Application invited for crop damage ಬೆಳೆ ನಷ್ಟವಾದ ರೈತರ ಮಾಹಿತಿ ಪರಿಹಾರ ತಂತ್ರಾಂಶದಲ್ಲಿ ಅಪ್ಲೋಡ್ ಆದ 24 ಗಂಟೆಯಲ್ಲಿಯೇ ರೈತರಿಗೆ ಬೆಳೆ ನಷ್ಟ ಪರಿಹಾರ ಹಣ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ರೈತರಿಂದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯೂ ಆರಂಭವಾಗಿದೆ. ಮಳೆಯಿಂದ ಬೆಳೆ ಹಾನಿಯಾದ ರೈತರೂ ಕೂಡಲೇ ತಮ್ಮ ಹತ್ತಿರ ಗ್ರಾಮ ಪಂಚಾಯತಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಕಳೆದ ವರ್ಷದಂತೆ ಈ ವರ್ಷವೂ ಸಹ ಅತೀ ಮಳೆಯಿಂದಾಗಿ ರೈತರ ಅಪಾರ ಬೆಳೆ ಹಾನಿಯಾಗಿದೆ. ಕೆಲವು ರೈತರ ಬೆಳೆ ಮಳೆಯ ನೀರನಲ್ಲಿಯೇ ಕೊಳೆತುಹೋಗಿದ್ದರೆ ಇನ್ನೂ ಕೆಲವು ರೈತರ ಬೆಳೆ ರಾಶಿ ಮಾಡುವ ಸಂದರ್ಭದಲ್ಲಿ ಮಳೆಗೆ ಹಾನಿಯಾಗಿದೆ. ಹಾಗಾಗಿ ರೈತರು ಅರ್ಜಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು.
ಬೆಳೆ ನಷ್ಚವಾದ ಪ್ರದೇಶಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳಉ ಜಂಟಿ ಸಮೀಕ್ಷೆ ನಡೆಸಿ ಸ್ಥಳದಿಂದಲೇ ವಿವರಗಳನ್ನು ಅಪ್ಲೋಡ್ ಮಾಡಲು ಮುಖ್ಯಮಂತ್ರಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಮೀಕ್ಷೆಗೆ ನಿಮ್ಮ ಗ್ರಾಮಕ್ಕೆ ಅಧಿಕಾರಿಗಳು ಬರದಿದ್ದರೆ ರೈತರು ಖುದ್ದಾಗಿ ಅರ್ಜಿ ಸಲ್ಲಿಸಬಹುದು.
Application invited for crop damage ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಮಳೆಯಿಂದಾಗಿ ಬೆಳೆ ಹಾನಿಯಾದರೆ ರೈತರು ಒಂದು ಅರ್ಜಿ ಬರೆಯಬೇಕು. ಅರ್ಜಿಯಲ್ಲಿ ಹೆಸರು, ವಿಳಾಸ, ಸರ್ವೆ ನಂಬರ್, ಜಮೀನಿನ ವಿಸ್ತೀರ್ಣ, ಬೆಳೆ ವಿವರ, ಬೆಳೆ ಹಾನಿಯಾದ ವಿಸ್ತೀರ್ಣ, ರೈತರ ವರ್ಗ ಅಂದರೆ ಸಣ್ಣ, ಅತೀ ಸಣ್ಣ ರೈತರು ಎಂದು ನಮೂದಿಸಬೇಕು. ಆಧಾರ್ ಕಾರ್ಡ್ ಝರಾಕ್ಸ್, ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್, ಬ್ಯಾಂಕಿನ ಹೆಸರು, ಬ್ಯಾಂಕ್ ಐಎಫ್ಎಸ್ಐ ಕೋಡ್, ಬ್ಯಾಂಕ್ ಬ್ರ್ಯಾಂಚ್, ಮೊಬೈಲ್ ಸಂಖ್ಯೆ ನಮೂದಿಸಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ ನಿಮ್ಮ ಹೆಸರಿಗೆ ಯಂತ್ರೋಪಕರಣ ಪಡೆಯಲಾಗಿದೆಯೇ? ಚೆಕ್ ಮಾಡಿ
ಅರ್ಜಿ ಸ್ವೀಕರಿಸಿದ ಅಧಿಕಾರಿಗಳು ರೈತರ ಎಲ್ಲಾ ವಿವರಗಳನ್ನು ಪರಿಶೀಲಿಸಿ ಪರಿಹಾರ ತಂತ್ರಾಂಶದಲ್ಲಿ ನಮೂದಿಸುತ್ತಾರೆ. ನಂತರ ರೈತರಖಾತೆಗೆ ಪರಿಹಾರ ಹಣ ಜಮೆ ಮಾಡಲಾಗುವುದು.
ಪರಿಹಾರ ಹಣ ಜಮೆಯ ಸ್ಟೇಟಸ್ ಸಹ ರೈತರು ಮೊಬೈಲ್ ನಲ್ಲಿಯೇ ನೋಡಿಕೊಳ್ಳಬಹುದು. ಕಳೆದ ವರ್ಷ ಪರಿಹಾರ ಹಣ ಎಷ್ಟು ಜಮೆಯಾಗಿದೆ ಈ ವರ್ಷ ಜಮೆಯಾಗುವ ಸ್ಟೇಟಸ್ ಸಹ ನೋಡಿಕೊಳ್ಳಬಹುದು.
ಪರಿಹಾರ ಸ್ಟೇಟಸ್ ನೋಡಲು ಈ https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸರ್ಕಾರದ ಪರಿಹಾರ ವೆಬ್ ಪೇಜ್ ಓಪನ್ ಆಗುತ್ತದೆ ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ Select calamity type ನಲ್ಲಿ Flood ಆಯ್ಕೆ ಮಾಡಿಕೊಳ್ಳಬೇಕು. ಈ ಕಳೆದ ವರ್ಷ ಸ್ಟೇಟಸ್ ನೋಡಲು 2020-21 ಆಯ್ಕೆ ಮಾಡಿಕೊಳ್ಳಬೇಕು. ಈ ವರ್ಷದ ಸ್ಟೇಟಸ್ ನೋಡಲು 2021-22 ಆಯ್ಕೆ ಮಾಡಿಕೊಳ್ಳಬೇಕು. ಕೆಳಗಡೆ ಆಧಾರ್ ಸಂಖ್ಯೆ ನಮೂದಿಸಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು ಪರಿಹಾರ ಸ್ಟೇಟಸ್ ಮೊಬೈಲ್ ನಲ್ಲಿಯೇ ನೋಡಿಕೊಳ್ಳಬಹುದು.