೆಯಲಿದೆ. ಅಕ್ಟೋಬರ್ 16 ಮತ್ತು 17 ರಂದು ಎರಡು ದಿನಗಳ ಕಾಲ ಗುಡುಗು ಸಿಡಿಲು ಸಹಿತ ಧಾರಾಕಾ ಮಳೆಯಾಗುವ ಸಾಧ್ಯತೆಯಿರುವುದರಿಂದ ಎರಡು ದಿನಗಳ ಕಾಲ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
rain alert in 16 district ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
ರಾಜ್ಯದ ಉತ್ತರಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ರಾಮನಗರ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಯಾವುದೇ ಮುನ್ಸೂಚನೆಯಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪಾಂಡಿಚೇರಿ, ಒಡಿಸ್ಸಾ, ಅಂಡಮಾನ್ ನಿಕೋಬಾರ್ ರಾಜ್ಯಗಳಲ್ಲಿಯೂ ಅಕ್ಟೋಬರ್ 16 ರಂದು ಮಳೆಯಾಗುವ ಸಾಧ್ಯತೆಯಿದೆ.
Read this: ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಹಿಮಾಚಲ ಪ್ರದೇಶ ಮತ್ತು ಉತ್ತರಖಂಡ ಮತ್ತು ಉತ್ತರ ಪ್ರದೇಶದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಒಡಿಸ್ಸಾದಲ್ಲಿಯೂ ಮಳೆಯಾಗುವ ಸಾಧ್ಯತೆಯಿರುವುದರಿಂದ ಬಂಗಾಳ ಮಧ್ಯ, ಉತ್ತರ ಕೊಲ್ಲಿಯಲ್ಲಿ ಮತ್ತು ಪಶ್ಚಿಮ ಬಂಗಾಳ ಕರಾವಳಿಯ ಉದ್ದಕ್ಕೂ ಗಂಟೆಗೆ 40-50 ಮೀಟರ್ ಗಾಳಿಯ ವೇಗ ಇರುವುದರಿಂದ ಮೀನುಗಾರರು ಈ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ನಿಮ್ಮೂರಿನಲ್ಲಿ ಮಳೆಯಾಗುವ ಮಾಹಿತಿ ಬೇಕೆ?
ರೈತರು ಮನೆಯಲ್ಲಿಯೇ ಕುಳಿತು ತಮ್ಮೂರಿನಲ್ಲಿ ಮಳೆಯಾಗುತ್ತದೆಯೋ ಇಲ್ಲವೋ ಎಂಬುದನ್ನು ಒಂದು ಕರೆ ಮಾಡಿ ತಿಳಿದುಕೊಳ್ಳಬಹುದು. ಹೌದು, ವರುಣಮಿತ್ರ ನಂಬರಿಗೆ ಕರೆ ಮಾಡಿದರೆ ಸಾಕು, ಕ್ಷಣಮಾತ್ರದಲ್ಲಿ ರೈತರು ಮಳೆಯ ಮಾಹಿತಿ ಪಡೆಯಬಹುದು.
ರೈತರು 92433 45433 ಗೆ ಕರೆ ಮಾಡಿದರೆ ಸಾಕು, ತಮ್ಮೂರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ. ಮಳೆಯ ಪ್ರಮಾಣ ಎಷ್ಟಿರುತ್ತದೆ ಎಂಬ ಮಾಹಿತಿಗಳನ್ನು ಪಡೆಯಬಹುದು.
ರಾಜ್ಯದಲ್ಲಿ ಮುಂದಿನ ಐದು ದಿನ ಮಳೆಯ ಮಾಹಿತಿ ಪಡೆಯಲು ಮೇಘದೂತ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ
ರೈತರು ಮುಂದಿನ ಐದು ದಿನಗಳ ಕಾಲ ಮಳೆ ಸುರಿಯುವ ಕುರಿತು ಮಾಹಿತಿ ಪಡೆಯಲು ಮೇಘದೂತು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು.ಈ ಆ್ಯಪ್ ಸಹಾಯದಿಂದ ರೈತರು ಮನೆಯಲ್ಲಿಯೇ ಕುಳಿತು ಮುಂದಿನ ಐದು ದಿನಗಳ ಕಾಲ ಮಳೆ ಹೇಗಿರುತ್ತದೆ ಎಂಬ ಮಾಹಿತಿಯನ್ನುಪಡೆದುಕೊಳ್ಳಬಹುದು. ಹೌದು, ಇದಕ್ಕಾಗಿ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಯಾವುದೇ ಸಮಯದಲ್ಲಿ ರೈತರು ಕರೆ ಮಾಡಬಹುದು.