Agriculture fair at GKVK Bangalore 11 ರಿಂದ 14ರವರೆಗೆ ಕೃಷಿ ಮೇಳ

Written by By: janajagran

Updated on:

Agriculture fair at GKVK Bangalore ಬೆಂಗಳೂರಿನಲ್ಲಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ (ಜಿಕೆವಿಕೆ) ಇದೇ ನವೆಂಬರ್ 11 ರಿಂದ 14 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ ಆಯೋಜಿಸಲಾಗಿದೆ. ಈ ಕೃಷಿ ಮೇಳವನ್ನು ಸರ್ಕಾರದ ವಿವಿಧ ಅಭಿವೃದ್ಧಿ ಇಲಾಖೆಗಳ ಸಹಕಾರದೊಂದಿಗೆ ಕೃಷಿ ಮೇಳವನ್ನು ಕೋವಿಡ್ ನಿಯಮಗಳ ಅನುಸಾರ ನಾಲ್ಕು ದಿನಗಳ ಕಾಲ ಆಯೋಜಿಸಲಾಗಿದೆ.

Agriculture fair at GKVK Bangalore  ಕೃಷಿ ಮೇಳ ಹೇಗೆ ವೀಕ್ಷಿಸಬೇಕು?

ಭೌತಿಕವಾಗಿ ಮತ್ತು ಸಾಮಾಜಿಕ ಜಾಲತಾಣಗಳಲ್ಲೂ ಕೃಷಿ ಮೇಳವನ್ನು ವೀಕ್ಷಿಸಬಹುದು. ಇದೇ ಸಂದರ್ಭದಲ್ಲಿ ಕೃಷಿ  ಮೇಳದಲ್ಲಿ ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು ಹೊರತಂದಿರುವ ನೂತನ 10 ತಳಿಗಳು ಮತ್ತು 28 ಕೃಷಿ ತಂತ್ರಜ್ಞಾನಗಳನ್ನು ಬಿಡುಗಡೆಗೊಳಿಸಲಾಗುತ್ತದೆ.  ಕೃಷಿ ಮೇಳದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಿಂದ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಗುವುದು.

ಕೃಷಿ ವಸ್ತು ಪ್ರದರ್ಶನದಲ್ಲಿ ಆಧುನಿಕ ಕೃಷಿ ತಂತ್ರಜ್ಞಾನಗಳು, ಕೃಷಿ ಇಂಜಿನಿಯರಿಂಗ್ ಮತ್ತು ಕೃಷಿ ಪರಿಕರಗಳ ಸುಮಾರು 250 ಮಳಿಗೆಗಳಿರುತ್ತವೆ.  ರೈತರು ತಮ್ಮ ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ಸಲಹೆಯನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ : ನಿಮ್ಮ ಜಮೀನಿಗೆ ಸಂಬಂಧಿಸಿದ ಈ ದಾಖಲೆಗಳು Mobileನಲ್ಲಿ ಚೆಕ್ ಮಾಡಿ

ಜಿಕೆವಿಕೆಯ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣಕ್ಕೆ ತಲುಪಲು ಬಸ್ಸುಗಳಲ್ಲಿ ಉಚಿತ ಸಾರಿಗೆ ವ್ಯವಸ್ಥೆ, ಪ್ರವೇಶ ಉಚಿತವಾಗಿರುತ್ತದೆ ಎಂದು ತಿಳಿಸಲಾಗಿದೆ. ರೈತ ಬಾಂಧವರು ಮತ್ತು ಸಾರ್ವಜನಿಕರು ಕೃಷಿ ಮೇಳದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆಯಿಂದ ಕೃಷಿ ಮೇಳ ಆರಂಭ- ಈ ಐದು ಹೊಸ ತಳಿಗಳ ಬಿಡುಗಡೆ

ಆಹಾರ ಆರೋಗ್ಯ ಆದಾಯಕ್ಕಾಗಿ ಸಿರಿಧಾನ್ಯಗಳು ಘೋಷವಾಕ್ಯದಡಿ ನವೆಂಬರ್ 17 ರಿಂದ 20 ರವರೆಗೆ  ನಾಲ್ಕು ದಿನಗಳ ಕಾಲ ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ.

ಹೌದು, ಬೆಂಗಳೂರಿನ ಹೆಬ್ಬಾಳದ ಜಿಕೆವಿಕೆಯಲ್ಲಿ ನವೆಂಬರ್ 17 ರಿಂದ220 ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಐದು ಹೊಸ ತಳಿಗಳನ್ನು ಬಿಡುಗಡೆ ಮಾಡಲಾಗುವುದು.  ಇದರೊಂದಿಗೆ ಕೃಷಿ ಸಾಧಕರಿಗೆ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ವಿ. ಸುರೇಶ ತಿಳಿಸಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೃಷಿ ಮೇಳದಲ್ಲಿ ಕ್ಷೇತ್ರಸಂದರ್ಶನ, ತಜ್ಞರೊಂದಿಗೆ ಚರ್ಚೆ, ವಸ್ತು ಪ್ರದರ್ಶನಗಳನ್ನು ಏರ್ಪಡಿಸಲಾಗುವುದು. ವಸ್ತು ಪ್ರದರ್ಶನದಲ್ಲಿ 625 ಮಳಿಗೆಗಳು ಇರಲಿವೆ ಎಂದು ವಿವರಿಸಿದರು.

ಅಧಿಕ ಇಳುವರಿಯ ತಳಿ ಬಿಡುಗಡೆ

ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ನೀಡುವ ಎಂಎಲ್ -322 ರಾಗಿ ತಳಿ, ಜಿಪಿಯುಎಲ್ -11 ಸಾಮೆ, ಜಿಪಿಯುಪಿ -32 ಬರಗು, ಕೆಬಿಎಸ್ಎಚ್ -85 ಸೂರ್ಯಕಾಂತಿ ಹಾಗೂ ಜಿಕೆವಿಕೆ ಕೆಂಪು ಹಲಸಿನ ನೂತನ ತಳಿಗಳನ್ನು ಲೋಕಾರ್ಪಣೆಗೊಳಿಸಲಾಗುವುದು. ಇಧೇ ಸಂದರ್ಭದಲ್ಲಿ ಕೃಷಿ ಸಾಧಕರಿಗೆ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದರು.

Leave a Comment